Homeಕರ್ನಾಟಕ5 ಕೋಟಿ ರೂ. ವಂಚನೆ: ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ವಶಕ್ಕೆ

5 ಕೋಟಿ ರೂ. ವಂಚನೆ: ಚೈತ್ರಾ ಕುಂದಾಪುರ ಸೆ. 23ರ ವರೆಗೆ ಸಿಸಿಬಿ ವಶಕ್ಕೆ

- Advertisement -
- Advertisement -

ಬೈಂದೂರಿನ ಉದ್ಯಮಿಗೆಗೆ ಬಿಜೆಪಿಯಿಂದ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂ. ಪಡೆದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್‌ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ಆದೇಶ ಹೊರಡಿಸಿದೆ. 14 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ ನ್ಯಾಯಾಧೀಶರಿಗೆ ಸಿಸಿಬಿ ಮನವಿ ಮಾಡಿದ್ದರು.

ಬಂಧನ ಪ್ರಕ್ರಿಯೆ ಬಗ್ಗೆ ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ಮೊದಲು ಉಡುಪಿ ಪೊಲೀಸರು ಬಂಧಿಸಿದರು. ಉಡುಪಿ ಪೊಲೀಸರು ಸ್ವಲ್ಪ ಕಿರಿಕಿರಿ ಮಾಡಿದರೆಂದ, ಸಿಸಿಬಿ ಪೊಲೀಸರು ಕೈ ಎಳೆದಾಡಿ ನೋವು ಮಾಡಿದ್ದಾರೆ. ನನ್ನ ತಾಯಿ ಜತೆ ಮಾತನಾಡಲು ಅವಕಾಶ ಮಾಡಿಕೊಟ್ಟಿಲ್ಲ. ನನ್ನ ಮೇಲೆ ಯಾವ ಕೇಸ್ ಇದೆ ಎಂದು ನನಗೆ ಗೊತ್ತಿಲ್ಲ ಎಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್​ನಲ್ಲಿ ಚೈತ್ರಾ ಕಣ್ಣೀರು ಹಾಕಿದ್ದಾರೆ.

ಬಂಧನ ಕುರಿತು ಕುಟುಂಬದವರಿಗೆ ಮಾಹಿತಿ ನೀಡಲಾಗಿದೆಯೇ ಎಂದು ತನಿಖಾಧಿಕಾರಿ ರೀನಾ ಸುವರ್ಣಾಗೆ ನ್ಯಾಯಾಧೀಶರು ಪ್ರಶ್ನೆ ಮಾಡಿದ್ದು, ಈ ವೇಳೆ ಕುಟುಂಬದವರಿಗೆ ಮಾಹಿತಿ ಇಲ್ಲವೆಂದು ಚೈತ್ರಾ ಹೇಳಿದ್ದಾರೆ. ಆರೋಪಿಗಳಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ನನ್ನ ವಿರುದ್ಧದ ದಾಖಲಿಸಿರುವ ದೂರಿನ ಸೆಕ್ಷನ್ ಮಾತ್ರ ಹೇಳಿದ್ದಾರೆ. ಯಾವ ದೂರು, ಯಾರು ದೂರು ನೀಡಿದರು ಎಂದು ಮಾಹಿತಿ ನೀಡಿಲ್ಲ ಎಂದಿದ್ದಾರೆ.

ಆರೋಪಿಗಳ ಜತೆ ವಕೀಲರು ಅರ್ಧ ಗಂಟೆ ಮಾತನಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದು, ಕೋರ್ಟ್ ಆವರಣದಲ್ಲೇ ಆರೋಪಿಗಳಿಗೆ ವಕೀಲರೊಂದಿಗೆ ಮಾತನಾಡಲು ನ್ಯಾಯಾಲಯ ಅವಕಾಶ ನೀಡಿದೆ.

ಆರೋಪಿಗಳಿಗೆ ಯಾವುದೇ ನೋಟಿಸ್ ನೀಡದೆ ಬಂಧಿಸಿದ್ದಾರೆ ಎಂದು ವಿಚಾರಣೆ ವೇಳೆ ಕೋರ್ಟ್‌ಗೆ ಆರೋಪಿಗಳ ಪರ ವಕೀಲರು ಹೇಳಿದ್ದಾರೆ. ಸಿಆರ್‌ಪಿಸಿ 41ರಡಿ ನೋಟಿಸ್ ನೀಡಬೇಕಿತ್ತು. ಸಿಸಿಬಿ ಪೊಲೀಸರು ನಿಯಮ ಉಲ್ಲಂಘಿಸಿದ್ದಾರೆ ಎಂದಿದ್ದಾರೆ. ಆರೋಪಿಗಳು ತಲೆಮರೆಸಿಕೊಂಡಿದ್ದರೆ ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಹೇಳಿದ್ದಾರೆ.

ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ, ಎಫ್​​ಐಆರ್​ ದಾಖಲಾಗುತ್ತಿದ್ದಂತೆ ನಾಪತ್ತೆ ಆಗಿದ್ದಾರೆ. ನಿನ್ನೆ ಸಂಜೆವರೆಗೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಪ್ರಕರಣ ಬಳಿಕ ಮೈಸೂರಿನತ್ತ ಹೊರಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ವಂಚನೆ ಪ್ರಕರಣ: ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...