Homeಮುಖಪುಟಹತ್ರಾಸ್ ಪ್ರಕರಣ: ಎಸ್‌ಪಿ ಸೇರಿ 5 ಪೊಲೀಸರು ವಜಾ; ಜಿಲ್ಲೆಯಲ್ಲಿ ಒಂದು ತಿಂಗಳು ನಿಷೇದಾಜ್ಞೆ

ಹತ್ರಾಸ್ ಪ್ರಕರಣ: ಎಸ್‌ಪಿ ಸೇರಿ 5 ಪೊಲೀಸರು ವಜಾ; ಜಿಲ್ಲೆಯಲ್ಲಿ ಒಂದು ತಿಂಗಳು ನಿಷೇದಾಜ್ಞೆ

ಬಂಧಿತ ಆರೋಪಿಗಳು ಮತ್ತು ಸಂತ್ರಸ್ತೆಯ ಕುಟುಂಬ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎರಲ್ಲರನ್ನೂ ಸುಳ್ಳು-ಪತ್ತೆಕಾರಕ ಪರೀಕ್ಷೆಗಳಿಗೆ ಒಳಪಡಿಸಿ ಎಂದು SIT ತನಿಖಾಧಿಕಾರಿಗಳು ಹೇಳಿದ್ದಾರೆ

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಎಸ್‌ಪಿ ಸೇರಿ 5 ಪೊಲೀಸರನ್ನು ಅಮಾನತುಗೊಳಿಸಲಾಗಿದ್ದು, ಅತ್ಯಾಚಾರ ಪ್ರಕರಣದಲ್ಲಿ ಆರಂಭಿಕ ವರದಿಯನ್ನು ಸರಿಯಾಗಿ ನಿರ್ವಹಿಸಿಲ್ಲ ಎಂಬ ಕಾರಣಕ್ಕೆ ಎಸ್‌ಪಿ ಮತ್ತು ಇತರೆ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವಂತೆ ವಿಶೇಷ ತನಿಖಾ ತಂಡ (SIT) ಆದೇಶಸಿತ್ತು.

ಬಂಧಿತ ಆರೋಪಿಗಳು ಮತ್ತು ಸಂತ್ರಸ್ತೆಯ ಕುಟುಂಬ ಸೇರಿದಂತೆ ಪ್ರಕರಣಕ್ಕೆ ಸಂಬಂಧಿಸಿದ ಎರಲ್ಲರನ್ನೂ ಸುಳ್ಳು-ಪತ್ತೆಕಾರಕ ಪರೀಕ್ಷೆಗಳಿಗೆ ಒಳಪಡಿಸಿ ಎಂದು SIT ತನಿಖಾಧಿಕಾರಿಗಳು ಹೇಳಿದ್ದಾರೆ.

ಸೆಪ್ಟೆಂಬರ್ 14 ರಂದು ದೆಹಲಿಯಿಂದ 200 ಕಿ.ಮೀ ದೂರದಲ್ಲಿರುವ ಹತ್ರಾಸ್ ಎಂಬ ಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಯುವತಿ ತನ್ನ ಹೊಲದಲ್ಲಿ ಕುಟುಂಬದೊಂದಿಗೆ ಹುಲ್ಲು ಕತ್ತರಿಸುತ್ತಿದ್ದ ಸ್ಥಳದಿಂದ ಆಕೆಯ ಬಟ್ಟೆಯಿಂದಲೇ ಕಟ್ಟಿ ಪಕ್ಕದ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿತ್ತು.

ಇದನ್ನೂ ಓದಿ:ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳ ಪರ ನಿಂತ ಸವರ್ಣ ಪರಿಷತ್!

ಎರಡು ವಾರಗಳ ನಂತರ ಯುವತಿ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ನಂತರ ಆಕೆಯ ದೇಹವನ್ನು ಪೊಲೀಸರು ಮಧ್ಯರಾತ್ರಿಯೇ ಯುವತಿಯ ಕುಟುಂಬವನ್ನೂ ಅನುಮತಿಸಿದೇ ಸುಟ್ಟುಹಾಕಿದ್ದರು. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದ್ದು ಇಂದಿನವರೆಗೂ ಪ್ರತಿಭಟನೆಗಳು ನಡೆಯುತ್ತಲೇ ಇವೆ.

ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯ ಮುಂದೆಯೇ ಪ್ರತಿಭಟನೆ ನಡೆಸಿ, ಇದನ್ನು 2012ರ ನಿರ್ಭಯಾ ಪ್ರಕರಣದೊಂದಿಗೆ ಸಮೀಕರಿಸಿ ತಮ್ಮ ಆಕ್ರೋಶವನ್ನು ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ಹೊರಹಾಕಿದ್ದರು. ನಿನ್ನೆ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆದಿತ್ತು. ದೆಹಲಿಯ ಜಂತರ್ ಮಂತರ್‌ನಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಭೀಮ್ ಆರ್ಮಿಯ ಹೋರಾಟಗಾರರು ಸೇರಿದಂತೆ ನೂರಾರು ನಾಗರೀಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ಪ್ರಸ್ತುತ ಉತ್ತರಪ್ರದೇಶದ ಸ್ಥಿತಿ ಪ್ರಕ್ಷುಬ್ದ ವಾತಾವರಣದಲ್ಲಿದ್ದು, ಮಾಧ್ಯಮ ಸೇರಿದಂತೆ ಯಾವುದೇ ರಾಜಕಾರಣಿಗಳನ್ನೂ ಸಂತ್ರಸ್ತೆಯ ಕುಟುಂಬದ ಭೇಟಿಗೆ ಅನುಮತಿಸುತ್ತಿಲ್ಲ. ಗುರುವಾರ ಅವರ ಭೇಟಿಗಾಗಿ ಹೊರಟಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ತಡೆದು, ಅವರೊಟ್ಟಿಗೆ ಯುಪಿ ಪೊಲೀಸರು ಅಮಾನವೀಯವಾಗಿ ವರ್ತಿಸಿದ್ದರು. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.

ನಿನ್ನೆ ಸಂತ್ರಸ್ತೆಯ ಸಹೋದರನೊಬ್ಬ ಯುಪಿ ಪೊಲೀಸರ ಗೃಹಬಂಧನದಿಂದ ತಪ್ಪಿಸಿಕೊಂಡು ಬಂದು, ಜಿಲ್ಲಾಡಳಿತ ಮತ್ತು ಪೊಲೀಸರು ತಮಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಮಾಧ್ಯಮಗಳ ಮುಂದೆ ಆರೋಪಿಸಿದ್ದ. ಇನ್ನು ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹೊರಟಿದ್ದ ವಕೀಲೆ ಸೀಮಾ ಅವರನ್ನೂ ಪೊಲೀಸರು ತಡೆದಿದ್ದಾರೆ.

ಇದನ್ನೂ ಓದಿ:ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಈ ವಿಷಯವನ್ನು ಸ್ವಯಂ ಕೈಗೆತ್ತಿಕೊಂಡ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶದ ಉನ್ನತ ಅಧಿಕಾರಿಗಳಿಗೆ ಸಮನ್ಸ್ ಕಳುಹಿಸಿದೆ.

ಕ್ರೂರವಾದ ಲೈಂಗಿಕ ದೌರ್ಜನ್ಯದಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಕುಟುಂಬ ಹೇಳಿದೆ. ಆದರೆ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಪ್ರಶಾಂತ್ ಕುಮಾರ್, “ಯುವತಿಯ ಕುತ್ತಿಗೆಗೆ ಪೆಟ್ಟಾಗಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ. ವಿಧಿವಿಜ್ಞಾನದ ವರದಿಗಳಲ್ಲಿ ಯಾವುದೇ ವೀರ್ಯದ ಸಾಕ್ಷ್ಯ ಕಂಡುಬಂದಿಲ್ಲ” ಎಂದು ಹೇಳಿದ್ದಾರೆ.

ಇದರ ನಡುವೆ ನಿನ್ನೆ, ಆದಿತ್ಯನಾಥ್, “ತಮ್ಮ ಸರ್ಕಾರ ಮಹಿಳೆಯರ ಸ್ವಾಭಿಮಾನವನ್ನು ಕಾಪಾಡಲು ಬದ್ಧ” ಎಂದು ಹೇಳಿಕೆ ನೀಡಿದ್ದಾರೆ.

ಆದರೆ ಹತ್ರಾಸ್ ಜಿಲ್ಲೆಯಾದ್ಯಂತ ಒಂದು ತಿಂಗಳವರೆಗೆ ನಿಷೇದಾಜ್ಞೆಯನ್ನು ಹೇರಲಾಗಿದ್ದು, ವಿರೋಧ ಪಕ್ಷ ಸೇರಿದಂತೆ ದೇಶದ ಮಾಧ್ಯಮಗಳು ಮತ್ತು ಹಲವು ಜನರು ಇದನ್ನು ವ್ಯಾಪಕವಾಗಿ ಖಂಡಿಸಿದ್ದಾರೆ.


ಇದನ್ನೂ ಓದಿ: ಗುಜರಾತ್‌ ದಲಿತ ಬಾಲಕಿಯ ಸಾಮೂಹಿಕ ಅತ್ಯಾಚಾರ & ಕೊಲೆ… ಪೊಲೀಸ್‌ ನಿರ್ಲಕ್ಷ್ಯವೇ ಕಾರಣ.. ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...