Homeಮುಖಪುಟತಮಿಳುನಾಡಿನಲ್ಲಿ ತೀವ್ರ ಮಳೆಗೆ ಐವರ ಸಾವು: ನ.11ರವರೆಗೆ ರೆಡ್‌ ಅಲರ್ಟ್‌ ಘೋಷಣೆ

ತಮಿಳುನಾಡಿನಲ್ಲಿ ತೀವ್ರ ಮಳೆಗೆ ಐವರ ಸಾವು: ನ.11ರವರೆಗೆ ರೆಡ್‌ ಅಲರ್ಟ್‌ ಘೋಷಣೆ

2015ರ ಪ್ರವಾಹದ ನಂತರ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಚೆನ್ನೈ ಕಾರ್ಪೊರೇಷನ್‌ ಅನ್ನು ಮದ್ರಾಸ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

- Advertisement -
- Advertisement -

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಲ್ಲಿ ಸತತ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ತಮಿಳುನಾಡಿನಲ್ಲಿ ಮುಂದಿನ ಮೂರು ದಿನಗಳವರೆ (ನವೆಂಬರ್‌ 11) ರೆಡ್‌ ಅಲರ್ಟ್‌ ಘೋಷಿಸಿದೆ.

ಮಂಗಳವಾರ ಮಧ್ಯಾಹ್ನ ಬುಲೆಟಿನ್‌ ಬಿಡುಗಡೆ ಮಾಡಿರುವ ಹವಾಮಾನ ಇಲಾಖೆಯು ಅದರಲ್ಲಿ, ‘ತಮಿಳುನಾಡಿನ ಮುಂದಿನ ಮೂರು ದಿನಗಳು ಭಾರೀ ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ ಸಾಧಾರಣ ಹಾಗೂ ಕೆಲವು ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ’ ಎಂದು ತಿಳಿಸಿದೆ.

ರಾಜ್ಯಾದ್ಯಂತ ಮಳೆ ಹಾಗೂ ಮಳೆಯಿಂದ ಉಂಟಾದ ಸಮಸ್ಯೆಯಿಂದಾಗಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. 538 ಗುಡಿಸಲುಗಳು ಮತ್ತು ನಾಲ್ಕು ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್‌ಎಸ್‌ಆರ್ ರಾಮಚಂದ್ರನ್ ತಿಳಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ನವೆಂಬರ್ 11 (ಗುರುವಾರ)ದವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 11 ರ ವೇಳೆಗೆ ಈ ಈ ವಾಯುಭಾರ ಕುಸಿತವು ತೀವ್ರಗೊಳ್ಳಲಿದ್ದು, ಪಶ್ಚಿಮ-ವಾಯುವ್ಯದ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಇಲಾಖೆಯು ತಿಳಿಸಿದೆ.

ಮಳೆಯಿಂದಾಗಿ ರಸ್ತೆಗಳಲ್ಲಿ ಪ್ರವಾಹ ಉಂಟಾಗಿದ್ದು, ಸಂಚಾರ ವ್ಯತ್ಯಯ, ಭೂಕುಸಿತಗಳು/ಮಣ್ಣು ಕುಸಿತ ಹಾಗೂ ಬೆಳೆಗಳಿಗೆ ಹಾನಿಯಾಗಿದೆ.

ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಮೀನುಗಾರರು ನವೆಂಬರ್‌ 11ರವರೆಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆಯು ಸೂಚನೆ ನೀಡಿದೆ.

ಚೆನ್ನೈ ಕಾರ್ಪೊರೇಷನ್‌ ಅನ್ನು ತರಾಟೆಗೆ ತೆಗೆದುಕೊಂಡ ಮದ್ರಾಸ್‌ ಹೈಕೋರ್ಟ್‌

ಈ ನಡುವೆ ನಗರದಲ್ಲಿ ಜಲಾವೃತ ಪರಿಸ್ಥಿತಿಯ ಬಗ್ಗೆ ಚೆನ್ನೈ ಕಾರ್ಪೊರೇಷನ್‌ ಅನ್ನು ತರಾಟೆಗೆ ತೆಗೆದುಕೊಂಡಿರುವ ಮದ್ರಾಸ್‌ ಹೈಕೋರ್ಟ್‌, ‘ಮಳೆಗಾಲದಲ್ಲಿ ಪ್ರವಾಹವನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವಲ್ಲಿ ಕಾರ್ಪೊರೇಷನ್‌ ವಿಫಲವಾಗಿದೆ’ ಎಂದಿದೆ.

2015ರ ಪ್ರವಾಹದ ನಂತರ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನಿಗಮವನ್ನು ಪ್ರಶ್ನಿಸಿದ ಹೈಕೋರ್ಟ್, ಪರಿಸ್ಥಿತಿಯನ್ನು ಹತೋಟಿಗೆ ತರದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ಇದನ್ನು ಓದಿ: ಮಳೆಹಾನಿಗೀಡಾದ ರೈತರಿಗೆ ಕೂಡಲೆ ಪರಿಹಾರ ನೀಡಿ: ಪಂಜಾಬ್ ಸಿಎಂಗೆ ಕೇಜ್ರಿವಾಲ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...