Homeಕರ್ನಾಟಕಕೊಪ್ಪಳ ಹಾಸ್ಟೆಲ್ ನಲ್ಲಿ ದುರಂತ: ಕರೆಂಟ್ ಶಾಕ್ ನಿಂದ ಐವರು ಮಕ್ಕಳ ಸಾವು

ಕೊಪ್ಪಳ ಹಾಸ್ಟೆಲ್ ನಲ್ಲಿ ದುರಂತ: ಕರೆಂಟ್ ಶಾಕ್ ನಿಂದ ಐವರು ಮಕ್ಕಳ ಸಾವು

- Advertisement -
- Advertisement -

ಕೊಪ್ಪಳದ ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿ ವಾಸವಿದ್ದು ಐದು ಮಕ್ಕಳು ಇಂದು ಬೆಳಿಗ್ಗೆ ದುರಂತದ ಸಾವನಪ್ಪಿದ್ದಾರೆ. ಸ್ವಾತಂತ್ರ್ಯೋತ್ಸವಕ್ಕೆಂದು ಇಟ್ಟಿದ್ದ ಧ್ವಜದ ಕಂಬವೂ ಕೇಬಲ್ ಮತ್ತು ವಿದ್ಯುತ್ ವೈರಿನ ಮೇಲೆ ಬಿದ್ದಿದ್ದು ಅದನ್ನು ತೆರವುಗೊಳಿಸಲು ಹೋದ ಐವರು ವಿದ್ಯಾರ್ಥಿಗಳಿಗೆ ಕರೆಂಟ್ ಶಾಕ್ ತಗುಲಿ ಮೃತಪಟ್ಟಿರುವ ದುರ್ಘಟನೆ ಇಂದು ಮುಂಜಾನೆ ಕೊಪ್ಪಳದಲ್ಲಿ ಜರುಗಿದೆ.

ಕಾರಣವೇನು?

ರಾಜ್ಯದ ಅರ್ಧದಷ್ಟು ಹಾಸ್ಟೆಲ್ ಗಳು ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿವೆ. ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡ ನಿರ್ಮಿಸುವಲ್ಲಿ ಎಲ್ಲಾ ಸರ್ಕಾರಗಳೂ ವಿಫಲವಾಗಿವೆ. ಈ ಖಾಸಗಿ ಕಟ್ಟಡಗಳಲ್ಲಿ ಯಾವುದೇ ಸುರಕ್ಷತಾ ಕ್ರಮಗಳಿರುವುದಿಲ್ಲ. ಇದೇ ಈ ದುರಂತಕ್ಕೆ ಪ್ರಮುಖ ಕಾರಣವಾಗಿದೆ.

ಕೊಪ್ಪಳದ ದೇವರಾಜ ಅರಸು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ಸ್ವಂತ ಕಟ್ಟಡವಿಲ್ಲ. ಇರುವ ಬಾಡಿಗೆ ಕಟ್ಟಡದ ಪಕ್ಕದಲ್ಲಿಯೇ ಹೆವಿ ವಿದ್ಯುತ್ ಟ್ರಾನ್ಸ್ಫಾರ್ಮ್ ಇದ್ದು ಅದರ ಕೇಬಲ್ ಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಸ್ವಾತಂತ್ರ್ಯೋತ್ಸವಕ್ಕೆಂದು ಬಾಡಿಗೆಗೆ ತಂದು ನೆಟ್ಟಿದ್ದ ಧ್ವಜಕಂಬವನ್ನು ಕೋತಿಗಳು ಬೀಳಿಸಿವೆ. ಕೇಬಲ್ ಮೇಲೆ ಬಿದ್ದಿದ್ದ ಧ್ವಜಕಂಬವನ್ನು ತೆರೆವುಗೊಳಿಸಲು ಹೋದ ವಿದ್ಯಾರ್ಥಿಗಳಿಗೆ ಒಬ್ಬರಿಂದ ಒಬ್ಬರಿಗೆ ವಿದ್ಯುತ್ ಹರಡಿ ಧಾರುಣ ಸಾವು ಸಂಭವಿಸಿದೆ.

