HomeಮುಖಪುಟCBI ಮತ್ತು ED ನಿರ್ದೇಶಕರ ಅಧಿಕಾರಾವಧಿ 5 ವರ್ಷ ವಿಸ್ತರಣೆ: ಖಂಡನೆ

CBI ಮತ್ತು ED ನಿರ್ದೇಶಕರ ಅಧಿಕಾರಾವಧಿ 5 ವರ್ಷ ವಿಸ್ತರಣೆ: ಖಂಡನೆ

- Advertisement -
- Advertisement -

ಸಿಬಿಐ ನಿರ್ದೇಶಕ ಮತ್ತು ಇಡಿ ನಿರ್ದೇಶಕರ ಅಧಿಕಾರಾವಧಿಯನ್ನು 5 ವರ್ಷಗಳವರೆಗೆ ವಿಸ್ತರಿಸಬಹುದು ಎಂಬ ಎರಡು ಸುಗ್ರೀವಾಜ್ಞೆಗಳನ್ನು ಇಂದು ರಾಷ್ಟ್ರಪತಿಗಳ ಮೂಲಕ ಸರ್ಕಾರ ಹೊರಡಿಸಿದೆ.

ಇದುವರೆಗೂ ಈ ಎರಡೂ ತನಿಖಾ ಸಂಸ್ಥೆಗಳ ಮುಖ್ಯಸ್ಥರ ಅಧಿಕಾರವಧಿ ಎರಡು ವರ್ಷ ಇತ್ತು. 2018 ರಲ್ಲಿ ಅಧಿಕಾರ ವಹಿಸಿಕೊಂಡ ಜಾರಿ ನಿರ್ದೇಶನಾಲಯದ ಮುಖ್ಯಸ್ಥ ಎಸ್‌ಕೆ ಮಿಶ್ರಾ ಅವರ ವಿಸ್ತರಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಮೂರ್ತಿ ಎಲ್‌ಎನ್ ರಾವ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಅಧಿಕಾರಾವಧಿಯ ವಿಸ್ತರಣೆಯನ್ನು “ಅಪರೂಪದ ಮತ್ತು ಅಸಾಧಾರಣ ಪ್ರಕರಣಗಳಲ್ಲಿ ಮಾತ್ರ ಮಾಡಬೇಕು” ಎಂದು ಹೇಳಿತ್ತು. ಇದರ ಆಧಾರದಲ್ಲಿಯೇ ಕಳೆದ ವರ್ಷ ಅವರ ಅಧಿಕಾರವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿತ್ತು.

ಇದೇ ನವೆಂಬರ್ 17ಕ್ಕೆ ಇಡ ಮುಖ್ಯಸ್ಥರ ಅಧಿಕಾರವಧಿ ಮುಗಿಯುತ್ತಿರುವುದರ ಹಿನ್ನೆಲೆಯಲ್ಲಿ 5 ವರ್ಷಗಳವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿದೆ.

ಜಾರಿ ನಿರ್ದೇಶನಾಲಯ ಕಂದಾಯ ಇಲಾಖೆ, ಹಣಕಾಸು ಸಚಿವಾಲಯದ ಅಡಿಯಲ್ಲಿನ ವಿಶೇಷ ಹಣಕಾಸು ತನಿಖಾ ಸಂಸ್ಥೆಯಾಗಿದ್ದು, ವಿದೇಶಿ ವಿನಿಮಯ ಕಾನೂನುಗಳು ಮತ್ತು ನಿಯಮಗಳು ಮತ್ತು ಮನಿ ಲಾಂಡರಿಂಗ್‌ಗೆ ಸಂಬಂಧಿಸಿದ ಪ್ರಕರಣಗಳನ್ನು ತನಿಖೆ ಮಾಡುತ್ತದೆ.

ಕೇಂದ್ರ ಸರ್ಕಾರದ ಈ ನಡೆಯನ್ನು ಹಲವಾರು ಜನರು ವಿರೋಧಿಸಿದ್ದಾರೆ. “ಆಘಾತಕಾರಿ ಮತ್ತು ಅಸಹ್ಯಕರ! ಸಿಬಿಐ ಮತ್ತು ಇಡಿ ಸ್ವಾತಂತ್ರ್ಯವನ್ನು ಮತ್ತಷ್ಟು ಹಾಳುಮಾಡುವ ಪ್ರಯತ್ನವಿದು” ಎಂದು ಸುಪ್ರೀಂ ಕೋರ್ಟ್ ವಕೀಲರಾದ ಪ್ರಶಾಂತ್ ಭೂಷಣ್ ಟೀಕಿಸಿದ್ದಾರೆ.

“ತಮ್ಮ ಅನುಕೂಲಕ್ಕಾಗಿ ಇಡಿ ನಿರ್ದೇಶಕರ ಅಧಿಕಾರಾವಧಿಯನ್ನು 5 ವರ್ಷಗಳಿಗೆ ವಿಸ್ತರಿಸಲು ಸುಗ್ರೀವಾಜ್ಞೆ ತರಲಾಗಿದೆ. ಮುಂದೆ ಪ್ರಧಾನಿ ಅಧಿಕಾರಾವಧಿಯನ್ನು 10 ವರ್ಷಕ್ಕೆ ವಿಸ್ತರಿಸಲು ಹೊಸ ಕಾನೂನು ತರುತ್ತಾರೆಯೇ? ಪ್ರಜಾಸತ್ತಾತ್ಮಕ ಭಾರತ ನಿರ್ಮಿಸಿದ ಪ್ರತಿಯೊಂದು ಸಂಸ್ಥೆಯನ್ನು ಮೋದಿ ನಿರ್ಲಜ್ಜವಾಗಿ ಮುಗಿಸುತ್ತಿದ್ದಾರೆ. ಬಿಜೆಪಿ + ಆರೆಸ್ಸೆಸ್ + EC + CBI + IT + ED ಯ ಮಹಾಘಟಬಂಧನ್ ಪ್ರಜಾಪ್ರಭುತ್ವವನ್ನು ಕೊನೆಗೊಳಿಸುತ್ತದೆ” ಎಂದು ಕಾಂಗ್ರೆಸ್ ವಕ್ತಾರ ಶ್ರೀವತ್ಸ ಆರೋಪಿಸಿದ್ದಾರೆ.


ಇದನ್ನೂ ಓದಿ; ಸಿಬಿಐ ಈಗ ಕೇಂದ್ರ ಬೆದರಿಕಾ ದಳವಾಗಿ ಮಾರ್ಪಟ್ಟಿದೆ: ಡಿಕೆ ಸಹೋದರರ ಮೇಲಿನ ಸಿಬಿಐ ದಾಳಿಗೆ ಕಾಂಗ್ರೆಸ್ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...