Homeಅಂತರಾಷ್ಟ್ರೀಯಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್: ಭಾರತ ತಂಡದಲ್ಲಿ ರಾಜ್ಯದ ಐವರು ಯುವತಿಯರು

- Advertisement -
- Advertisement -

ಈ ತಿಂಗಳು ಉಕ್ರೇನ್‌ನಲ್ಲಿ ನಡೆಯುತ್ತಿರುವ ಮಿನಿ ಫುಟ್‌ಬಾಲ್ ಮಹಿಳಾ ವಿಶ್ವಕಪ್ -2021ರ ಭಾರತೀಯ ಫುಟ್‌ಬಾಲ್‌ ತಂಡದಲ್ಲಿ ಕರ್ನಾಟಕದ ಐವರು ಯುವತಿಯರು ಆಟವಾಡಲಿದ್ದಾರೆ. ಅದರಲ್ಲೂ ಈ ತಂಡದಲ್ಲಿ ಬೆಳಗಾವಿಯ ಮೂವರು ಯುವತಿಯು ಸ್ಥಾನ ಪಡೆದುಕೊಂಡಿದ್ದಾರೆ.

ಬೆಳಗಾವಿಯ ಬೇರೆ ಬೇರೆ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ಅಂಜಲಿ, ಅದಿತಿ ಮತ್ತು ಪ್ರಿಯಾಂಕಾ ಎಂಬ ಮೂವರು ವಿದ್ಯಾರ್ಥಿನಿಯರು ತಂಡದಲ್ಲಿದ್ದಾರೆ. ಇವರ ಜೊತೆಗೆ ಬೆಂಗಳೂರಿನ ಸಂಜನಾ ಮತ್ತು ವಿಭಾ ಕೂಡ ಸ್ಥಾನ ಪಡೆದಿದ್ದಾರೆ. 11 ಕ್ರೀಡಾಪಟುಗಳಿರುವ ಭಾರತೀಯ ತಂಡದಲ್ಲಿ ಐವರು ಕನ್ನಡಿಗರು ಸ್ಥಾನ ಪಡೆದುಕೊಂಡಿದ್ದಾರೆ.

ಈ ಐವರು ಯುವತಿಯರು ಜುಲೈ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಎಂಟು ದಿನಗಳ ಕಾಲ ವಿಶೇಷ ತರಬೇತಿ ಶಿಬಿರದಲ್ಲಿ ಭಾಗವಹಿಸಿದ್ದರು. ಅಂಜಲಿ, ಅದಿತಿ ಮತ್ತು ಪ್ರಿಯಾಂಕಾ ಬೆಳಗಾವಿ ಯುನೈಟೆಡ್ ಫುಟ್ಬಾಲ್ ಅಕಾಡೆಮಿಯಲ್ಲಿ ಮತಿನ್ ಇನಾಮದಾರ್ ಅವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಟೋಕಿಯೋ ಒಲಂಪಿಕ್‌ನಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ಗೆದ್ದ ಮೀರಾಬಾಯಿ ಚಾನು

ಬೆಂಗಳೂರಿನಲ್ಲಿ ನಡೆದ ಸೂಪರ್ ಡಿವಿಷನ್ ಲೀಗ್ ಪಂದ್ಯಗಳಲ್ಲಿ ಇವರೆಲ್ಲರೂ ಭಾಗವಹಿಸಿದ್ದರು. ನಂತರ ಅವರನ್ನು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆಗಸ್ಟ್ 6 ರಂದು ಐವರು ಕನ್ನಡತಿಯರು ದೆಹಲಿಗೆ ತೆರಳಲಿದ್ದು, ಅಲ್ಲಿಂದ ಉಕ್ರೇನ್‌ಗೆ ಪ್ರಯಾಣಿಸಲಿದ್ದಾರೆ.

“ನಾನು ಭಾರತ ತಂಡದಲ್ಲಿ ಆಡಲು ಉತ್ಸುಕಳಾಗಿದ್ದೇನೆ. ತಂಡಕ್ಕೆ ಆಯ್ಕೆಯಾದ ನಂತರ ಅಭಿನಂದನಾ ಸಂದೇಶಗಳು ಹರಿದು ಬರುತ್ತಿವೆ. ನನ್ನ ಚೊಚ್ಚಲ ಅಂತರಾಷ್ಟ್ರೀಯ ಸ್ಪರ್ಧೆ ಇದಾಗಿದ್ದು, ಉತ್ತಮ ಪ್ರದರ್ಶನ ನೀಡುತ್ತೇನೆ ಎಂದು ಆಶೀಸುತ್ತೇನೆ” ಎಂದು ಬೆಳಗಾವಿಯ ಕೆಎಲ್‌ಇ ಲಿಂಗರಾಜ್ ಕಾಲೇಜಿನ ಬಿಕಾಂ ವಿದ್ಯಾರ್ಥಿನಿ ಅಂಜಲಿ ಹೇಳಿದ್ದಾರೆ.

ಬೆಳಗಾವಿಯ ಕೆಎಲ್‌ಇ ಲಿಂಗರಾಜ್ ಕಾಲೇಜಿನಲ್ಲಿ ಅದಿತಿ ಜಾಧವ್ ಬಿಎ ವಿದ್ಯಾರ್ಥಿನಿಯಾಗಿದ್ದಾರೆ. ಪ್ರಿಯಾಂಕ ಕಾಂಗ್ರಾಲ್ಕರ್ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬಿಕಾಂ ಓದುತ್ತಿದ್ದಾರೆ. 23 ವರ್ಷದೊಳಗಿನ ಮಿನಿ ಫುಟ್ಬಾಲ್ ಮಹಿಳಾ ವಿಶ್ವಕಪ್ -2021 ಏಳು-ಬದಿಯ ಪಂದ್ಯಾವಳಿಯಾಗಿದ್ದು, ಇದು ಉಕ್ರೇನ್‌ನ ಕೀವ್‌ನಲ್ಲಿ ಆಗಸ್ಟ್ 11 ರಿಂದ 16 ರವರೆಗೆ ನಡೆಯಲಿದೆ.


ಇದನ್ನೂ ಓದಿ: ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...