Homeಮುಖಪುಟಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

ಐದು ರಾಜ್ಯಗಳ ಚುನಾವಣೆ ಸುತ್ತ ರೈತಾಂದೋಲನದ ಪ್ರಭಾವ ಮತ್ತು ಪ್ರಸ್ತುತತೆ

- Advertisement -
- Advertisement -

ಐದು ರಾಜ್ಯಗಳ ಚುನಾವಣೆ ಪೈಕಿ ಮೂರು ರಾಜ್ಯಗಳಲ್ಲಿ ಮತದಾನ ಮುಗಿದಿದೆ. ಉತ್ತರ ಪ್ರದೇಶದಲ್ಲಿ ಇನ್ನೂ ಮೂರು ಹಂತದ ಮತ್ತು ಮಣಿಪುರದಲ್ಲಿ 2 ಹಂತದ ಮತದಾನ ಬಾಕಿ ಉಳಿದಿವೆ. ಈಗಾಗಲೇ ಚುನಾವಣೆ ಮುಗಿದಿರುವ ಪಂಜಾಬ್, ಉತ್ತರಾಖಂಡ ಮತ್ತು ಗೋವಾ ರಾಜ್ಯಗಳು ಫಲಿತಾಂಶಕ್ಕಾಗಿ ಎದುರು ನೋಡುತ್ತಿವೆ.

ರೈತ ಹೋರಾಟದಲ್ಲಿದ್ದ ಜಾಟ್‌ ಸಮುದಾಯದ ಪ್ರಾಬಲ್ಯವಿರುವ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಮತದಾನ ಮುಗಿದಿದೆ. ಇದೆಲ್ಲದರ ನಡುವೆ, ಮತದಾನ ಬಾಕಿ ಇರುವ ಪ್ರದೇಶಗಳಲ್ಲಿ ರೈತಾಂದೋಲನದ ಬಿಸಿ ಯಾವ ರೀತಿಯಲ್ಲಿ ಪ್ರಭಾವ ಬೀರಲಿದೆ ಎಂಬುದು ತೀವ್ರ ಚರ್ಚೆಯಲ್ಲಿದೆ.

ಸಾಮೂಹಿಕ ಚಳವಳಿಗಳು ಮತ್ತು ಚುನಾವಣಾ ಯಶಸ್ಸು, ಈ ಎರಡೂ ಕೂಡ ಭಾರತದಲ್ಲಿ ಎಲ್ಲಾ ಸಮಯದಲ್ಲೂ ಹೊಂದಿಕೆಯಾಗುವುದಿಲ್ಲ. ಆದರೆ, ತಮಿಳುನಾಡಿನಲ್ಲಿ ಸ್ವಾತಂತ್ರ್ಯಕ್ಕೂ ಮುನ್ನವೇ ಆರಂಭವಾದ ದ್ರಾವಿಡ ಚಳವಳಿ, ಪಶ್ಚಿಮ ಬಂಗಾಳ ರಾಜ್ಯದ ಭೂ ಹೋರಾಟಗಳು, ಮಂಡಲ್ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕಾಗಿ ನಡೆದ ಸುದೀರ್ಘ ಆಂದೋಲನದಂತಹ ಕೆಲವು ಸಾಮೂಹಿಕ ಚಳವಳಿಗಳು ಚುನಾವಣಾ ರಾಜಕೀಯದ ಮೇಲೆ ಪ್ರಮುಖ ಪ್ರಭಾವ ಬೀರಿವೆ. ಆದರೆ MGNREGS ಅನುಷ್ಠಾನಕ್ಕಾಗಿ ನಡೆದ ತಳಮಟ್ಟದ ಹೋರಾಟದಂತಹ ಹಲವು ಹೋರಾಟಗಳು ಚುನಾವಣೆಗಳ ಮೇಲೆ ರಾಜಕೀಯ ಪ್ರಭಾವ ಬೀರುವಲ್ಲಿ ವಿಫಲವಾಗಿವೆ.

