Homeಮುಖಪುಟಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ: ಸಿಎಂ ಸಿದ್ದರಾಮಯ್ಯ ವಾಗ್ದಾನ

ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ: ಸಿಎಂ ಸಿದ್ದರಾಮಯ್ಯ ವಾಗ್ದಾನ

- Advertisement -
- Advertisement -

ಇಂದಿನಿಂದಲೇ 5 ಗ್ಯಾರಂಟಿಗಳು ಜಾರಿಗೆ ಬರಲಿವೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಾಗ್ದಾನ ನೀಡಿದ್ದಾರೆ.

ಕರ್ನಾಟದಕ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಜಯ, ಈ ನಾಡಿನ ಏಳು ಕೋಟಿ ಕನ್ನಡಿಗರಿಗೆ ಸಿಕ್ಕ ಜಯವಾಗಿದೆ. ಅವರೆಲ್ಲರ ಆರ್ಶಿವಾದದಿಂದ ಇವತ್ತು ಕಾಂಗ್ರೆಸ್ ಪಕ್ಷ ಮತ್ತು ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ರಾಜ್ಯದಲ್ಲಿ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಮೂಲಕ ಪ್ರಚಾರ ಆರಂಭವಾಯಿತು. ಅವರ ಜೊತೆಗೆ ಖರ್ಗೆ ಮತ್ತು ಪ್ರಿಯಾಂಕ ಗಾಂಧಿಯವರು ಸೇರಿದಂತೆ ರಾಷ್ಟ್ರನಾಯಕರು ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಸಾಹಿತಿಗಳು, ಸಂಘಟನೆಗಳು, ಚಿಂತಕರು ಕಾಂಗ್ರೆಸ್ ಪಕ್ಷದ ಪರವಾಗಿ ಆರ್ಶಿವಾದ ಮಾಡಿದ್ದಾರೆ. ಮಹಿಳೆಯರು, ರೈತರು, ಕಾರ್ಮಿಕರಿಗೆ ಧನ್ಯವಾದಗಳು” ಎಂದರು.

ನಾವು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ಕೊಡುತ್ತೇವೆ. ಜನರು ಬದಲಾವಣೆ ಬಯಸಿದ್ದಾರೆ. ಹಾಗಾಗಿ ಐದು ಗ್ಯಾರಂಟಿಗಳನ್ನು ಇವತ್ತೇ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಕೊಡುವುದರ ಮೂಲಕ ಆದೇಶ ಹೊರಡಿಸಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ. ಇದು ಕನ್ನಡ ನಾಡಿನ ಎಲ್ಲ ಜನರಿಗೆ ನಮ್ಮ ಹೊಸ ಸರ್ಕಾರ ಕೊಡುತ್ತಿರುವ ಭರವಸೆ, ವಾಗ್ದಾನವಾಗಿದೆ. ಈ ವಾಗ್ದಾನವನ್ನು ಈಡೇರಿಸಿಯೇ ತೀರುತ್ತೇವೆ ಎಂದರು.

ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಐದು ವರ್ಷದಲ್ಲಿ ಪೂರೈಸುತ್ತೇವೆ. ಹಿಂದೆ ನುಡಿದಂತೆ ನಡೆದಿದ್ದೇವೆ, ಮುಂದಿಯೂ ನುಡಿದಂತೆಯೇ ನಡೆಯುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಪ್ರಮಾಣ ವಚನ ಸ್ವೀಕಾರ: ಯಾರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...