Homeಮುಖಪುಟಮುಸ್ಲಿಮರಿಗೆ ಶಿಕ್ಷಣದಲ್ಲಿ 5% ಮೀಸಲಾತಿ: ಮಹಾರಾಷ್ಟ್ರ ಸರ್ಕಾರದ ಘೋಷಣೆ

ಮುಸ್ಲಿಮರಿಗೆ ಶಿಕ್ಷಣದಲ್ಲಿ 5% ಮೀಸಲಾತಿ: ಮಹಾರಾಷ್ಟ್ರ ಸರ್ಕಾರದ ಘೋಷಣೆ

ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಲು ಸಹ ಯೋಜಿಸುತ್ತಿದ್ದು, ಸರ್ಕಾರ ಅದಕ್ಕೆ ಕಾನೂನು ಸಲಹೆ ಪಡೆಯುತ್ತಿದೆ" ಎಂದು ಸಚಿವ ನವಾಬ್‌ ಮಲ್ಲಿಕ್‌ ಹೇಳಿದ್ದಾರೆ.

- Advertisement -
- Advertisement -

ಮಹಾರಾಷ್ಟ್ರದ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ 5 ರಷ್ಟು ಮೀಸಲಾತಿ ನೀಡುವ ಹೊಸ ಮಸೂದೆಯನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವು ಮಂಡಿಸಲಿದೆ ಎಂದು ರಾಜ್ಯ ಸಚಿವರು ತಿಳಿಸಿದ್ದಾರೆ.

ಈ ಮಸೂದೆಯನ್ನು ಮಹಾರಾಷ್ಟ್ರ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ.

ಎಂವಿಎದ ಮೂವರು ಮೈತ್ರಿ ಪಕ್ಷಗಳಲ್ಲಿ ಒಬ್ಬರಾದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮಲಿಕ್‌ರವರು “ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಲು ಸಹ ಯೋಜಿಸುತ್ತಿದ್ದು, ಸರ್ಕಾರ ಅದಕ್ಕೆ ಕಾನೂನು ಸಲಹೆ ಪಡೆಯುತ್ತಿದೆ” ಎಂದು ಹೇಳಿದ್ದಾರೆ.

ಉದ್ಧವ್ ಠಾಕ್ರೆ ಅವರ ಶಿವಸೇನೆ ಮತ್ತು ಬಿಜೆಪಿ ನಡುವಿನ ಒಕ್ಕೂಟದ ಹಿಂದಿನ ಸರ್ಕಾರ, ನ್ಯಾಯಾಲಯದ ಆದೇಶದ ಹೊರತಾಗಿಯೂ ಮೀಸಲಾತಿ ನೀಡಿಲ್ಲ ಎಂದು ಮಲಿಕ್ ಆರೋಪಿಸಿದ್ದಾರೆ.

“ಈ ವಿಧಾನಸಭೆ ಅಧಿವೇಶನದ ಅಂತ್ಯದ ವೇಳೆಗೆ ನಾವು ಶಿಕ್ಷಣದಲ್ಲಿ ಮುಸ್ಲಿಮರಿಗೆ ಶೇ 5 ರಷ್ಟು ಮೀಸಲಾತಿ ನೀಡಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.

ಕಳೆದ ವರ್ಷ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿಯನ್ನು ಪರಿಚಯಿಸಿದ ನಂತರ ಮುಸ್ಲಿಮರಿಗೆ ಶೇ 5 ರಷ್ಟು ಮೀಸಲಾತಿ ನೀಡುವ ಯೋಜನೆಯನ್ನು ಒಟ್ಟುಗೂಡಿಸಿದರೆ ಈಗಿರುವ ಮೀಸಲಾತಿ ಅಂಕಿ ಅಂಶವು ಸುಪ್ರೀಂ ಕೋರ್ಟ್‌ ಸೂಚಿಸಿರುವ 50 ಪ್ರತಿಶತಕ್ಕಿಂತ ಹೆಚ್ಚಿದೆ ಎನ್ನಲಾಗುತ್ತಿದೆ.

ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವ ಹಿಂದಿನ ರಾಜ್ಯ ಸರ್ಕಾರದ ನಿರ್ಧಾರವನ್ನು ಬಾಂಬೆ ಹೈಕೋರ್ಟ್ ಕಳೆದ ವರ್ಷ ಜೂನ್‌ನಲ್ಲಿ ಎತ್ತಿಹಿಡಿದಿತ್ತು. ಆದರೆ ಸರ್ಕಾರವು ನಿಗದಿಪಡಿಸಿದ ಶೇಕಡಾ 16 ಪ್ರಮಾಣವನ್ನು ಶೇಕಡಾ 13 ಕ್ಕೆ ಇಳಿಸಿತು.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಈಗಿನ ಸರ್ಕಾರವು ಶೇಕಡಾ 50 ರಷ್ಟು ಮೀರುವ ಮೀಸಲಾತಿಯನ್ನು ಹೇಗೆ ಸರಿದೂಗಿಸುತ್ತದೆ ಎಂದು ಇನ್ನೂ ಘೋಷಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...

ಮಾದಕ ವ್ಯಸನ : 10 ವರ್ಷದಲ್ಲಿ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ವೃದ್ಧ ದಂಪತಿ

ಡ್ರಗ್ ಕಾರಣದಿಂದ ವೃದ್ದ ದಂಪತಿ ತನ್ನ ಐವರು ಗಂಡು ಮಕ್ಕಳನ್ನು ಕಳೆದುಕೊಂಡ ಹೃದಯ ವಿದ್ರಾವಕ ಮತ್ತು ಆಘಾತಕಾರಿ ವರದಿ ಪಂಜಾಬ್‌ನ ಕಪುರ್ಥಲಾ ಜಿಲ್ಲೆಯ ಸುಲ್ತಾನ್‌ಪುರ ಲೋಧಿಯಿಂದ ಬಂದಿದೆ. ಸುಲ್ತಾನ್‌ಪುರ ಲೋಧಿಯ ಪಂಡೋರಿ ಮೊಹಲ್ಲಾ ಎಂಬ ಪ್ರದೇಶದಲ್ಲಿ ವಾಸಿಸುತ್ತಿರುವ...

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ. ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ...

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...