ರೈತಾಂದೋಲನದಿಂದ ಬಿಜೆಪಿಗೆ ನಷ್ಟ

ಮೂರು ಕೃಷಿ ಕಾನೂನುಗಳ ರದ್ದತಿಗಾಗಿ ನಡೆದ ಒಂದು ವರ್ಷಗಳ ಸುದೀರ್ಘ ರೈತ ಹೋರಾಟ ಯಶಸ್ಸನ್ನು ಕಂಡಿದೆ. ಇದು ಭಾರತದಲ್ಲಿ ಅತ್ಯಂತ ಯಶಸ್ವಿ ಸಾಮೂಹಿಕ ಹೋರಾಟಗಳಲ್ಲಿ ಒಂದಾಗಿದೆ. ಚಳವಳಿಯ ಚುನಾವಣಾ ಪ್ರಭಾವದ ಬಗ್ಗೆ ಏನು? ಎಂದು ನೋಡುವ ಒಂದು ಮಾರ್ಗವೆಂದರೆ ಮೊದಲ ಮತ್ತು ಎರಡನೇ ಹಂತಗಳಲ್ಲಿ ಚುನಾವಣೆಗೆ ಹೋದ ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಜಾಟ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಬಿಜೆಪಿಗೆ ಸಂಭವನೀಯ ನಷ್ಟವಾಗಿರುವ ಬಗ್ಗೆ ಕೇಳಿಬರುತ್ತಿದೆ. ಪಂಜಾಬ್‌ನಲ್ಲಿ ರೈತ ಹೋರಾಟದಿಂದಾಗಿ ಬಿಜೆಪಿಯ ಜೊತೆಗಿದ್ದ ಬಹುಕಾಲದ ಮಿತ್ರ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮೈತ್ರಿಯನ್ನು ತೊರೆಯಿತು, ಇದು ಬಿಜೆಪಿಗೆ ನಷ್ಟವನ್ನುಂಟುಮಾಡಿತು. ಆ ನಷ್ಟದ ನಿಖರ ಪ್ರಮಾಣ ಮಾರ್ಚ್ 10ರಂದು ತಿಳಿಯಲಿದೆ.

ಇದನ್ನೂ ಓದಿ: ಯುಪಿ 4ನೇ ಹಂತದ ಚುನಾವಣೆ: ಲಖಿಂಪುರ್‌ಖೇರಿ ಪ್ರಾಂತ್ಯ ಬಿಜೆಪಿಗೆ ಬಿಸಿತುಪ್ಪ!

ಆದರೆ ಪಂಜಾಬ್ ಚುನಾವಣೆಯು ರೈತರ ಪ್ರತಿಭಟನೆಯ ಸಂದರ್ಭದಲ್ಲಿದ್ದ ಬೃಹತ್ ಒಗ್ಗಟ್ಟನ್ನು ದುರ್ಬಲಗೊಳಿಸಿದೆ. ಪಂಜಾಬ್ ಚುನಾವಣಾ ಸಂದರ್ಭದಲ್ಲಾದ ಎರಡು ಬೆಳವಣಿಗೆಗಳು ಪಂಜಾಬ್‌ ಫಲಿತಾಂಶದಲ್ಲಿ ರೈತ ಹೋರಾಟದ ಬಿಸಿಯಾಗಿ ಕಾಣುವುದಿಲ್ಲ ಎಂಬಂತೆ ಮಾಡಿವೆ.

ಮೊದಲನೆಯದು – ಕಾಂಗ್ರೆಸ್ ಬಿಜೆಪಿಯೊಂದಿಗೆ ತೆರೆಮರೆಯ ಹೊಂದಾಣಿಕೆ ಮಾಡಿಕೊಳ್ಳುತ್ತಿದೆ ಎಂಬುದು. ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಆಮ್ ಆದ್ಮಿ ಪಕ್ಷವನ್ನು (ಎಎಪಿ) ಮೂಲೆಗುಂಪು ಮಾಡುವುದು ಈ ಪತ್ರದ ಉದ್ದೇಶವಾಗಿತ್ತು.

ಎರಡನೆಯದು – ರಾಜ್ಯದಲ್ಲಿ ತಮ್ಮದೇ ಆದ ಅಭ್ಯರ್ಥಿಗಳನ್ನು ಹಾಕಲು ರೈತ ಒಕ್ಕೂಟದ ಕೆಲವು ಸಂಘಟನೆಗಳು ಮುಂದಾಗಿದ್ದು, ಕೃಷಿ ಕಾಯ್ದೆಗಳನ್ನು ವಿರೋಧಿಸಿದ್ದ ರಾಜಕೀಯ ಪಕ್ಷಗಳ ಮೇಲೂ ನಂಬಿಕೆಯ ಕೊರತೆಯಿಂದಾಗಿ ಅವರು ಈ ನಿರ್ಧಾರ ಮಾಡಿದರು. ಆದರೆ, ಇದು ಸಂಯುಕ್ತ ಕಿಸಾನ್ ಮೋರ್ಚಾದ ರಾಜಕೀಯ ಮಹತ್ವಾಕಾಂಕ್ಷೆಗೆ ವಿರುದ್ಧವಾಗಿತ್ತು.

