Homeಮುಖಪುಟ45ನೇ ಚೆನ್ನೈ ಪುಸ್ತಕ ಮೇಳ: 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕ ಮಾರಾಟ

45ನೇ ಚೆನ್ನೈ ಪುಸ್ತಕ ಮೇಳ: 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕ ಮಾರಾಟ

- Advertisement -
- Advertisement -

ತಮಿಳುನಾಡಿನ ಚೆನ್ನೈ ನಗರದ ನಂದನಂ ವೈಎಂಸಿಎ ಮೈದಾನದಲ್ಲಿ ದಕ್ಷಿಣ ಭಾರತದ ಪುಸ್ತಕ ಮಾರಾಟಗಾರರು ಮತ್ತು ಪ್ರಕಾಶಕರ ಸಂಘ (BAPASI) ಆಯೋಜಿಸಿದ್ದ 45ನೇ ಚೆನ್ನೈ ಪುಸ್ತಕ ಮೇಳಕ್ಕೆ ದೇಶದ ನಾನಾ ಭಾಗಗಳಿಂದ ಸುಮಾರು 15 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದಾರೆ.

’ಈ ಪುಸ್ತಕ ಮೇಳದಲ್ಲಿ 12 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಪುಸ್ತಕಗಳನ್ನು ಮಾರಾಟ ಮಾಡಲಾಗಿದೆ’ ಎಂದು BAPASI ಅಧ್ಯಕ್ಷ ಎಸ್. ವೈರವನ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾದ ನಂತರ ಫೆಬ್ರವರಿ 16 ರಂದು ಪುಸ್ತಕ ಮೇಳ ಆರಂಭವಾಗಿತ್ತು. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಉದ್ಘಾಟಿಸಿದ ಈ ಮೇಳದಲ್ಲಿ ದೇಶಾದ್ಯಂತದ ಪುಸ್ತಕ ಮಾರಾಟಗಾರರ 800 ಕ್ಕೂ ಹೆಚ್ಚು ಮಳಿಗೆಗಳು ಇದ್ದವು.

ಭಾನುವಾರ ಈ ಮೇಳಕ್ಕೆ ತೆರೆ ಎಳೆಯಲಾಗಿದೆ. ನಿರೀಕ್ಷೆಯಂತೆ, ಮೇಳದ ಕೊನೆ ದಿನ ಸಾವಿರಾರು ಜನರು ಸೇರಿದ್ದು, ಪುಸ್ತಕಗಳ ಮಾರಾಟದಲ್ಲಿ ಅತ್ಯಂತ ಏರಿಕೆ ಕಂಡುಬಂದಿದೆ. ಜನರನ್ನು ನಿಯಂತ್ರಿಸಲು ಮೈದಾನದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ರಾಜೇಶ್ವರಿ ತೇಜಸ್ವಿಯವರ ಹೊಸ ಪುಸ್ತಕದ ಆಯ್ದ ಭಾಗ – ‘ನನ್ನ ಡ್ರೈವಿಂಗ್ ಡೈರಿ’

ಈ ಬಾರಿಯ ಮೇಳದಲ್ಲಿ ರಾಜ್ಯ ಸರ್ಕಾರದ ‘ಇಲ್ಲಂ ತೇಡಿ ಕಲ್ವಿ’ (Illam Thedi Kalvi)ಯೋಜನೆ, ವಿಜ್ಞಾನ ಪ್ರದರ್ಶನ, Keezhadi ಛಾಯಾಚಿತ್ರ ಗ್ಯಾಲರಿ ಮತ್ತು ಹಳೆಯ ಕುಂಬಾರಿಕೆ ಕಲಾಕೃತಿಗಳ ಪ್ರದರ್ಶನಕ್ಕೆ ಸಂಬಂಧಿಸಿದ ಮಳಿಗೆಗಳು ಸಹ ಇದ್ದವು.

ಪ್ರಸಿದ್ಧ ನಾಯಕರ ಶಿಲ್ಪಗಳು ಮೇಳದಲ್ಲಿ ಮತ್ತೊಂದು ಆಕರ್ಷಣೆಯಾಗಿದ್ದವು. ಮಾಜಿ ಸಿಎಂ ಎಂ. ಕರುಣಾನಿಧಿ, ಜನಪ್ರಿಯ ತಮಿಳು ಕವಿ ತಿರುವಳ್ಳುವರ್, ಬುದ್ಧ, ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ, ದ್ರಾವಿಡ ಧೀಮಂತ ‘ಪೆರಿಯಾರ್’ ಇವಿ ರಾಮಸಾಮಿ ಮತ್ತಿತರ ನಾಯಕರ ಕಲಾಕೃತಿಗಳು ಮಾರಾಟಕ್ಕೆ ಲಭ್ಯವಿದ್ದವು.

Image
PC: Twitter@bijoyghosh70

’ಜಲ್ಲಿಕಟ್ಟು ಪ್ರತಿಭಟನೆಯ ನಂತರ ಯುವಕರಲ್ಲಿ ರಾಜಕೀಯದ ಪ್ರಜ್ಞೆ ಹೆಚ್ಚಾಗಿದೆ. ಕಳೆದೆರಡು ವರ್ಷಗಳಿಂದ ಜಾತ್ರೆಯಲ್ಲಿ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸುತ್ತಿದ್ದು, ಈ ಬಾರಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಿರುವಳ್ಳುವರ್ ಮತ್ತು ಪೆರಿಯಾರ್ ಕಲಾಕೃತಿಗಳು ಹೆಚ್ಚು ಮಾರಾಟವಾಗಿವೆ’ ಎಂದು ಶಿಲ್ಪ ಕಲಾವಿದ ಅರುಣ್ ತೈತನ್ ಹೇಳಿದ್ದಾರೆ.

ಈ ಬಾರಿಯ ಮೇಳದಲ್ಲಿ ಅತಿ ಹೆಚ್ಚಿನ ಶಾಲಾ ವಿದ್ಯಾರ್ಥಿಗಳು ಭಾವಹಿಸಿದ್ದರು ಎಂದು BAPASI ಕಾರ್ಯದರ್ಶಿ ಎಸ್‌.ಕೆ.ಮುರುಗನ್ ಹೇಳಿದ್ದಾರೆ.


ಇದನ್ನೂ ಓದಿ: ಭ್ರಮೆ ಮತ್ತು ವಾಸ್ತವಗಳ ನಡುವೆ ಪುಸ್ತಕದ ಆಯ್ದ ಭಾಗ; ಯು.ಜಿ.ಕೃಷ್ಣಮೂರ್ತಿ ರಮಣರನ್ನು ಭೇಟಿಯಾದುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...