Homeಚಳವಳಿಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ಅಕ್ಟೋಬರ್ 11ರಂದು ಸಂಡೂರು ಎಪಿಎಂಸಿ ಮಾರ್ಕೆಟ್‌ನಿಂದ ಆರಂಭವಾಗುವ ಪಾದಯಾತ್ರೆಯು ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವವರೆಗೆ ನಡೆಯುತ್ತದೆ.

- Advertisement -
- Advertisement -

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು. ಭೂರಹಿತ ಸಂತ್ರಸ್ತ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಎಕರೆ ಭೂಮಿ ನೀಡಬೇಕು ಮತ್ತು ನಿವೃತ್ತಿ ವಯಸ್ಸು ತಲುಪಿದ ಗಣಿ ಕಾರ್ಮಿಕರಿಗೆ ಮಾಸಿಕ 5000 ರೂ ಪಿಂಚಣಿ ನೀಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘ ಸಂಡೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ಯೋಜಿಸಿದೆ.

ಈ ಕುರಿತು ಬಳ್ಳಾರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಕ್ಲಿಫ್ಟನ್ ರೊಜಾರಿಯೋರವರು ಮಾತನಾಡಿ, “ಪ್ರಾಣವನ್ನೇ ಒತ್ತೆಯಿಟ್ಟು, ರಕ್ತಸುರಿಸಿ ದುಡಿಯುತ್ತಿರುವ ಬಳ್ಳಾರಿ ಗಣಿ ಕಾರ್ಮಿಕರ ಸ್ಥಿತಿ ಪ್ರಾರಂಭದ ದಿನಗಳಿಂದಲೂ ಶೋಚನೀಯವಾಗಿದೆ. ಈ ಕಾರ್ಮಿಕರು ಅತ್ಯಂತ ದುರ್ಬಲ ಮತ್ತು ತಳ ಸಮುದಾಯಗಳಿಂದ ಬಂದಿದ್ದು, ಇವರಿಗೆ ಕನಿಷ್ಠ ವೇತನವೂ ದೊರೆಯುತ್ತಿಲ್ಲ. ಅಲ್ಲದೇ, ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸದೇ ಮತ್ತು ಸರಿಯಾದ ಸುರಕ್ಷತಾ ಸಾಧನಗಳನ್ನು ನೀಡದೇ ಜೀವಕ್ಕೆ ಅಪಾಯವಿರುವಂತಹ ಕೆಲಸವನ್ನು ಮಾಡಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

2011 ರ ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಆದೇಶದೊಂದಿಗೆ, ಬಳ್ಳಾರಿ ಜಿಲ್ಲೆಯ ಹಲವಾರು ಗಣಿಗಳಲ್ಲಿ ಕಾರ್ಮಿಕರ ರಿಟ್ರೇಂಚ್‌ಮೆಂಟ್‌ಗೆ ಸಂಬಂಧಿಸಿದ ಕಾರ್ಮಿಕ ಕಾನೂನಿನ ನಿಯಮಗಳನ್ನು ಪಾಲಿಸದೇ ಎಲ್ಲ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲಾಯಿತು. ಇದರಿಂದಾಗಿ 25,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಂಡರು ಮತ್ತು ಇವರಿಗೆ ಯಾವುದೇ ಪರಿಹಾರ ಅಥವಾ ಪುನರ್ವಸತಿಯನ್ನು ನೀಡದೇ ಬೀದಿಪಾಲು ಮಾಡಲಾಯಿತು. ಗಣಿ ಮಾಲೀಕರು ಸುಪ್ರೀಂ ಕೋರ್ಟ್ ಆದೇಶವನ್ನೇ ನೆಪವನ್ನಾಗಿ ಮಾಡಿಕೊಂಡು ಕಾರ್ಮಿಕರಿಗೆ ನೀಡಬೇಕಾಗಿದ್ದ ರೀಟ್ರೆಂಚ್‌ಮೆಂಟ್ ಪರಿಹಾರ ಸೇರಿದಂತೆ ಇತರೆ ಶಾಸನಬದ್ಧ ಹಕ್ಕುಗಳನ್ನು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದರು.

