Homeಮುಖಪುಟಜಮ್ಮುಕಾಶ್ಮೀರ: ಭಯೋತ್ಪಾದಕರ ಗುಂಡಿಗೆ ಇಬ್ಬರು ಸೇನಾಧಿಕಾರಿ ಸೇರಿದಂತೆ ಐವರು ಬಲಿ

ಜಮ್ಮುಕಾಶ್ಮೀರ: ಭಯೋತ್ಪಾದಕರ ಗುಂಡಿಗೆ ಇಬ್ಬರು ಸೇನಾಧಿಕಾರಿ ಸೇರಿದಂತೆ ಐವರು ಬಲಿ

- Advertisement -
- Advertisement -

ಶನಿವಾರ ರಾತ್ರಿ ಜಮ್ಮುಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿದಂತೆ ಐವರು ಭದ್ರತಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಭಯೋತ್ಪಾದಕರ ಗುಂಡಿಗೆ ಪೊಲೀಸ್ ಅಧಿಕಾರಿ ಮತ್ತು ಇಬ್ಬರು ಸೇನಾ ಸೈನಿಕರು ಪ್ರಾಣ ಬಿಟ್ಟಿದ್ದಾರೆ.

ರಾಜಧಾನಿ ಶ್ರೀನಗರದಿಂದ 70 ಕಿ.ಮೀ ದೂರದಲ್ಲಿರುವ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಸಶಸ್ತ್ರ ಪಡೆ ಮತ್ತು ಜಮ್ಮು ಕಾಶ್ಮೀರ ಜಂಟಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ನಡೆಸಲಾಗಿದೆ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಹಲವಾರು ನಾಗರಿಕರನ್ನು ರಕ್ಷಿಸಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ, ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.

“ಕುಪ್ವಾರಾ ಜಿಲ್ಲೆಯ ಹಂದ್ವಾರ ಚಾಂಗಿಮುಲ್ಲಾದ ಮನೆಯೊಂದರಲ್ಲಿ ನಾಗರಿಕ ಕೈದಿಗಳನ್ನು ಭಯೋತ್ಪಾದಕರು ಒತ್ತೆಯಾಳುಗಳಾಗಿ ಕರೆದೊಯ್ಯುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಸೇನಾ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಜಮ್ಮುಕಾಶ್ಮೀರದ ಪೊಲೀಸ್ ಹಾಗೂ ಸೇನೆಯ ಐವರು ಜನರಿರುವ ತಂಡ ನಾಗರೀಕರು ಇರುವ ಭಯೋತ್ಪಾದಕರ ತಾಣದ ಮೇಲೆ ದಾಳಿಮಾಡಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಸೈನ್ಯ ಮತ್ತು ಜಮ್ಮುಕಾಶ್ಮೀರ ಪೊಲೀಸರ ತಂಡವು ಗುರಿ ಪ್ರದೇಶವನ್ನು ಪ್ರವೇಶಿಸಿ ನಾಗರಿಕನನ್ನು ಯಶಸ್ವಿಯಾಗಿ ಹೊರಹಾಕಿತು. ಆದರೆ, ಈ ಪ್ರಕ್ರಿಯೆಯಲ್ಲಿ, ತಂಡವು ಭಯೋತ್ಪಾದಕರಿಂದ ಭಾರೀ ಪ್ರಮಾಣದ ಗುಂಡಿನ ಚಕಮಕಿಗೆ ನಡೆಯಿತು” ಎಂದು ಹೇಳಲಾಗಿದೆ.

ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವಿಟರ್‌ನಲ್ಲಿ ಗೌರವ ಸಲ್ಲಿಸಿದರು. “ಹಂದ್ವಾರದಲ್ಲಿ ನಮ್ಮ ಸೈನಿಕರು ಮತ್ತು ಭದ್ರತಾ ಸಿಬ್ಬಂದಿಯ ನಷ್ಟವು ತುಂಬಾ ನೋವಿನ ವಿಷಯವಾಗಿದೆ. ಭಯೋತ್ಪಾದಕರ ವಿರುದ್ಧದ ಹೋರಾಟದಲ್ಲಿ ಅವರು ಅನುಕರಣೀಯ ಧೈರ್ಯವನ್ನು ತೋರಿಸಿದರು. ದೇಶಕ್ಕೆ ಸೇವೆಯಲ್ಲಿ ಸರ್ವೋಚ್ಚ ತ್ಯಾಗ ಮಾಡಿದ್ದಾರೆ. ಅವರ ಧೈರ್ಯ ಮತ್ತು ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ” ಎಂದು ರಾಜಾನಾಥ್ ಸಿಂಗ್ ಬರೆದಿದ್ದಾರೆ.

“ಕರ್ನಲ್ ಅಶುತೋಷ್ ಶರ್ಮಾ, ಮೇಜರ್ ಅನುಜ್ ಸೂದ್ ಮತ್ತು ಜಮ್ಮುಕಾಶ್ಮೀರದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಕೀಲ್ ಖಾಜಿ ಸೇರಿದಂತೆ ಐವರು ಧೈರ್ಯಶಾಲಿ ಸಿಬ್ಬಂದಿಗಳು ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾಗಿದ್ದಾರೆ” ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಟಿಐಗೆ ತಿಳಿಸಿದ್ದಾರೆ.

ಜಮ್ಮುಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಇಮ್ತಿಯಾಜ್ ಹುಸೇನ್ “ಸುದೀರ್ಘ ಆತಂಕಿತ ರಾತ್ರಿಯ ನಂತರ, ಕೆಚ್ಚೆದೆಯ ವೀರರು ಹುತಾತ್ಮರಾಗಿದ್ದಾರೆಂಬ ದುಖದ ವಿಚಾರವನ್ನು ಕೇಳುತ್ತಿದ್ದೇವೆ” ಎಂದು ಟ್ವಿಟ್ಟರಿನಲ್ಲಿ ಬರೆದಿದ್ದಾರೆ.

 

ಜಮ್ಮುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ “ಇಂದು ಬೆಳಿಗ್ಗೆ ಹಂದ್ವಾರದಲ್ಲಿ ಕರ್ತವ್ಯದ ಸಮಯದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಜವಾನರು ಮತ್ತು ಪೊಲೀಸ್ ಅಧಿಕಾರಿಗಳ ಬಗ್ಗೆ ಕೇಳುತ್ತಿದ್ದೇನೆ. ಅವರ ಆತ್ಮಗಳು ಶಾಂತಿಯನ್ನು ಕೋರುತ್ತಿದ್ದೇನೆ ಹಾಗೂ ಅವರ ಕುಟುಂಬಗಳು ಮತ್ತು ಸಹೋದ್ಯೋಗಿಗಳು ಅವರ ಅಗಲುವಿಕೆಯನ್ನು ತಡೆದುಕೊಳ್ಳುವ ಶಕ್ತಿಯನ್ನು ಪಡೆದುಕೊಳ್ಳಲಿ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ವಿಶೇಷ ಸ್ಥಾನಮಾನ ಕಸಿದ ಬೆನ್ನಿಗೆ, ಜಮ್ಮುಕಾಶ್ಮೀರದ ಜನರ ಸರ್ಕಾರಿ ಹುದ್ದೆಯನ್ನು ಕಸಿದ ಕೇಂದ್ರ ಸರ್ಕಾರ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...