Homeಮುಖಪುಟಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ...

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಿದ್ದಾರೆ: ರಾಜ್ಯಪಾಲರ ಭೇಟಿ ಬಳಿಕ ಬಿಜೆಪಿ ನಾಯಕ ಹೇಳಿಕೆ

- Advertisement -
- Advertisement -

ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು ನಲವತ್ತ ನಾಲ್ಕು ಶಾಸಕರು ಸಿದ್ಧರಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ (ಮೇ.28) ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಹೇಳಿದ್ದಾರೆ.

ರಾಧೇಶ್ಯಾಮ್ ಸಿಂಗ್, ಇತರ ಒಂಬತ್ತು ಶಾಸಕರೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

“ಜನರ ಆಶಯದಂತೆ 44 ಶಾಸಕರು ಸರ್ಕಾರ ರಚಿಸಲು ಸಿದ್ಧರಿದ್ದಾರೆ. ನಾವು ಇದನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ. ಈ ಸಮಸ್ಯೆಗೆ ಯಾವ ಪರಿಹಾರಗಳಿವೆ ಎಂಬುದರ ಕುರಿತು ನಾವು ಚರ್ಚಿಸಿದ್ದೇವೆ” ಎಂದು ಸಿಂಗ್ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.

“ನಾವು ಹೇಳಿದ್ದನ್ನು ರಾಜ್ಯಪಾಲರು ಕೇಳಿಸಿಕೊಂಡಿದ್ದಾರೆ. ಜನರ ಹಿತಾಸಕ್ತಿಗಾಗಿ ಅವರು ಕ್ರಮ ಕೈಗೊಳ್ಳುತ್ತಾರೆ” ಎಂದು ಸಿಂಗ್ ತಿಳಿಸಿದ್ದಾರೆ.

“ಸರ್ಕಾರ ರಚಿಸಲು ಹಕ್ಕು ಮಂಡಿಸುತ್ತೀರಾ?” ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಂಗ್, “ಬಿಜೆಪಿಯ ಕೇಂದ್ರ ನಾಯಕತ್ವವು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

“ಆದಾಗ್ಯೂ, ನಾವು ಸಿದ್ಧರಿದ್ದೇವೆ ಎಂದು ತಿಳಿಸುವುದು ಸರ್ಕಾರ ರಚಿಸಲು ಹಕ್ಕು ಮಂಡಿಸುವುದಕ್ಕೆ ಸಮಾನವಾಗಿದೆ. ಸ್ಪೀಕರ್ ಟಿ. ಸತ್ಯಬ್ರತ ಅವರು 44 ಶಾಸಕರನ್ನು ಪ್ರತ್ಯೇಕವಾಗಿ ಮತ್ತು ಜಂಟಿಯಾಗಿ ಭೇಟಿ ಮಾಡಿದ್ದಾರೆ. ಹೊಸ ಸರ್ಕಾರ ರಚನೆಯನ್ನು ವಿರೋಧಿಸುವವರು ಯಾರೂ ಇಲ್ಲ” ಎಂದು ಸಿಂಗ್ ಹೇಳಿದ್ದಾರೆ.

“ಜನರು ತುಂಬಾ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಹಿಂದಿನ ಅವಧಿಯಲ್ಲಿ, ಕೋವಿಡ್‌ನಿಂದಾಗಿ ಎರಡು ವರ್ಷಗಳು ಕಳೆದುಹೋಗಿದ್ದವು. ಈ ಅವಧಿಯಲ್ಲಿ, ಸಂಘರ್ಷದಿಂದಾಗಿ ಇನ್ನೂ ಎರಡು ವರ್ಷಗಳು ಕಳೆದುಹೋಗಿವೆ” ಎಂದು ರಾಧೇಶ್ಯಾಮ್ ಸಿಂಗ್ ಹೇಳಿಕೆ ನೀಡದ್ದಾರೆ.

ಮೇ 2023ರಲ್ಲಿ ಭುಗಿಲೆದ್ದ ಮೈತೇಯಿ ಮತ್ತು ಕುಕಿ-ಝೋ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷವನ್ನು ಸರ್ಕಾರ ನಿಭಾಯಿಸಿದ ರೀತಿ ಬಗ್ಗೆ ಟೀಕೆಗಳ ನಡುವೆ, ಬಿಜೆಪಿ ನಾಯಕ ಎನ್. ಬಿರೇನ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಾಗಾಗಿ, ಕಳೆದ ಫೆಬ್ರವರಿಯಿಂದ ಮಣಿಪುರ ರಾಷ್ಟ್ರಪತಿ ಆಳ್ವಿಕೆಯಲ್ಲಿದೆ.

60 ಸದಸ್ಯ ಬಲದ ವಿಧಾನಸಭೆಯಲ್ಲಿ ಪ್ರಸ್ತುತ 59 ಶಾಸಕರಿದ್ದು, ಒಬ್ಬರು ಶಾಸಕರ ಮರಣದಿಂದಾಗಿ ಒಂದು ಸ್ಥಾನ ಖಾಲಿ ಇದೆ.

