Homeಮುಖಪುಟಪಶ್ಚಿಮ ಬಂಗಾಳ: ಶವವಾಗಿ ಪತ್ತೆಯಾದ ಒಂದೇ ಕುಟುಂಬದ ಐದು ಮಂದಿ

ಪಶ್ಚಿಮ ಬಂಗಾಳ: ಶವವಾಗಿ ಪತ್ತೆಯಾದ ಒಂದೇ ಕುಟುಂಬದ ಐದು ಮಂದಿ

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅನುಪ್ ತಾವು ಸಾಯುವ ಮೊದಲು ತನ್ನ ಕುಟುಂಬ ಸದಸ್ಯರನ್ನು ಕೊಂದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

- Advertisement -

ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್‌ಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಐವರು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕೊಲೆ ಶಂಕೆ ವ್ಯಕ್ತವಾಗಿದೆ.

ಜಮಾಲ್‌ಪುರ ಗ್ರಾಮದಲ್ಲಿ ಒಂದೇ ಕುಟುಂಬ ಐದು ಮಂದಿ ಶವವಾಗಿ ಪತ್ತೆಯಾಗಿದ್ದು, ಇಡೀ ಕುಟುಂಬವನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅನುಪ್ ಬರ್ಮನ್ (33) ಎಂಬುವರ ಕುಟುಂಬ ಇದಾಗಿದ್ದು, ಮೃತರನ್ನು ಅನುಪ್ ಬರ್ಮನ್ ಅವರ ತಾಯಿ ಉಲುಬಾಲಾ ಬರ್ಮನ್, ಪತ್ನಿ ಮಲ್ಲಿಕಾ ಬರ್ಮನ್ ಮತ್ತು 10 ವರ್ಷದೊಳಗಿನ ಇಬ್ಬರು ಹೆಣ್ಣುಮಕ್ಕಳನ್ನು ಬ್ಯೂಟಿ ಬರ್ಮನ್ ಮತ್ತು ಸ್ನಿಗ್ಧಾ ಬರ್ಮನ್ ಎಮದು ಗುರುತಿಸಲಾಗಿದೆ.

ಕುಟುಂಬದ ಮುಖ್ಯಸ್ಥ ಅನುಪ್ ಅವರ ಮೃತದೇಹವು ಛಾವಣಿಯಲ್ಲಿ ನೇತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಾಪನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಜಮಾಲ್‌ಪುರ ಗ್ರಾಮದ ನಿವಾಸಕ್ಕೆ ಪೊಲೀಸರು ಬೆಳಗ್ಗೆ ಸುಮಾರು ಆರು ಗಂಟೆಗೆ ತಲುಪಿ, ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ .

ಇದನ್ನೂ ಓದಿ: 1 ವರ್ಷದಿಂದ ಫ್ರೀಜರ್​ನಲ್ಲಿ ಇಟ್ಟಿದ್ದ ನೂಡಲ್ಸ್ ತಿಂದು 9 ಮಂದಿ ಸಾವು!

ಪೊಲೀಸರ ಪ್ರಕಾರ, ಇದು ಆತ್ಮಹತ್ಯೆ ಅಥವಾ ಕೊಲೆ ಪ್ರಕರಣವೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. “ಅವರು ಕೊಲೆಯಾಗಿದ್ದಾರೆ ಎಂದು ಮೇಲ್ನೋಟಕ್ಕೆ ಅನ್ನಿಸುತ್ತದೆ. ಘಟನೆ ಬಗ್ಗೆ ನಾವು ತನಿಖೆಯನ್ನು ಪ್ರಾರಂಭಿಸಿದ್ದೇವೆ. ತನಿಖೆ ಪ್ರಾಥಮಿಕ ಹಂತದಲ್ಲಿದೆ” ಎಂದು ಅವರು ಹೇಳಿದರು.

ಅನುಪ್ ಅವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು ಮತ್ತು ಅವರ ಚಿಕಿತ್ಸೆಗೆ ಸಾಕಷ್ಟು ಹಣ ವ್ಯಯವಾಗಿತ್ತು. ಚಿಕಿತ್ಸೆ ಮುಂದುವರಿಸಲು ಹಣದ ಸಮಸ್ಯೆ ಇತ್ತು. ಅನುಪ್ ಅವರ ಚಿಕಿತ್ಸೆಗೆ ಹಣದ ಅಗತ್ಯವಿರುವುದರಿಂದ ಇತ್ತೀಚೆಗೆ ತಮ್ಮ ಒಂದು ಭೂಮಿಯನ್ನು ಮಾರಾಟ ಮಾಡಿದ್ದರು. ಅವರ ಅನಾರೋಗ್ಯದಿಂದಾಗಿ ಮನೆಯ ಖರ್ಚನ್ನು ಭರಿಸುವುದು ಕಷ್ಟಕರವಾಗಿತ್ತು ಎನ್ನಲಾಗಿದೆ.

ಇಡೀ ಕುಟುಂಬವನ್ನು ಯಾರೋ ಅವರದ್ದೇ ನಿವಾಸದಲ್ಲಿ ಕೊಲೆ ಮಾಡಿರಬಹುದು, ಅಥವಾ 33 ವರ್ಷದ  ಅನುಪ್ ತಾವು ನೇಣಿಗೇರುವ ಮೊದಲು ತನ್ನ ಕುಟುಂಬ ಸದಸ್ಯರನ್ನು ಕೊಂದಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಅನುಪ್ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ನೇಣು ಹಾಕಿಕೊಳ್ಳುವ ಮೊದಲು ಕೊಂದಿದ್ದಾನೆ ಎಂಬ ಬಗ್ಗೆ ಕೆಲವು ಸಾಕ್ಷ್ಯಾಧಾರಗಳು ದೊರಕಿವೆ. ನಾವು ಇನ್ನೂ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಪ್ರಕರಣದಲ್ಲಿ ಹೆಚ್ಚಿನ ವಿವರಗಳು ಲಭ್ಯವಾಗುತ್ತವೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


‌ಇದನ್ನೂ ಓದಿ: ನಾಸ್ತಿಕತೆಯೇ ನನ್ನ ಆಯುಧ, ಮಾನವೀಯತೆ ನನ್ನ ಸಿದ್ಧಾಂತ: ಕಮಲ್ ಹಾಸನ್ ಹೇಳಿಕೆ ವೈರಲ್

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಂಗನಾ ಪೋಸ್ಟ್‌ಗಳಿಗೆ ಸೆನ್ಸಾರ್‌ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

0
ನಟಿ ಕಂಗನಾ ರಣಾವತ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಮಾಡುವ ಪೋಸ್ಟ್‌ಗಳನ್ನು ಇನ್ನು ಮುಂದೆ ಸೆನ್ಸಾರ್ ಮಾಡಬೇಕು ಎಂದು ಒತ್ತಾಯಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ ಎಂದು ಬಾರ್ ಅಂಡ್‌‌ ಬೆಂಚ್ ವರದಿ...
Wordpress Social Share Plugin powered by Ultimatelysocial
Shares