Homeಕರ್ನಾಟಕಮೈಸೂರಿನ ಶಕ್ತಿಧಾಮಕ್ಕೆ 5 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ ಘೋಷಣೆ

ಮೈಸೂರಿನ ಶಕ್ತಿಧಾಮಕ್ಕೆ 5 ಕೋಟಿ ರೂ. ಅನುದಾನ: ಸಿಎಂ ಬೊಮ್ಮಾಯಿ ಘೋಷಣೆ

- Advertisement -
- Advertisement -

ಮೈಸೂರು:  ಶಕ್ತಿಧಾಮ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದು, ಶಕ್ತಿಧಾಮಕ್ಕೆ 5 ಕೋಟಿ ರೂ.ಗಳ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಮೈಸೂರಿನ ಶಕ್ತಿಧಾಮದಲ್ಲಿ ಇನ್‍ಫೋಸಿಸ್ ಪ್ರತಿಷ್ಠಾನ ವತಿಯಿಂದ ನಿರ್ಮಿಸಿರುವ ಇನ್‍ಫೋಸಿಸ್ ಬ್ಲಾಕ್ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ನಟ ಶಿವರಾಜ್ ಕುಮಾರ್ ಅವರೊಂದಿಗೆ ಶಕ್ತಿಧಾಮದ ಬಗ್ಗೆ ಚರ್ಚೆ ಮಾಡಿದಾಗ ಸಂಸ್ಥೆಗಳಿಗೆ ಅನುದಾನ ನೀಡಬೇಕೆಂಬ ಪ್ರೇರಣೆ ದೊರೆತಿದ್ದಾಗಿ ತಿಳಿಸಿದ ಮುಖ್ಯಮಂತ್ರಿಯವರು, ಶಕ್ತಿಧಾಮದ ಯಶಸ್ಸಿನಿಂದ ಇನ್ನಷ್ಟು ಸಂಸ್ಥೆಗಳು ಹುಟ್ಟಿ ಬರಲಿ ಎಂದು ಆಶಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾಯಂದಿರ ಶೋಷಣೆಯನ್ನು ನಿರಂತರವಾಗಿ ಸಮಾಜ ಅನಾದಿ ಕಾಲದಿಂದಲೂ ಮಾಡಿಕೊಂಡು ಬಂದಿರುವುದು ಅತ್ಯಂತ ನೋವಿನ ಸಂಗತಿ. ನಾವೆಲ್ಲಾ ಅಂತಃಕರಣ ಕಳೆದುಕೊಂಡಾಗ ಬಹಳಷ್ಟು ಮಕ್ಕಳು ಅನಾಥರಾಗುತ್ತಾರೆ, ಶೋಷಣೆಗೆ ಒಳಗಾಗುತ್ತಾರೆ ಎಂದರು.

ಆಶ್ರಯದಾತ ಸಂಸ್ಥೆ: ತಾಯಿ ಕರುಳನ್ನು ತೋರಿದ ಪೊಲೀಸ್‌ ಅಧಿಕಾರಿ ಕೆಂಪಯ್ಯ ಸಮಾಜದಲ್ಲಿ ಶೋಷಿತ ಹೆಣ್ಣು ಮಕ್ಕಳಿಗೆ ದಾರಿ ತೋರಲು ಡಾ.ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರಲ್ಲಿ ತಿಳಿಸಿದರು. ಶೋಷಿತ ವರ್ಗದ ಹೆಣ್ಣುಮಕ್ಕಳಿಗೆ ಆಶ್ರಯ, ಬದುಕು ನೀಡಬೇಕು ಎಂದು ಆಶ್ರಯದಾತ ಸಂಸ್ಥೆಯಾಗಿ ಶಕ್ತಿಧಾಮವನ್ನು ಡಾ. ರಾಜ್ ಕುಮಾರ್ ಅವರ ಕುಟುಂಬದವರು ಬೆಳೆಸಿದ್ದಾರೆ. ಸರ್ಕಾರ ಮತ್ತು ಸಮಾಜ ಮಾಡುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಸ್ಮರಿಸಿದರು.

