Homeಮುಖಪುಟಮಧ್ಯಪ್ರದೇಶ: ಗುಂಪು ಘರ್ಷಣೆ: ಐವರ ಗುಂಡಿಟ್ಟು ಹತ್ಯೆ

ಮಧ್ಯಪ್ರದೇಶ: ಗುಂಪು ಘರ್ಷಣೆ: ಐವರ ಗುಂಡಿಟ್ಟು ಹತ್ಯೆ

- Advertisement -
- Advertisement -

ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲಿ ಸಾಕು ಪ್ರಾಣಿಗಳನ್ನು ಮೇಯಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಪರಸ್ಪರ ಗುಂಡು ಹಾರಿಸಿದ ಪರಿಣಾಮ ಐವರು ಸಾವನ್ನಪ್ಪಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕಾಶ್ ಡಾಂಗಿ, ರಾಮ್ ನರೇಶ್ ಡಾಂಗಿ, ಸುರೇಂದ್ರ ಡಾಂಗಿ, ರಾಜೇಂದ್ರ ಪಾಲ್ ಹಾಗೂ ರಾಘವೇಂದ್ರ ಪಾಲ್ ಅವರು ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ತವರು ಜಿಲ್ಲೆಯ ರೆಂಡಾ ಗ್ರಾಮದಲ್ಲಿ ಬೆಳಿಗ್ಗೆ 9 ಗಂಟೆ ಸುಮಾರಿಗೆ ಡಾಂಗಿ ಮತ್ತು ಪಾಲ್ ಸಮುದಾಯದ ಸದಸ್ಯರ ನಡುವೆ ಗುಂಡಿನ ಚಕಮಕಿ ನಡೆದಿದೆ.

ದಾತಿಯಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ಈ ಕುರಿತು ಪ್ರತಿಕ್ರಿಯಿಸಿದ್ದು, ಮೂರು ದಿನಗಳ ಹಿಂದೆ ಸಾಕು ಪ್ರಾಣಿಗಳನ್ನು ಮೇಯಿಸುವ ವಿಷಯದಲ್ಲಿ ಪ್ರಕಾಶ್ ಡಾಂಗಿ ಮತ್ತು ಪ್ರೀತಮ್ ಪಾಲ್ ನಡುವೆ ವಾಗ್ವಾದ ನಡೆದಿತ್ತು. ವಾಗ್ವಾದದ ಸಂದರ್ಭದಲ್ಲಿ ಪ್ರಕಾಶ್, ಪ್ರೀತಮ್‌ಗೆ ಕಪಾಳಮೋಕ್ಷ ಮಾಡಿದ್ದರು. ಈ ವೇಳೆ ಗಲಾಟೆ ನಡೆದಿದೆ ನಂತರ ಎರಡೂ ಸಮುದಾಯಗಳ ಜನರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಎಸ್‌ಪಿ ಹೇಳಿದ್ದಾರೆ.

ಇದರ ನಂತರ ಬುಧವಾರ ಬೆಳಗ್ಗೆ ಎರಡು ಸಮುದಾಯಗಳ ಸದಸ್ಯರು ಮತ್ತೊಮ್ಮೆ ಗಲಾಟೆ ನಡೆಸಿದ್ದು, ಈ ವೇಳೆ ಪರಸ್ಪರ ಗುಂಡಿನ ದಾಳಿ ನಡೆದು ಐವರು ಮೃತಪಟ್ಟು ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ದಲಿತ ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮೂತ್ರವಿಸರ್ಜನೆ:  ಬಿಜೆಪಿ ಶಾಸಕನ ಬೆಂಬಲಿಗ ಸೇರಿ 7 ಮಂದಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...