Homeಅಂತರಾಷ್ಟ್ರೀಯ10 ತಿಂಗಳಲ್ಲಿ 420,000 ಸೊಮಾಲಿಯನ್ನರ  ಸ್ಥಳಾಂತರ: ಯುಎನ್ ಹೆಚ್‌ಸಿಆರ್

10 ತಿಂಗಳಲ್ಲಿ 420,000 ಸೊಮಾಲಿಯನ್ನರ  ಸ್ಥಳಾಂತರ: ಯುಎನ್ ಹೆಚ್‌ಸಿಆರ್

- Advertisement -
- Advertisement -

ಮೊಗದಿಶು: (ಕ್ಸಿನ್ಹುವಾ) ಕಳೆದ 10 ತಿಂಗಳಲ್ಲಿ ಸೊಮಾಲಿಯಾದಲ್ಲಿ 427,000 ಕ್ಕೂ ಹೆಚ್ಚು ಜನರನ್ನು ಆಂತರಿಕವಾಗಿ ಸ್ಥಳಾಂತರಗೊಳಿಸಲಾಗಿದೆ ಎಂದು ಯುಎನ್ ನಿರಾಶ್ರಿತರ ಸಂಸ್ಥೆ (UNHCR) ಮಂಗಳವಾರ ತಿಳಿಸಿದೆ.

ದೇಶದಲ್ಲಿನ ಸಂಘರ್ಷ ಮತ್ತು ಅಭದ್ರತೆಯ ಕಾರಣದಿಂದಾಗಿ ಆಂತರಿಕ ಸ್ಥಳಾಂತರದ ಪ್ರಮಾಣವು ಅಕ್ಟೋಬರ್‌ನಲ್ಲಿ ಗಣನೀಯವಾಗಿ ಹೆಚ್ಚಾಗಿದೆ. ದಕ್ಷಿಣ ಸೊಮಾಲಿಯಾದ ಗೆಡೋ, ಬೇ ಮತ್ತು ಬನಾದಿರ್ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ಜನರು ಸ್ಥಳಾಂತರಗೊಂಡ ಪ್ರದೇಶಗಳಾಗಿ ದಾಖಲಾಗಿವೆ ಎಂದು ಯುಎನ್ ಹೆಚ್ ಸಿ ಆರ್ ನೇತೃತ್ವದ ರಕ್ಷಣೆ ಮತ್ತು ಪರಿಹಾರಗಳ ಮಾನಿಟರಿಂಗ್ ನೆಟ್‌ವರ್ಕ್ (PSMN) ಹೇಳಿದೆ.

ಕಳೆದ 17 ವರ್ಷಗಳಿಂದ ಸ್ಥಳಾಂತರದ ಪ್ರವೃತ್ತಿಯನ್ನು ಪತ್ತೆಹಚ್ಚುತ್ತಿರುವ PSMN, ಕಳೆದ ಅಕ್ಟೋಬರ್‌ನಲ್ಲಿ ಸುಮಾರು 66,000 ಸ್ಥಳಾಂತರಗಳನ್ನು ದಾಖಲಿಸಿದೆ. ಅದರಲ್ಲಿ 50,000 ಜನರ ಸ್ಥಳಾಂತರಕ್ಕೆ ಸಂಘರ್ಷ ಮತ್ತು ಅಭದ್ರತೆ ಕಾರಣವಾಗಿದೆ. 3,000 ಜನರ ಸ್ಥಳಾಂತರಕ್ಕೆ  ಬರ ಮತ್ತು ಪ್ರವಾಹಗಳು ಕಾರಣವಾಗಿವೆ ಎಂದು ಸೊಮಾಲಿಯಾದ ರಾಜಧಾನಿ ಮೊಗಾದಿಶುನಲ್ಲಿ ಯುಎನ್ ಹೆಚ್ ಸಿಆರ್ ನಿಂದ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ…ಯಾವುದೇ ಕಾರಣಕ್ಕೂ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಆಹಾರ, ಆಶ್ರಯ, ನೀರು, ಜೀವನೋಪಾಯಕ್ಕೆ ಸಹಕಾರ ಮತ್ತು ಆರೋಗ್ಯ ರಕ್ಷಣೆಯು ಸ್ಥಳಾಂತರಗೊಂಡ ಕುಟುಂಬಗಳ ಪ್ರಮುಖ ಅಗತ್ಯಗಳಾಗಿವೆ ಎಂದು ಯುಎನ್ ಹೆಚ್ ಸಿ ಆರ್ ಹೇಳಿದೆ.

ಅಧಿಕಾರಿಗಳು ಮತ್ತು ಪಾಲುದಾರರ ಸಹಯೋಗದೊಂದಿಗೆ, ಯುಎನ್ ನಿರಾಶ್ರಿತರ ಏಜೆನ್ಸಿಯು ಆಂತರಿಕವಾಗಿ ಸ್ಥಳಾಂತರಗೊಂಡ  ದುರ್ಬಲ ವ್ಯಕ್ತಿಗಳಿಗೆ (IDPs) ಮತ್ತು ಸಂಘರ್ಷ, ಅಭದ್ರತೆ ಮತ್ತು ಹವಾಮಾನ ಬದಲಾವಣೆಯಿಂದಾಗಿ ಬಾಧಿತ ಸಮುದಾಯಗಳಿಗೆ ಆದ್ಯತೆ ಮೇರೆಗಿನ ರಕ್ಷಣೆಯ ಸಹಾಯವನ್ನು ಒದಗಿಸಲಾಗುತ್ತಿದೆ ಎಂದು ಅದು ಹೇಳಿದೆ.

ಸೊಮಾಲೀಯಾ ಸರ್ಕಾರ ಮತ್ತು ಇತರ ಪಾಲುದಾರರ ಸಹಯೋಗದೊಂದಿಗೆ ಸ್ಥಳಾಂತರಗೊಂಡವರಿಗೆ ಉಪಯೋಗಕ್ಕೆ ಬರುವ ಪರಿಹಾರಗಳನ್ನು ಕಂಡುಹಿಡಿಯುವುದು ಅದರ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ…ದಲಿತ್ ವಾಯ್ಸ್ ಸ್ಥಾಪಕ ಸಂಪಾದಕ ವಿ.ಟಿ.ರಾಜಶೇಖರ ಶೆಟ್ಟಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...