ಪುನೀತ್ ರಾಜ್ ಕುಮಾರ್ ಅವರಿಗೂ ತಾಯಿ ಕರುಳಿತ್ತು. ಅವರು ಇದ್ದಲ್ಲಿಂದಲೇ ಸಂಸ್ಥೆಗೆ ಶಕ್ತಿ ತುಂಬುತ್ತಿದ್ದಾರೆ. ಸಮಾಜದಲ್ಲಿ ಶೋಷಿತ, ಪೀಡಿತ ದುರ್ಬಲ ವರ್ಗದವರಿಗೆ ಸಮಾಜ ಸರ್ಕಾರ ಕೈ ಹಿಡಿದು ಎತ್ತಿ ನಡೆಸಬೇಕು. ಮಾತುಗಳಲ್ಲಿ ಸಾಮಾಜಿಕ ನ್ಯಾಯ ಆಗುವುದಿಲ್ಲ. ಅವಕಾಶಗಳು ಸಿಕ್ಕಾಗ ಅವರ ಪರವಾಗಿ ಕೆಲಸ ಮಾಡಬೇಕು. ಸಮಾಜದ ನೋವುಗಳಿಗೆ ಚಿಕಿತ್ಸೆ ಕೊಡುವ ಕೆಲಸವನ್ನು ಎಲ್ಲರೂ ಮಾಡಬೇಕು. ಈ ಬಗ್ಗೆ ಎಲ್ಲರೂ ಚಿಂತನೆ ಮಾಡಿ, ಸಮಾಜಕ್ಕೆ ಮರಳಿ ನೀಡಿದಾಗ ಬದುಕಿನ ಬ್ಯಾಲೆನ್ಸ್ ಶೀಟ್‍ನಲ್ಲಿ ಸಮತೋಲನ ಕಾಯ್ದುಕೊಳ್ಳಬಹುದು ಎಂದರು.

ಮಕ್ಕಳ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿ, ಕ್ರಿಯಾಶೀಲರನ್ನಾಗಿಸಿ, ಹಲವಾರು ರಂಗಗಳಲ್ಲಿ ಅವರ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಆತ್ಮವಿಶ್ವಾಸವನ್ನು ತುಂಬಿತ್ತಿದೆ. ಮಕ್ಕಳ ಭವಿಷ್ಯಕ್ಕೆ ಶಕ್ತಿಯಾಗಿದೆ. ಮಕ್ಕಳಲ್ಲಿ ದೇವರಿದ್ದಾರೆ. ಮಕ್ಕಳನ್ನು ಯಾರೂ ಅನಾಥರು ಎಂದು ಕರೆಯಬಾರದು. ಅವರು ದೇವರ ಮಕ್ಕಳು ಎಂದು ಅಭಿಪ್ರಾಯಪಟ್ಟರು.

ಕೆಂಪಯ್ಯ, ಡಾ.ರಾಜ್‍ಕುಮಾರ್, ಪಾರ್ವತಮ್ಮ ರಾಜ್‍ಕುಮಾರ್, ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಅವರಂಥ ತಂದೆತಾಯಿಯರನ್ನು ಪಡೆದಿರುವ ಮಕ್ಕಳೇ ಧನ್ಯರು ಎಂದರು.

ಮೈಸೂರಿನ ಕೆ.ಆರ್.ಆಸ್ಪತ್ರೆಗೆ 100 ವರ್ಷವಾಗಿರುವ ಹಿನ್ನೆಲೆಯಲ್ಲಿ 85 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸಲು, ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ 185 ಕೋಟಿ ರೂ.ಗಳ ವೆಚ್ಚದಲ್ಲಿ ಭೂಸ್ವಾಧೀನ ಕೆಲಸವನ್ನು ಇದೇ ವರ್ಷದಲ್ಲಿ ಮಾಡಲು ಅನುದಾನ ಮೀಸಲಿರಿಸಿದೆ. ಎಲ್ಲಾ ಜಿಲ್ಲೆಗಳ ಸಮಗ್ರ ಅಭಿವೃದ್ಧಿಯ ಜೊತೆಗೆ ಮಾನವ ಸಂಪನ್ಮೂಲ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ನಾಗೇಂದ್ರ, ನಿರಂಜನ್ ಕುಮಾರ್, ನಟ ಶಿವರಾಜ್‌ಕುಮಾರ್, ಶಕ್ತಿ ಧಾಮದ ಅಧ್ಯಕ್ಷೆ ಗೀತಾ ಶಿವರಾಜ್ ಕುಮಾರ್, ಇನ್ಫೋಸಿಸ್ ಪ್ರತಿಷ್ಠಾನದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಷಾಜಿ ಮ್ಯಾಥ್ಯೂ ಉಪಸ್ಥಿತರಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮಧ್ಯಪ್ರದೇಶ: ಪತ್ರಕರ್ತರ ಬಟ್ಟೆ ಬಿಚ್ಚಿಸಿ ಅವಮಾನ ಮಾಡಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...