ಕಾರ್ಮಿಕರನ್ನು ವಜಾಗೊಳಿಸುವ ಮೊದಲು ಗಣಿ ಮಾಲೀಕರು ಕೈಗಾರಿಕಾ ವಿವಾದಗಳ ಕಾಯಿದೆ ಮತ್ತು ಇತರ ಸಂಬಂಧಿತ ಕಾನೂನುಗಳ ನಿಬಂಧನೆಗಳನ್ನು ಅನುಸರಿಸಬೇಕಾಗಿತ್ತು. ಆದರೆ ಇವೆಲ್ಲವನ್ನು ಅನುಸರಿಸದ ಕಾರಣ ಕಾರ್ಮಿಕರ ಕುಟುಂಬಗಳಿಲ್ಲಿನ ಚಿಕ್ಕ ಮಕ್ಕಳು ಮತ್ತು ವಯಸ್ಸಾದವರು ಸೇರಿದಂತೆ ಇಡೀ ಕುಟುಂಬಗಳು ಭಾರಿ ಪ್ರಮಾಣದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಅಂದಾಜಿನ ಪ್ರಕಾರ 1 ಲಕ್ಷಕ್ಕೂ ಹೆಚ್ಚು ಜನರು ಜೀವನೋಪಾಯಕ್ಕೆ ಯಾವುದೇ ಮೂಲವಿಲ್ಲದೇ ತೊಂದರೆಗೆ ಸಿಲುಕಿದ್ದಾರೆ ಎಂದು ಕ್ಲಿಫ್ಟನ್ ವಿಷಾಧ ವ್ಯಕ್ತಪಡಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಹಲವಾರು ಗಣಿಗಳು ತಮ್ಮ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಮತ್ತು ಉಳಿದವುಗಳನ್ನು ಈಗ ಹರಾಜು ಮಾಡಲಾಗುತ್ತಿದೆ. ಇದರಿಂದಾಗಿ ಗಣಿಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ. ಹೀಗಾಗಿ ಕಾನೂನು ಬಾಹಿರವಾಗಿ ರಿಟ್ರೇಂಚ್‌ಮೆಂಟ್‌ಗೆ ಒಳಗಾಗಿದ್ದ ಕಾರ್ಮಿಕರಿಗೆ ಉದ್ಯೋಗ ನೀಡುವುದರಲ್ಲಿ ಶಾಸನ ಬದ್ಧವಾದ ಮೊದಲ ಆದ್ಯತೆಯ ಹಕ್ಕನ್ನು ನಿರಾಕರಿಸಲಾಗುವುದಿಲ್ಲ. ಆದರೆ ಕೆಲವು ಗಣಿಗಳು ಕಾನೂನನ್ನು ಪಾಲಿಸದೇ ಹೊಸ ವ್ಯಕ್ತಿಗಳನ್ನು, ವಿಶೇಷವಾಗಿ ಇತರ ರಾಜ್ಯಗಳಿಂದ ಬರುವ ವಲಸೆ ಕಾರ್ಮಿಕರನ್ನು ಗುತ್ತಿಗೆ ಪದ್ಧತಿಯ ಮೂಲಕ ನೇಮಕ ಮಾಡಿಕೊಂಡು ಕಾನೂನುಬಾಹಿರ ವ್ಯವಸ್ಥೆಯ ಮೂಲಕ ಕೆಲಸ ಮಾಡಿಸುತ್ತಿದ್ದಾರೆ. ಗಣಿಗಾರಿಕೆ ಪುನರಾರಂಭವಾಗುತ್ತಿದ್ದರೂ ಉದ್ಯೋಗ ಕಳೆದುಕೊಂಡಿರುವ ಗಣಿ ಕಾರ್ಮಿಕರಿಗೆ ಉದ್ಯೋಗ ನೀಡದೇ ಗಣಿಕಂಪನಿಗಳು ಕಾರ್ಮಿಕ ಕಾನೂನುಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆರ್ ಆ್ಯಂಡ್ ಆರ್‌ನಲ್ಲಿ ಗಣಿಬಾಧಿತ ಪ್ರದೇಶಗಳ ಪರಿಸರ ಪುನರುಜ್ಜೀವನ ಸೇರಿದಂತೆ ಇನ್ನಿತರೆ ವಿಭಾಗಗಳ ಬಗ್ಗೆ ಸಮಗ್ರ ಯೋಜನೆ ತಯಾರಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಆದರೆ, ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟದಲ್ಲಿರುವ ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಗಳನ್ನು ನಿರ್ಲಕ್ಷಿಸಲಾಗಿದೆ. ಹಾಗಾಗಿ ಕೆಲಸ ಕಳೆದುಕೊಂಡಿರುವ ಎಲ್ಲ ಗಣಿ ಕಾರ್ಮಿಕರಿಗೆ ಕೆಲಸ ನೀಡುವುದು, ವಸತಿ ಸೌಲಭ್ಯ ಹಾಗೂ ಶಿಕ್ಷಣ ಸೇರಿದಂತೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಯೋಜನೆಯೊಂದನ್ನು ತಯಾರಿಸಬೇಕು ಎಂದು ಒತ್ತಾಯಿಸಿ ಅಕ್ಟೋಬರ್ 11, 12, 13ರ ಮೂರು ದಿನಗಳ ಕಾಲ ಸಂಡೂರಿನಿಂದ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ ಎಂದರು.