ಐದು ವಿದ್ಯಾರ್ಥಿಗಳಲ್ಲಿ ಮಲ್ಲಿಕಾರ್ಜುನ ಮತ್ತು ಬಸವರಾಜ ಎಸ್.ಎಸ್.ಎಲ್.ಸಿ ಓದುತ್ತಿದ್ದರೆ ಇನ್ನು ದೇವರಾಜ ಮತ್ತು ಕುಮಾರ 9ನೇ ತರಗತಿ ಓದುತ್ತಿದ್ದಾರೆ. ಇನ್ನೊರ್ವ ಗಣೇಶ 8ನೇ ತರಗತಿ. ಅವರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ..

ಪರಿಹಾರವೇನು?

ರಾಜ್ಯದ ಎಲ್ಲಾ ಹಾಸ್ಟೆಲ್ ಗಳಿಗೂ ಸ್ವಂತ ಕಟ್ಟಡವನ್ನು ನಿರ್ಮಾಣ ಮಾಡಲು ಸರ್ಕಾರ ಕೂಡಲೇ ಕ್ರಮ ವಹಿಸಬೇಕು.

ಪ್ರತಿ ಹಾಸ್ಟೆಲ್ ಗೂ ನಿಲಯ ಪಾಲಕರ ನೇಮಕವಾಗಬೇಕು. ಅವರು ಪ್ರತಿದಿನ ಹಾಸ್ಟೆಲ್ ಗೆ ಭೇಟಿ ನೀಡಬೇಕು. ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಬೇಕು.

ಹಾಸ್ಟೆಲ್ ಗಳಲ್ಲಿ ಸಮರ್ಪಕ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ವಿದ್ಯಾರ್ಥಿ ಸ್ನೇಹಿಯಾಗಿಸಬೇಕು.

ಈ ಹಕ್ಕೊತ್ತಾಯಗಳನ್ನಿಟ್ಟುಕೊಂಡು KVS, SFI ವಿದ್ಯಾರ್ಥಿಗಳು ಸಂಘಟನೆಗಳು ಸ್ಥಳದಲ್ಲಿಯೇ ಧರಣಿ ನಡೆಸಲು ಮುಂದಾಗಿವೆ.

ಖಾಸಗಿ ಹಾಸ್ಟೆಲ್ ಲಾಬಿಗೆ ವಿದ್ಯಾರ್ಥಿಗಳು ಬಲಿಯಾದರೆ?

ಇಂದು ಕೊಪ್ಪಳ ಜಿಲ್ಲೆಯ ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿ ಧ್ವಜ ಕಂಭದ ಹಗ್ಗ ಬಿಚ್ಚಲು ಹೋಗಿ 5ಜನ ವಿದ್ಯಾರ್ಥಿಗಳು ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆ ಕಟ್ಟಡ ಬಾಡಿಗೆ ಕಟ್ಟಡವಾಗಿದ್ದು ರಾಜ್ಯದ ಹಲವಾರು ಹಾಸ್ಟೆಲ್‌ಗಳು ಬಾಡಿಗೆ ಹಣದ ಲಾಬಿಗಾಗಿ ಖಾಸಗಿ ಕಟ್ಟಡಗಳಲ್ಲಿ ನಡೆಯುತ್ತಿದೆ. ಹಾಸ್ಟೆಲ್ ಗೆ ಬೇಕಾದ ರಚನೆ ಇಲ್ಲದೆ ಮೂಲಭೂತ ಸೌಕರ್ಯವೂ ಇಲ್ಲದ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಇಂದು ದೇಶದ ಭವಿಷ್ಯವಾಗಬೇಕಿದ್ದ ಐದು ಜನ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳ ಬಲಿ ತಗೆದುಕೊಂಡಿದೆ. ಈ ಖಾಸಗಿ ಲಾಬಿಯನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ವಿರೋಧಿಸುತ್ತದೆ ಎಂದು ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಸಾವಿಗೀಡಾದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು. ಸ್ಥಳೀಯ ವಾರ್ಡನ್, ಜಿಲ್ಲಾಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿಯಿಂದಾಗಿ ಈ ಘಟನೆ ಸಂಭವಿಸಿದೆ. ಇದರ ಸಂಪೂರ್ಣ ಜವಾಬ್ದಾರಿ ಇವರುಗಳೇ ಹೊತ್ತುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಸರ್ಕಾರ, ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯೂ ಎಚ್ಚೆತ್ತುಕೊಂಡು ಈ ರೀತಿಯ ದುರ್ಘಟನೆಗಳ ನಡೆಯದ ಹಾಗೆ ಜವಾಬ್ದಾರಿ ಕಾಯ್ದುಕೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...