ರೈತರ ಪ್ರತಿಭಟನೆಗಳ ಹಿಂದಿದ್ದ ದೊಡ್ಡ ಪ್ರಮಾಣದ ರಾಜಕೀಯ ಒಗ್ಗಟ್ಟನ್ನು ಚುನಾವಣಾ ಒಗ್ಗಟ್ಟಿನಲ್ಲಿ ಸಾಧಿಸಲು ಸಾಧ್ಯವಾಗಲಿಲ್ಲ ಎಂಬುದನ್ನು ಈ ಅಂಶಗಳು ಸೂಚಿಸುತ್ತವೆ.

ರೈತಾಂದೋಲನ ಅಲೆಯ ಹೊರತಾಗಿಯೂ ಬಿಜೆಪಿಗೆ ಲಾಭ..?

ಉತ್ತರ ಪ್ರದೇಶದಲ್ಲಿ ಚುನಾವಣೆಯು ಸಮೃದ್ಧವಾದ ಪಶ್ಚಿಮ ಭಾಗಗಳಿಂದ ಬಡ ಪೂರ್ವ ಪ್ರದೇಶಗಳೆಡೆಗೆ ಚಲಿಸುತ್ತಿದೆ. ಈ ಭಾಗದಲ್ಲಿ ಬಿಜೆಪಿಯ ಅಭಿವೃದ್ದಿ ಭಾಷಣವು ಮಹತ್ವವನ್ನು ಪಡೆಯುವ ಸಾಧ್ಯತೆಯಿದೆ. ಇದಕ್ಕೆ ಉದಾಹರಣೆಯಾಗಿ, ಫೆಬ್ರವರಿ 20 ರಂದು ಹರ್ದೋಯ್‌ನಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಒಕ್ಕೂಟ ಸರ್ಕಾರದ ಉಚಿತ ಪಡಿತರ ಯೋಜನೆಯ ಲಾಭ ಪಡೆದ ವೃದ್ಧೆಯೊಬ್ಬರು ಬಿಜೆಪಿಗೆ ತಮ್ಮ ನಿಷ್ಠೆಯನ್ನು ಪ್ರತಿಜ್ಞೆ ಮಾಡಿದ ವಿಡಿಯೋವನ್ನು ಉಲ್ಲೇಖಿಸಿದ್ದರು. ಇಂತಹ ಭಾಷಣಗಳು ಯುಪಿಯ ಪೂರ್ವ ಭಾಗದಲ್ಲಿ ಬಿಜೆಪಿಗೆ ಫಲ ನೀಡಬಹುದು ಎಂದು ರಾಜಕೀಯ ತಜ್ಞರು ಹೇಳುತ್ತಾರೆ.

ಅಲ್ಲದೆ, ರಾಜ್ಯದ ಪಶ್ಚಿಮ ಭಾಗದ ಹೊರಗೆ, ಕೃಷಿಯಲ್ಲಿ ತೊಡಸಿಕೊಂಡಿರುವ ಪ್ರಬಲ ಜಾತಿಗಳಲ್ಲಿ ಒಂದಾದ ಯಾದವರನ್ನು ಹೊರತುಪಡಿಸಿ ಉಳಿದ ಜಾತಿಗಳು, ಸಮಾಜವಾದಿ ಪಕ್ಷವು (ಎಸ್ಪಿ) ಅಧಿಕಾರಕ್ಕೆ ಬರುವುದನ್ನು ತಡೆಯಲು ಬಿಜೆಪಿ ಜೊತೆಗೆ ಹೋಗುವ ಸಾಧ್ಯತೆಯಿದೆ.

ಉತ್ತರ ಪ್ರದೇಶದಲ್ಲಿ ಮಂಡಲ ರಾಜಕಾರಣ ರಾಜಕೀಯ ಶಕ್ತಿಯಾಗಿದೆ. ವಿಪರ್ಯಾಸವೆಂದರೆ, ಮಂಡಲ್ ರಾಜಕೀಯದ ಸುತ್ತಲಿನ ಬಿರುಕುಗಳು ರೈತರ ನಡುವಿನ ಒಗ್ಗಟ್ಟನ್ನು ಹಾಳುಮಾಡುವ ಸಾಧ್ಯತೆಯಿದೆ.


ಇದನ್ನೂ ಓದಿ: ರೈತರ ಆಕ್ರೋಶ: ಪೊಲೀಸ್, ಅರೆಸೇನಾ ಸಿಬ್ಬಂದಿ ಬೆಂಗಾವಲಿನಲ್ಲಿ ಮತ ಚಲಾಯಿಸಿದ ಸಚಿವ ಅಜಯ್ ಮಿಶ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...