Homeಮುಖಪುಟಸಂಸತ್‌ನಿಂದ ಮತ್ತೆ 49 ಸಂಸದರ ಅಮಾನತು: ಒಟ್ಟು ಸಂಖ್ಯೆ 141ಕ್ಕೆ ಏರಿಕೆ

ಸಂಸತ್‌ನಿಂದ ಮತ್ತೆ 49 ಸಂಸದರ ಅಮಾನತು: ಒಟ್ಟು ಸಂಖ್ಯೆ 141ಕ್ಕೆ ಏರಿಕೆ

- Advertisement -
- Advertisement -

ನಿನ್ನೆ(ಡಿ.18) ಒಂದೇ ದಿನ ಲೋಕಸಭೆ ಮತ್ತು ರಾಜ್ಯಸಭೆ ಸೇರಿ 78 ಸಂಸದರನ್ನು ಅಮಾನತು ಮಾಡಲಾಗಿತ್ತು. ಈ ಬೆನ್ನಲ್ಲೇ ಇಂದು ಮತ್ತೆ 49 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ಡಿಸೆಂಬರ್ 14ರಿಂದ ಇದುವರೆ ಅಮಾನತ್ತಾದ ಸಂಸದ ಒಟ್ಟು ಸಂಖ್ಯೆ 141ಕ್ಕೆ ಏರಿಕೆಯಾಗಿದೆ.

ನ್ಯಾಶನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಕಾಂಗ್ರೆಸ್ ನಾಯಕರಾದ ಶಶಿ ತರೂರ್ ಮತ್ತು ಕಾರ್ತಿ ಚಿದಂಬರಂ, ಎನ್‌ಸಿಪಿಯ ಸುಪ್ರಿಯಾ ಸುಳೆ ಮತ್ತು ಸಮಾಜವಾದಿ ಪಕ್ಷದ ಡಿಂಪಲ್ ಯಾದವ್ ಸೇರಿದಂತೆ ಲೋಕಸಭೆಯ 49 ಸದಸ್ಯರನ್ನು ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಸ್ಪೀಕರ್ ಓಂ ಬಿರ್ಲಾ ಇಂದು ಅಮಾನತುಗೊಳಿಸಿದ್ದಾರೆ.

ಡಿಸೆಂಬರ್ 14ರಂದು ರಾಜ್ಯಸಭೆಯ ಒಬ್ಬರು ಮತ್ತು ಲೋಕಸಭೆಯ 13 ಜನರು ಸೇರಿ ಒಟ್ಟು 14 ಸಂಸದರನ್ನು ಅಮಾನತು ಮಾಡಲಾಗಿತ್ತು. ಡಿ.18 ಸೋಮವಾರ ರಾಜ್ಯಸಭೆಯಿಂದ 45 ಮತ್ತು ಲೋಕಸಭೆಯಿಂದ 33 ಸಂಸದರು ಸೇರಿ 78 ಮಂದಿಯನ್ನು ಅಮಾನತು ಮಾಡಲಾಗಿತ್ತು. ಈ ಮೂಲಕ ಅಮಾನತ್ತಾದ ಒಟ್ಟು ಸಂಸದರ ಸಂಖ್ಯೆ 92 ಆಗಿತ್ತು.

ಡಿಸೆಂಬರ್ 13ರಂದು ಸಂಸತ್ತಿನಲ್ಲಿ ಸಂಭವಿಸಿದ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿದ್ದಕ್ಕೆ ಸಂಸದರನ್ನು ಅಮಾನತು ಮಾಡಲಾಗಿದೆ.

ಗೃಹ ಸಚಿವರ ಪ್ರತಿಕ್ರಿಯೆಗೆ ಪ್ರತಿಪಕ್ಷಗಳ ಬೇಡಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ, ಸಂಸತ್ತಿನ ಒಳಗಿನ ಭದ್ರತೆಯು ಸೆಕ್ರೆಟರಿಯೇಟ್ ವ್ಯಾಪ್ತಿಗೆ ಒಳಪಟ್ಟಿದೆ. ಕೇಂದ್ರವು ಇದರಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಲೋಕಸಭೆಯ ಚಳಿಗಾಲದ ಅಧಿವೇಶನದ ವೇಳೆ ಇಬ್ಬರು ಅಪರಿಚಿತರು ವೀಕ್ಷಕರ ಗ್ಯಾಲರಿಯಿಂದ ಹಠಾತ್ ಆಗಿ ಸಂಸದರು ಕುಳಿತುಕೊಳ್ಳುವ ಆಸನದ ಕಡೆಗೆ ನುಗ್ಗಿ ಘೋಷಣೆಗಳನ್ನು ಕೂಗುತ್ತಾ ಹಳದಿ ಬಣ್ಣದ ಗ್ಯಾಸ್ ಸ್ಪ್ರೇ ಮಾಡಿದ್ದರು. 2001ರ ಸಂಸತ್ ದಾಳಿಯ 22ನೇ ವರ್ಷದ ದಿನದಂದೇ ಈ ಭದ್ರತಾ ಲೋಪ ಸಂಭವಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ 6 ಮಂದಿಯನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಸಂಸತ್‌ನಿಂದ ಅಮಾನತ್ತಾದ 92 ವಿಪಕ್ಷ ಸಂಸದರು ಯಾರು? ಇಲ್ಲಿದೆ ಮಾಹಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪತಂಜಲಿಯ ಪತನ ಶುರು: ‘ಸೋನ್ ಪಾಪ್ಡಿ’ಯಿಂದ ಮೂವರಿಗೆ ಜೈಲು ಶಿಕ್ಷೆ

0
ಪತಂಜಲಿ ನವರತ್ನ ಎಲೈಚಿ ಸೋನ್ ಪಾಪ್ಡಿ(ಸಾಂಪ್ರದಾಯಿಕ ಸಿಹಿತಿಂಡಿ) ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಆಯರ್ವೇದ ಲಿಮಿಟೆಡ್‍ನ ಸಹಾಯಕ ವ್ಯವಸ್ಥಾಪಕ ಸೇರಿದಂತೆ ಮೂರು ಮಂದಿಗೆ ಆರು ತಿಂಗಳ ಜೈಲು ಶಿಕ್ಷೆ...