ಎಐಸಿಸಿಟಿಯು ರಾಜ್ಯ ಸಮಿತಿ ಸದಸ್ಯರಾದ ನಾಗರಾಜ್ ಪೂಜಾರ್ ರವರು ಮಾತನಾಡಿ, ” ಎಲ್ಲ ಗಣಿ ಕಾರ್ಮಿಕರಿಗೆ ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಪುನರ್ವಸತಿ, ಉದ್ಯೋಗ ಕಲ್ಪಿಸಬೇಕು. ಎಲ್ಲಾ ಗಣಿ ಕಾರ್ಮಿಕರಿಗೆ ನಿವೇಶನ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕು. ಗಣಿ ಕಾರ್ಮಿಕರು ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಂಗನವಾಡಿ, ಸಮುದಾಯ ಭವನ, ಗ್ರಂಥಾಲಯ, ಕಾರ್ಮಿಕರ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಗಣಿ ಕಾರ್ಮಿಕರಿಗೆ ಆಸ್ಪತ್ರೆ ನಿರ್ಮಿಸಿ, ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೇವೆ ಒದಗಿಸಬೇಕು. ಗಣಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಸಹಾಯಧನ ಹಾಗೂ ಮದುವೆಗೆ ಹಣಕಾಸಿನ ನೆರವು ಒದಗಿಸಬೇಕು ಎಂದು ಆಗ್ರಹಿಸಿದರು.

ಅಕ್ಟೋಬರ್ 11ರಂದು ಸಂಡೂರು ಎಪಿಎಂಸಿ ಮಾರ್ಕೆಟ್‌ನಿಂದ ಆರಂಭವಾಗುವ ಪಾದಯಾತ್ರೆಯು ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವವರೆಗೆ ನಡೆಯುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ವೈ.ಗೋಪಿ, ಉಪಾಧ್ಯಕ್ಷರಾದ ಎಂ.ಮಲ್ಲಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಎ.ಯರಿಸ್ವಾಮಿ, ಗೌರವಾಧ್ಯಕ್ಷರಾದ ಪಿ.ವೆಂಕಟೇಶ್‌ರವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಗೊಂದಲಕಾರಿ ವೇದ ಗಣಿತ ತರಬೇತಿಯ ನೆಪ: ದಲಿತರಿಗಾಗಿ ಮೀಸಲಿಟ್ಟ SCSP, TSPಯ 60 ಕೋಟಿ ರೂ ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...