Homeಮುಖಪುಟಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ 'ಮಿಯಾ'ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

- Advertisement -
- Advertisement -

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ ‘ಮಿಯಾ ಮತದಾರರ’ ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ ಮೂಲಕ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ಒಂದು ಸಮುದಾಯದ ಜನರ ವಿರುದ್ದ ನೇರ ದ್ವೇಷ ಕಾರಿದ್ದಾರೆ.

“ನಮಗೆ ಮತಗಳ್ಳತನ ಅಂದರೆ ಏನು? ಹೌದು, ನಾವು ಕೆಲವು ಮಿಯಾ ಮತಗಳನ್ನು ಕದಿಯಲು ಪ್ರಯತ್ನಿಸುತ್ತಿದ್ದೇವೆ. ನಿಜವಾಗಿ ಅವರಿಗೆ ಅಸ್ಸಾಂನಲ್ಲಿ ಮತ ಚಲಾಯಿಸಲು ಅವಕಾಶ ನೀಡಬಾರದು. ಅವರು ಬಾಂಗ್ಲಾದೇಶದಲ್ಲಿ ಮತ ಚಲಾಯಿಸಬೇಕು” ಎಂದು ಸಿಎಂ ಶರ್ಮಾ ಹೇಳಿದ್ದಾರೆ.

ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ದಿಗ್ಬೋಯ್‌ನಲ್ಲಿ ಮಂಗಳವಾರ (ಜ.27) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಶರ್ಮಾ ದ್ವೇಷದ ಹೇಳಿಕೆ ನೀಡಿದ್ದಾರೆ.

ಅಸ್ಸಾಂನಲ್ಲಿ, ‘ಮಿಯಾ’ ಎಂಬುವುದು ಬಂಗಾಳಿ ಮುಸ್ಲಿಮರನ್ನು ಉಲ್ಲೇಖಿಸಲು ಬಳಸುವ ಅವಹೇಳನಕಾರಿ ಪದವಾಗಿದೆ. ಬಂಗಾಳಿ ಭಾಷೆ ಮಾತನಾಡುವ ಮುಸ್ಲಿಮರಿಗೆ ಬಲಪಂಥೀಯರು ಅಥವಾ ಹಿಂದುತ್ವವಾದಿಗಳು ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರೆಂದು ಹಣೆಪಟ್ಟಿ ಕಟ್ಟುತ್ತಾರೆ.

“ಅವರು (ಮಿಯಾಗಳು) ಅಸ್ಸಾಮಿನಲ್ಲಿ ಮತ ಚಲಾಯಿಸಲು ಸಾಧ್ಯವಾಗದಂತೆ ನಾವು ವ್ಯವಸ್ಥೆಗಳನ್ನು ಮಾಡಿದ್ದೇವೆ. ಆದರೆ, ಇದು ಪ್ರಾಥಮಿಕವಷ್ಟೇ. ಅಸ್ಸಾಮಿನಲ್ಲಿ ಎಸ್‌ಐಆರ್ ನಡೆಸುವಾಗ ನಾಲ್ಕರಿಂದ ಐದು ಲಕ್ಷ ಮಿಯಾ ಮತಗಳನ್ನು ಕಡಿತಗೊಳಿಸಬೇಕಾಗುತ್ತದೆ” ಎಂದು ಸಿಎಂ ಶರ್ಮಾ ಹೇಳಿದ್ದಾರೆ.

“ಕಾಂಗ್ರೆಸ್ ನನ್ನನ್ನು ಎಷ್ಟು ಬೇಕಾದರೂ ನಿಂದಿಸಲಿ, ಆದರೆ ಮಿಯಾಗಳಿಗೆ ಸಂಕಷ್ಟವನ್ನುಂಟು ಮಾಡುವುದು ನನ್ನ ಕೆಲಸವಾಗಿದೆ” ಎಂದು ಶರ್ಮಾ ಹೇಳಿದ್ದಾರೆ.

ಭಾರತೀಯ ಚುನಾವಣಾ ಆಯೋಗವು ಎರಡನೇ ಹಂತದಲ್ಲಿ ಎಸ್‌ಐಆರ್ ನಡೆಸುತ್ತಿರುವ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಸ್ಸಾಂ ಸೇರಿಲ್ಲ. ಬದಲಿಗೆ, ಚುನಾವಣಾ ಆಯೋಗವು ರಾಜ್ಯದಲ್ಲಿ ‘ವಿಶೇಷ ಪರಿಷ್ಕರಣೆ’ ಎಂಬ ಪ್ರಕ್ರಿಯೆ ಕೈಗೊಂಡಿದೆ. ಇದು ಸಾಮಾನ್ಯವಾಗಿ ನಡೆಯುವ ಮತದಾರರ ಪಟ್ಟಿಯ ನಿಯಮಿತ ನವೀಕರಣ ಅಥವಾ ರೂಟೀನ್ ಅಪ್‌ಡೇಟ್‌ಗಳಂತೆಯೇ ಇರುತ್ತದೆ.

ಸಿಎಂ ಶರ್ಮಾ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಅಮನ್ ವಾದುದ್, ಶರ್ಮಾ ಅವರು ಅಸ್ಸಾಂನಲ್ಲಿ ‘ಸಂವಿಧಾನವನ್ನು ಸಂಪೂರ್ಣವಾಗಿ ನಿಷ್ಪರಿಣಾಮಕಾರಿಯನ್ನಾಗಿ ಮಾಡಿದ್ದಾರೆ’ ಎಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದೆ, ರಾಜ್ಯದಲ್ಲಿ ಮತದಾರರ ಪಟ್ಟಿಯ “ವಿಶೇಷ ಪರಿಷ್ಕರಣೆ”ಯ ಅಡಿಯಲ್ಲಿ ಮಿಯಾ ಮುಸ್ಲಿಮರಿಗೆ ಮಾತ್ರ ನೋಟಿಸ್ ನೀಡಲಾಗುತ್ತಿದೆ ಎಂದು ಶರ್ಮಾ ಹೇಳಿದ್ದರು. “ನಾವು ಅವರಿಗೆ ತೊಂದರೆ ನೀಡುತ್ತಿದ್ದೇವೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...