Homeಮುಖಪುಟಗಡಿಯಲ್ಲಿನ ರೈತರ ಮೇಲೆ ಹಲ್ಲೆ: ಪೊಲೀಸರಿಗೆ ತಲ್ವಾರ್ ಬೀಸಿದವ ಸೇರಿ 44 ಮಂದಿ ಬಂಧನ

ಗಡಿಯಲ್ಲಿನ ರೈತರ ಮೇಲೆ ಹಲ್ಲೆ: ಪೊಲೀಸರಿಗೆ ತಲ್ವಾರ್ ಬೀಸಿದವ ಸೇರಿ 44 ಮಂದಿ ಬಂಧನ

- Advertisement -
- Advertisement -

ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ಪರೇಡ್‌ ನಂತರ ಶುಕ್ರವಾರ ದೆಹಲಿಯ ಸಿಂಘು ಗಡಿಯಲ್ಲಿ ಉದ್ವಿಗ್ನತೆ ಆರಂಭವಾಗಿತ್ತು. ಸ್ಥಳೀಯರು ಎಂದು ಹೇಳಿಕೊಂಡು ಕೆಲವು ಅನುಮಾನಾಸ್ಪದ ವ್ಯಕ್ತಿಗಳು ಆಯುಧ ಹಿಡಿದು ರೈತರು ಮತ್ತು ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಈ ಅಹಿತಕರ ಘಟನೆಯಲ್ಲಿ ಭಾಗಿಯಾಗಿದ್ದರೆಂದು 44 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ರೈತರು ರಾಷ್ಟ್ರಧ್ವಜವನ್ನು ಅವಮಾನಿಸಿದ್ದಾರೆ ಎಂದು ಆಪಾದಿಸಿ, ಪ್ರತಿಭಟನಾ ನಿರತ ರೈತರ ಮೇಲೆ ಗುಂಪೊಂದು ಹಲ್ಲೆ ನಡೆಸಿತು. ಈ ವೇಳೆ ಕಲ್ಲು ತೂರಾಟ, ಘರ್ಷಣೆ ನಡೆದು ಹಲವು ಮಂದಿ ಗಾಯಗೊಂಡಿದ್ದರು.

ಇದನ್ನೂ ಓದಿ: ಮಧ್ಯರಾತ್ರಿಯ ಮಾಸ್ಟರ್‌ಸ್ಟ್ರೋಕ್: ಸುಳ್ಳು, ಸಂಚು, ದಮನಗಳೇ ತಿರುಗುಬಾಣವಾದ ಗಳಿಗೆ

ಗಾಯಾಗೊಂಡವರಲ್ಲಿ ಅಲೀಪುರ ಠಾಣಾಧಿಕಾರಿ ಪ್ರದೀಪ್ ಪಾಲಿವಾಲ್ ಸೇರಿದ್ದು, ಗಲಭೆಕೋರರಲ್ಲಿನ ಒಬ್ಬ ಖಡ್ಗ ಬೀಸಿದಾಗ ಪ್ರದೀಪ್ ತೀವ್ರವಾಗಿ ಗಾಯಗೊಂಡಿದ್ದರು. ಇವರ ಮೇಲೆ ಖಡ್ಗದಿಂದ ಹಲ್ಲೆ ನಡೆಸಿದ ಆರೋಪದಲ್ಲಿ ನವಾನ್‌ಶಹರ್ ನಿವಾಸಿ ರಂಜೀತ್ ಸಿಂಗ್ ಎಂಬಾತ ಸೇರಿದಂತೆ 44 ಮಂದಿಯನ್ನು ಬಂಧಿಸಲಾಗಿದೆ.

“ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಶುಕ್ರವಾರ ಮಧ್ಯಾಹ್ನದ ವೇಳೆಗೆ ಫಲಕ ಹಾಗೂ ಧ್ವಜಗಳನ್ನು ಹಿಡಿದಿದ್ದ 200ಕ್ಕೂ ಹೆಚ್ಚು ಮಂದಿಯ ಗುಂಪೊಂದು ಆಗಮಿಸಿ, ರೈತರ ಪ್ರತಿಭಟನೆಯಿಂದಾಗಿ ತಮಗೆ ಆರ್ಥಿಕ ಸಂಕಷ್ಟ ತಲೆದೋರಿದೆ. ತಕ್ಷಣ ರೈತರು ಜಾಗ ಖಾಲಿ ಮಾಡಬೇಕು” ಎಂದು ಆಗ್ರಹಿಸಿದರು ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರೈತ ಹೋರಾಟ ಮುಗಿಸಲು ಕೇಂದ್ರದ ಸಂಚು: ಕ್ರೊನೊಲಜಿ ಹೀಗಿದೆ

