Homeಮುಖಪುಟಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಬಿಎಸ್‌ಎಫ್‌ ಯೋಧ: ಐವರು ಸಾವು

ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಬಿಎಸ್‌ಎಫ್‌ ಯೋಧ: ಐವರು ಸಾವು

- Advertisement -
- Advertisement -

ಪಂಜಾಬ್‌ನ ಅಮೃತಸರ ಬಳಿಯ ಖಾಸಾದಲ್ಲಿರುವ ಬಿಎಸ್‌ಎಫ್ ಪ್ರಧಾನ ಸೇನಾ ಶಿಬಿರದಲ್ಲಿ ಬಿಎಸ್‌ಎಫ್‌ ಜವಾನರೊಬ್ಬರು ಸಹೋದ್ಯೋಗಿಗಳ ಮೇಳೆ ಗುಂಡು ಹಾರಿಸಿದ್ದು, ಗಡಿ ಭದ್ರತಾ ಪಡೆಯ ಕನಿಷ್ಠ ಐದು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಟ್ಟಾರಿ-ವಾಘಾ ಗಡಿಯಿಂದ ಇಪ್ಪತ್ತು ಕಿಲೋಮೀಟರ್ ದೂರದಲ್ಲಿರುವ ಶಿಬಿರದ ಮೆಸ್‌ನಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಗುಂಡಿನ ದಾಳಿ ನಡೆಸಿದ ಯೋಧ ಕೂಡ ಸಾವನ್ನಪ್ಪಿದ್ದಾರೆ. ಮೃತರನ್ನು ಕಾನ್‌ಸ್ಟೆಬಲ್ ಸತ್ತೆಪ್ಪ ಎಸ್‌.ಕೆ ಎಂದು ಗುರುತಿಸಲಾಗಿದೆ. ಆದರೆ, ಅವರು ಸ್ವತಃ ಗುಂಡು ಹಾರಿಸಿಕೊಂಡಿದ್ದಾರೆಯೇ ಅಥವಾ ಇತರರು ಹಾರಿಸಿದ ಗುಂಡಿಗೆ ಬಲಿಯಾಗಿದ್ದಾರೆಯೇ ಎಂಬುದು ತಕ್ಷಣವೇ ಸ್ಪಷ್ಟವಾಗಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಘಟನೆಯಲ್ಲಿ ಮತ್ತೋರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದು, ಅಮೃತಸರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: RSS ಹೊರತುಪಡಿಸಿ ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತ, ಜೈನ, ಬೌದ್ಧ ಎಲ್ಲರೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ: ತೇಜಸ್ವಿ ಯಾದವ್

ಬೆಳಗ್ಗೆ 9:30 ರಿಂದ 9:45 ರಲ್ಲಿ ಕಾನ್‌ಸ್ಟೆಬಲ್ ಸತ್ತೆಪ್ಪ್ ಎಸ್‌.ಕೆ ಅವರು ತಮ್ಮ ಸರ್ವೀಸ್ ರೈಫಲ್ ಅನ್ನು ಬಳಸಿ ಐವರು ಸಹೋದ್ಯೋಗಿಗಳ ಮೇಲೆ ಗುಂಡುಗಳನ್ನು ಹಾರಿಸಿದ್ದಾರೆ. ಮೃತಪಟ್ಟವರಲ್ಲಿ ಕಾನ್‌ಸ್ಟೆಬಲ್ ಮತ್ತು ಹೆಡ್ ಕಾನ್‌ಸ್ಟೆಬಲ್ ಶ್ರೇಣಿಯ ಸಿಬ್ಬಂದಿ ಸೇರಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಸತ್ಯಾಸತ್ಯತೆಗಳನ್ನು ತಿಳಿದುಕೊಳ್ಳಲು ತನಿಖಾ ನ್ಯಾಯಾಲಯಕ್ಕೆ ಆದೇಶಿಸಲಾಗಿದೆ ಎಂದು ಬಿಎಸ್‌ಎಫ್‌ ವಕ್ತಾರರು ಹೇಳಿದ್ದು, ಆರೋಪಿ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಲು ಕಾರಣವೇನು ಎಂಬುದನ್ನು ಅಧಿಕಾರಿಗಳು ತಿಳಿಸಿಲ್ಲ. ಗಡಿ ಪಡೆಗಳ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಉಕ್ರೇನ್: ರಕ್ಷಣೆಯಲ್ಲೂ ದಕ್ಷಿಣ ಭಾರತದವರಿಗೆ ತಾರತಮ್ಯ, ವಿದ್ಯಾರ್ಥಿಗಳ ಆರೋಪ

ಇದನ್ನೂ ಓದಿ: ರೈತರ ಹತ್ಯಾಕಾಂಡ: ಮಾ.11ಕ್ಕೆ ಆರೋಪಿ ಆಶಿಶ್ ಮಿಶ್ರಾ ಜಾಮೀನು ರದ್ದತಿಯ ಅರ್ಜಿ ವಿಚಾರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...