ಬಿಜೆಪಿ ನೇತೃತ್ವದ ಒಕ್ಕೂಟದಲ್ಲಿ 32 ಮೈತೇಯಿ ಶಾಸಕರು, ಮೂವರು ಮಣಿಪುರಿ ಮುಸ್ಲಿಂ ಶಾಸಕರು ಮತ್ತು ಒಂಬತ್ತು ನಾಗಾ ಶಾಸಕರು ಸೇರಿ ಒಟ್ಟು 44 ಜನರಿದ್ದಾರೆ.

ಕಾಂಗ್ರೆಸ್‌ನ ಐವರು ಶಾಸಕರಿದ್ದು, ಅವರೆಲ್ಲರೂ ಮೈತೇಯಿ ಸಮುದಾಯಕ್ಕೆ ಸೇರಿದವರು.

ಉಳಿದ 10 ಶಾಸಕರು ಕುಕಿಗಳು. ಅವರಲ್ಲಿ ಏಳು ಮಂದಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದವರು. ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ಗೆ ಸೇರಿದವರು ಮತ್ತು ಒಬ್ಬರು ಸ್ವತಂತ್ರರು.

ಸರ್ಕಾರಿ ಬಸ್ಸಿನ ವಿಂಡ್ ಶೀಲ್ಡ್ ಮೇಲೆ ಬರೆದಿದ್ದ ಮಣಿಪುರ ರಾಜ್ಯದ ಹೆಸರನ್ನು ಭದ್ರತಾ ಪಡೆಗಳು ಮರೆಮಾಡಿದ್ದಕ್ಕೆ ಮೈತೇಯಿ ಜನವಸತಿ ಪ್ರದೇಶವಾದ ಇಂಫಾಲ್ ಕಣಿವೆಯಲ್ಲಿ ಭಾರೀ ಪ್ರತಿಭಟನೆಗಳು ನಡೆಯುತ್ತಿರುವ ಮಧ್ಯೆ ಸರ್ಕಾರ ರಚನೆಯೆ ಬೆಳವಣಿಗೆ ನಡೆದಿದೆ.

ಮೇ 20ರಂದು ಗ್ವಾಲ್ತಾಬಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಕ್ಷಮೆಯಾಚಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಭದ್ರತಾ ಸಲಹೆಗಾರ ​​ರಾಜೀನಾಮೆ ನೀಡಬೇಕು ಎಂದು ಮೈತೇಯಿ ಗುಂಪುಗಳು ಒತ್ತಾಯಿಸಿವೆ.

ಮೇ 2023ರಲ್ಲಿ 250ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಜನಾಂಗೀಯ ಕಲಹ ಪ್ರಾರಂಭವಾದಾಗಿನಿಂದ, ಮೈತೇಯಿ ಗುಂಪುಗಳು ಯಾವುದೇ ಶಾಂತಿ ಪ್ರಕ್ರಿಯೆಯಲ್ಲಿ ರಾಜ್ಯದ ಪ್ರಾದೇಶಿಕ ಸಮಗ್ರತೆಯ ಬಗ್ಗೆ ಮಾತುಕತೆಗೆ ಅವಕಾಶವಿಲ್ಲ ಎಂದು ವಾದಿಸುತ್ತಿವೆ. ಆದರೆ, ಕುಕಿ-ಝೋ ಸಂಘಟನೆಗಳು ಬಿಕ್ಕಟ್ಟನ್ನು ಪರಿಹರಿಸಲು ಏಕೈಕ ಪರಿಹಾರವೆಂದರೆ ತಮ್ಮ ಸಮುದಾಯ ವಾಸಿಸುವ ಬೆಟ್ಟದ ಜಿಲ್ಲೆಗಳಿಗೆ ಪ್ರತ್ಯೇಕ ಆಡಳಿತವನ್ನು ರಚಿಸುವುದು ಎಂದು ಪ್ರತಿಪಾದಿಸುತ್ತಿವೆ.

ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೈಗೊಂಡಿರುವ ಹಲವಾರು ಕ್ರಮಗಳಿಂದಾಗಿ ಇತ್ತೀಚಿನ ತಿಂಗಳುಗಳಲ್ಲಿ ರಾಜ್ಯದಲ್ಲಿ ಹಿಂಸಚಾರ ಕಡಿಮೆಯಾಗುತ್ತಿದ್ದ ಎನ್ನಲಾಗುತ್ತಿತ್ತು. ಈ ನಡುವೆ ಗ್ವಾಲ್ತಾಬಿ ಘಟನೆಯಿಂದ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ ಎಂದು ವರದಿಗಳು ಹೇಳಿವೆ.

ಮಣಿಪುರದಲ್ಲಿ ಶಾಂತಿ ಕಾಪಾಡುವಲ್ಲಿ ರಾಷ್ಟ್ರಪತಿ ಆಳ್ವಿಕೆ ವಿಫಲ: ಕಾಂಗ್ರೆಸ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...