Homeಮುಖಪುಟಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗ್ಯೂಗೆ 45 ಮಕ್ಕಳು ಸೇರಿ 53 ಮಂದಿ ಬಲಿ

ಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗ್ಯೂಗೆ 45 ಮಕ್ಕಳು ಸೇರಿ 53 ಮಂದಿ ಬಲಿ

- Advertisement -
- Advertisement -

ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಶಂಕಿತ ಡೆಂಗ್ಯೂ ಸಾಂಕ್ರಾಮಿಕ ರೋಗಕ್ಕೆ ಕಳೆದ 10 ದಿನಗಳಲ್ಲಿ 45 ಮಕ್ಕಳು ಸೇರಿದಂತೆ 53 ಜನರ ಸಾವನ್ನಪ್ಪಿದ್ದಾರೆ. ಈ ಕುರಿತು ಉತ್ತರ ಪ್ರದೇಶ ಸರ್ಕಾರವನ್ನು ವಿಚಾರಣೆ ನಡೆಸಲು ಸೂಚಿಸಿದೆ.

ಫಿರೋಜಾಬಾದ್ ವೈದ್ಯಕೀಯ ಕಾಲೇಜಿನಲ್ಲಿ ರೋಗಕ್ಕೆ ತುತ್ತಾದವರು ಮತ್ತು ಮಕ್ಕಳ ಪೋಷಕರ ದೃಶ್ಯಗಳು ಕರುಣಾಜನಕವಾಗಿದ್ದು, ಜ್ವರದಿಂದ ಬಳಲುತ್ತಿರುವ ಮಕ್ಕಳ ಚೇತರಿಕೆಗೆ ಪೋಷಕರು ಪ್ರಾರ್ಥಿಸುತ್ತಿದ್ದಾರೆ.

ಆರು ವರ್ಷದ ಲಕ್ಕಿ ಎಂಬ ಬಾಲಕ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಆತನ ಕುಟುಂಬದವರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ, ಆಗ್ರಾಗೆ ಕರೆದೊಯ್ಯುವಂತೆ ವೈದ್ಯರು ಹೇಳಿದ್ದರು. ಆಗ್ರಾ ತಲುಪಲು ಹತ್ತು ನಿಮಿಷಗಖು ಇರುವಾಗ ಆತ ಕೊನೆಯುಸಿರೆಳೆದರು ಎಂದು ಮಗುವಿನ ಚಿಕ್ಕಪ್ಪ ಪ್ರಕಾಶ್ ಹೇಳಿದ್ದಾರೆ.

ಆರು ದಿನಗಳ ಹಿಂದೆ ಮಗ ಮತ್ತು ಮಗಳನ್ನು ಆಸ್ಪತ್ರೆಗೆ ಸೇರಿಸಿದ್ದ ಸುನೀಲ್ ಎಂಬುವರ ಮಗಳು ಅಂಜಲಿ  ತೀವ್ರ ಜ್ವರದಿಂದ ಮೃತಪಟ್ಟಿದ್ದಾರೆ. ಈಗ ಮಗ ಅಭಿಜಿತ್ ಚೇತರಿಕೆಗಾಗಿ ಆಸ್ಪತ್ರೆಯಲ್ಲಿ ಕುಳಿತು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ ನಿಗೂಢ ರೋಗಕ್ಕೆ 33 ಮಕ್ಕಳು ಸೇರಿ 40 ಮಂದಿ ಬಲಿ

ಫಿರೋಜಾಬಾದ್ ವೈದ್ಯಕೀಯ ಕಾಲೇಜಿನ ಮಕ್ಕಳ ತಜ್ಞ ಡಾ ಎಲ್.ಕೆ ಗುಪ್ತಾ ಅವರು, “ಹೆಚ್ಚಿನ ಮಕ್ಕಳು ವೈರಲ್ ಜ್ವರದಿಂದ ಬಳಲುತ್ತಿದ್ದಾರೆ. ಅದರಲ್ಲಿ ಡೆಂಗ್ಯೂ ಸೋಂಕಿಗೆ ಒಳಗಾಗಿದ್ದಾರೆ. ಪ್ರಸ್ತುತ 186 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿದ್ದಾರೆ” ಎಂದು ಹೇಳಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ವಿಜಯ್ ಸಿಂಗ್, 1 ರಿಂದ 8ನೇ ತರಗತಿಯ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಸೆಪ್ಟೆಂಬರ್ 6 ರವರೆಗೆ ಮುಚ್ಚುವಂತೆ ಆದೇಶಿಸಿದ್ದಾರೆ.

ಮಂಗಳವಾರ ಫಿರೋಜಾಬಾದ್‌ಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, “ಇದುವರೆಗೆ 32 ಮಕ್ಕಳು ಮತ್ತು 7 ವಯಸ್ಕರು ಸಾವನ್ನಪ್ಪಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿಯೊಬ್ಬ ರೋಗಿಗೂ ಸರಿಯಾದ ಚಿಕಿತ್ಸೆ ಸಿಗುವ ಬಗ್ಗೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸದಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಆದಿತ್ಯನಾಥ್, ಇಷ್ಟು ಜನರ ಸಾವಿನ ಕಾರಣವಾದ ನಿಗೂಢ ರೋಗದ ಬಗ್ಗೆ ಲಕ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ಕಾಲೇಜಿನ ವೈದ್ಯರ ತಂಡವು ತನಿಖೆ ಮಾಡಲಿದೆ ಎಂದು ಮಾಹಿತಿ ನೀಡಿದ್ದರು.


ಇದನ್ನೂ ಓದಿ: ಉತ್ತರ ಪ್ರದೇಶದ ಮಥುರಾದಲ್ಲಿ ಮದ್ಯ, ಮಾಂಸ ಸಂಪೂರ್ಣ ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...