ನಂತರ ಈ ಗುಂಪು ಪ್ರತಿಭಟನಾ ಸ್ಥಳಕ್ಕೆ ನುಗ್ಗಿ ರೈತರ ಟೆಂಟ್‌ಗಳನ್ನು ಕಿತ್ತೆಸೆದು, ರೈತರ ವಸ್ತುಗಳನ್ನು ಗುಂಪು ಹಾಳುಗೆಡವಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.

ಈ ಘಟನೆಯ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಆಯುಧ ಹಿಡಿದ ಕೆಲವರು ಬಂದು ರೈತರ ಮೇಲೆ ದಾಳಿ ಮಾಡಿ, ಅವರ ವಸ್ತುಗಳನ್ನು ಹಾಳುಗೆಡವುತ್ತಿದ್ದಾಗ ಪೊಲೀಸರು ಕೈಕಟ್ಟಿ ನಿಂತಿದ್ದರು ಎಂದು ಹಲವರು ಆರೋಪಿಸಿದ್ದಾರೆ.

ಇನ್ನೂ ಕೆಲವರು ಇದು ಸರ್ಕಾರದ ಸಂಚು ಎಂದು ದೂರಿದ್ದಾರೆ. ಆದರೆ ರೈತರ ಸಂಘಟನೆಗಳು ಇದಾವುದಕ್ಕೂ ಹೆದರುವುದಿಲ್ಲ ಎಂದು ಮತ್ತೊಮ್ಮೆ ಘಂಟಾಘೊಷವಾಗಿ ಹೇಳಿದ್ದಾರೆ.

ನುಗ್ಗಿದ ಈ ಗುಂಪು ಯಾರದು?

ಇಂಥದ್ದೇ ಸಂಘಟನೆಗೆ ಸೇರಿದ ಗುಂಪೆಂದು ತಕ್ಷಣಕ್ಕೆ ಹೇಳಲು ಸಾಧ್ಯವಿಲ್ಲವಾದರೂ, ನಿನ್ನೆ ಸ್ಥಳೀಯರ ಹೆಸರಲ್ಲಿ ಒಂದು ಸಣ್ಣ ಗುಂಪು ಪ್ರತಿಭಟನೆ ಮಾಡಿತ್ತು. ಬಹುಪಾಲು ಮಾಧ್ಯಮಗಳು ಸ್ಥಳೀಯರಿಂದ ಪ್ರತಿಭಟನೆ ಎಂದೇ ಬಿಂಬಿಸಿದ್ದವು.

ಅದರೆ, ಅಲ್ಟ್ ನ್ಯೂಸ್ ನಡೆಸಿದ ಫ್ಯಾಕ್ಟ್ ಚೆಕ್‌ನಲ್ಲಿ, ಹಿಂದೂ-ಸೇನಾ ಸಂಘಟನ್‌ನವರು ಆ ಪ್ರತಿಭಟನೆ ನಡೆಸಿದ್ದರು. ಅದರಲ್ಲಿ ಕೆಲವು ಸ್ಥಳಿಯರನ್ನು ಸೇರಿಸಿಕೊಂಡಿದ್ದರು. ತಮ್ಮದೇ ಸಂಘಟನೆ ಪ್ರತಿಭಟನೆ ನಡೆಸಿದೆ ಎಂದು ಹಿಂದೂ-ಸೇನಾ ಸಂಘಟಣ್ ಅಧ್ಯಕ್ಷ ಅಲ್ಟ್ ನ್ಯೂಸ್ ಎದುರು ಒಪ್ಪಿಕೊಂಡಿದ್ದರು.


ಇದನ್ನೂ ಓದಿ: ‘ಜ. 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ’: ಬಿಜೆಪಿ ತೊರೆದ ಹಿರಿಯ ನಾಯಕ ರಾಂಪಾಲ್ ಮಜ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...