Homeಮುಖಪುಟಒಂದು ವರ್ಷದಲ್ಲಿ 5.18 ಕೋಟಿ ಕಾರ್ಮಿಕರನ್ನು ನರೇಗಾ ಯೋಜನೆಯ ಪಟ್ಟಿಯಿಂದ ತೆಗೆಯಲಾಗಿದೆ: ಕೇಂದ್ರ ಸಚಿವರ ಮಾಹಿತಿ

ಒಂದು ವರ್ಷದಲ್ಲಿ 5.18 ಕೋಟಿ ಕಾರ್ಮಿಕರನ್ನು ನರೇಗಾ ಯೋಜನೆಯ ಪಟ್ಟಿಯಿಂದ ತೆಗೆಯಲಾಗಿದೆ: ಕೇಂದ್ರ ಸಚಿವರ ಮಾಹಿತಿ

- Advertisement -
- Advertisement -

2022-23ರಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(MGNREGA)ಯ ಪಟ್ಟಿಯಿಂದ 5.18 ಕೋಟಿ ಕಾರ್ಮಿಕರ ಹೆಸರನ್ನು ಅಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಮಂಗಳವಾರ ಲೋಕಸಭೆಗೆ ತಿಳಿಸಿದರು.

ಅಳಿಸಲಾದ ಹೆಸರುಗಳ ಸಂಖ್ಯೆಯು 2021-’22 ಕ್ಕಿಂತ 247% ಹೆಚ್ಚಾಗಿದೆ. ಈ ಯೋಜನೆಯು ದೇಶದ ಪ್ರತಿ ಗ್ರಾಮೀಣ ಕುಟುಂಬಕ್ಕೆ 100 ದಿನಗಳ ಕೆಲಸವನ್ನು ಖಾತರಿಪಡಿಸುತ್ತದೆ.

ಜನವರಿಯಲ್ಲಿ, ನರೇಂದ್ರ ಮೋದಿ ಸರ್ಕಾರವು MGNREGA ಜಾಬ್ ಕಾರ್ಡ್‌ಗಳನ್ನು ಆಧಾರ್ ಕಾರ್ಡ್‌ಗಳೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿತ್ತು. ಇದಕ್ಕೆ ಕಾರ್ಮಿಕರು ಮತ್ತು ಕಾರ್ಯಕರ್ತರ ಪ್ರತಿಭಟನೆಯ ನಡೆಸಿದರು. ಆದರೂ ಆಧಾರ್ ಆಧಾರಿತ ಪಾವತಿಗಳ ಅನುಷ್ಠಾನದ ಗಡುವನ್ನು ನಾಲ್ಕನೇ ಬಾರಿಗೆ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.

ಗಡುವನ್ನು ಪೂರೈಸಲು ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರಗಳು ಎರಡು ಡೇಟಾಬೇಸ್‌ಗಳಲ್ಲಿ ದಾಖಲೆಗಳಲ್ಲಿ ವ್ಯತ್ಯಾಸಗಳನ್ನು ಹೊಂದಿರುವ ಕಾರ್ಮಿಕರ ಹೆಸರನ್ನು ತೆಗೆದುಹಾಕುತ್ತಿವೆ, ಹಾಗಾಗಿಯೇ ಯೋಜನೆಯ ಪಟ್ಟಿಯಿಂದ ಕಾರ್ಮಿಕರ ಹೆಸರು ಕೈಬಿಡುವುದಕ್ಕೆ ಕಾರಣವಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

2021-22 ಕ್ಕೆ ಹೋಲಿಸಿದರೆ ಹಿಂದಿನ ಹಣಕಾಸು ವರ್ಷದಲ್ಲಿ 244.3% ರಷ್ಟು ಅಳಿಸುವಿಕೆಯಲ್ಲಿ ಹೆಚ್ಚಳವಾಗಿದೆಯೇ ಎಂದು ಕಾಂಗ್ರೆಸ್ ಸಂಸದರಾದ ಗೌರವ್ ಗೊಗೊಯ್ ಮತ್ತು ವಿಕೆ ಶ್ರೀಕಂದನ್ ಅವರು ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಪ್ರಶ್ನೆಯೊಂದನ್ನು ಕೇಳಿದ್ದರು.

ಅದಕ್ಕೆ ಉತ್ತರಿಸಿದ ಸಚಿವ ಗಿರಿರಾಜ್ ಸಿಂಗ್ ಅವರು, ”2021-’22ರಲ್ಲಿ 1,49,51,247 ಕಾರ್ಮಿಕರ MGNREGA ಜಾಬ್ ಕಾರ್ಡ್‌ಗಳನ್ನು ಅಳಿಸಲಾಗಿದೆ ಮತ್ತು 2022-’23 ರಲ್ಲಿ ಈ ಸಂಖ್ಯೆ 5,18,91,168 ಆಗಿದೆ ಎಂದು ಹೇಳಿದರು.

ಜಾಬ್ ಕಾರ್ಡ್‌ಗಳನ್ನು ಅಳಿಸಲು ವಿವಿಧ ಕಾರಣಗಳು:

”ನಕಲಿ ಜಾಬ್ ಕಾರ್ಡ್, ಕೆಲಸ ಮಾಡಲು ಸಿದ್ಧರಿಲ್ಲದವರು, ಕುಟುಂಬವನ್ನು ಗ್ರಾಮ ಪಂಚಾಯತ್‌ನಿಂದ ಶಾಶ್ವತವಾಗಿ ಸ್ಥಳಾಂತಗೊಂಡಿರುವವರು ಮತ್ತು ಉದ್ಯೋಗ ಕಾರ್ಡ್‌ನಲ್ಲಿರುವ ವ್ಯಕ್ತಿಯ ಅವಧಿ ಮುಗಿದಿದೆ” ಹಾಗಾಗಿ ಅಂತವರ ಜಾಬ್‌ ಕಾರ್ಡ್‌ಗಳನ್ನು ತಗೆಯಲಾಗಿದೆ ಎಂದು ಲೋಕಸಭೆಗೆ ಲಿಖಿತ ಪ್ರತಿಕ್ರಿಯೆಯಲ್ಲಿ ಸಿಂಗ್ ಹೇಳಿದ್ದಾರೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, 2022-23ರಲ್ಲಿ ಪಶ್ಚಿಮ ಬಂಗಾಳ (83.36 ಲಕ್ಷ) ಅತಿ ಹೆಚ್ಚು ಅಳಿಸುವಿಕೆಗಳನ್ನು ವರದಿ ಮಾಡಿದೆ, ಆಂಧ್ರ ಪ್ರದೇಶ (78.05 ಲಕ್ಷ), ಒಡಿಶಾ (77.78 ಲಕ್ಷ), ಬಿಹಾರ (76.68 ಲಕ್ಷ) ಮತ್ತು ಉತ್ತರ ಪ್ರದೇಶ (62.98 ಲಕ್ಷ).

ಇದನ್ನೂ ಓದಿ: ಇಂದು ಮೋದಿ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡನೆ: INDIA ಒಕ್ಕೂಟದ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...