Homeಕರ್ನಾಟಕಜೆಡಿಎಸ್ ಅಧಿಕಾರಕ್ಕೆ ಬಂದರೆ 50% ಗ್ಯಾಸ್ ಸಬ್ಸಿಡಿ, 5 ಸಿಲಿಂಡರ್ ಉಚಿತ: ಹೆಚ್‌.ಡಿ ಕುಮಾರಸ್ವಾಮಿ

ಜೆಡಿಎಸ್ ಅಧಿಕಾರಕ್ಕೆ ಬಂದರೆ 50% ಗ್ಯಾಸ್ ಸಬ್ಸಿಡಿ, 5 ಸಿಲಿಂಡರ್ ಉಚಿತ: ಹೆಚ್‌.ಡಿ ಕುಮಾರಸ್ವಾಮಿ

- Advertisement -
- Advertisement -

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ 50% ಗ್ಯಾಸ್ ಸಬ್ಸಿಡಿ, 5 ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, “ವರ್ಷಕ್ಕೆ 5 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುತ್ತೇವೆ. ಆನಂತರ 10 ಸಿಲಿಂಡರ್‌ಗಳ ಮೇಲೆ 50% ಸಬ್ಸಿಡಿ ನೀಡುತ್ತೇವೆ” ಎಂದಿದ್ದಾರೆ.

ನರೇಂದ್ರ ಮೋದಿಯವರು ಉಜ್ವಲ ಯೋಜನೆಯಡಿ ಬಡವರಿಗೆ ಉಚಿತ ಸಿಲಿಂಡರ್ ಕೊಟ್ಟರು. ಆದರೆ ಆನಂತರ ಬೆಲೆ ದುಪ್ಪಟ್ಟುಗೊಳಿಸಿ ಬಡಜನರ ಹೊಟ್ಟೆ ಮೇಲೆ ಹೊಡೆದರು. ಈಗ ಅಡುಗೆ ಅನಿಲದ ಬೆಲೆ 1000 ರೂ ದಾಟಿದೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿದ್ದಾರೆ. ಹಾಗಾಗಿ ನಾವು ಅರ್ಧ ಹಣಕ್ಕೆ ಅಡುಗೆ ಅನಿಲ ನೀಡುತ್ತೇವೆ ಎಂದರು.

ಅಲ್ಲದೆ ಆಟೋ ಚಾಲಕರಿಗೆ ಪ್ರತಿ ತಿಂಗಳು 2000 ರೂ ನೀಡುತ್ತೇವೆ. ಅಂಗನವಾಡಿ ನೌಕರರ ಹಕ್ಕೊತ್ತಾಯಗಳನ್ನು ಈಡೇರಿಸುತ್ತೇವೆ. ಈ ಕುರಿತು ಆರ್ಥಿಕ ತಜ್ಞರೊಂದಿಗೆ ಚರ್ಚಿಸುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನಮ್ಮ ಪಕ್ಷ 123 ಸ್ಥಾನಗಳನ್ನು ಗೆಲ್ಲುವುದು ಖಚಿತ. ಅದಕ್ಕಾಗಿ ಚುನಾವಣೆಯ ಕೊನೆಯ ದಿನದವರೆಗೂ ಪ್ರಚಾರ ಮಾಡುತ್ತೇನೆ. ಗುರಿ ಮುಟ್ಟುವವರೆಗೂ ಯಾವುದೇ ಕಾರಣಕ್ಕೂ ವಿರಮಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಪ್ರಾದೇಶಿಕ ಪಕ್ಷ ಬಹುಮತ ಗಳಿಸುವುದು ದೊಡ್ಡ ಸಾಧನೆ. ನಮ್ಮ ರಾಜ್ಯದ ರಾಷ್ಟ್ರೀಯ ಪಕ್ಷಗಳು 75 ಸೀಟು ದಾಟುವುದಿಲ್ಲ ಅಂತ ಅಧಿಕಾರಿಗಳು ಚರ್ಚಿಸುತ್ತಿದ್ದಾರೆ. ಕೆಲವರು ಜೆಡಿಎಸ್ ಮುಗಿಸಿದ್ದೇವೆ ಎಂದು ಮಾತನಾಡುತ್ತಿದ್ದಾರೆ. ಆದರೆ ಗ್ರೌಂಡ್ ರಿಯಾಲಿಟಿ ನನಗೆ ಗೊತ್ತಿದೆ. ಏಪ್ರಿಲ್ 10ನೇ ತಾರೀಖಿನವರೆಗೂ ಪಂಚರತ್ನ ಯಾತ್ರೆ ಮುಂದುವರೆಯುತ್ತದೆ. 123 ಸ್ಥಾನ ಮುಟ್ಟಿಸಲು ಜನ ತೀರ್ಮಾನ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ರಾಹುಲ್ ಗಾಂಧಿಗೆ 19 ಪಕ್ಷಗಳ ಬೆಂಬಲ: ಕಾಂಗ್ರೆಸ್‌ನಿಂದ ದೇಶಾದ್ಯಂತ ಒಂದು ತಿಂಗಳ ಜೈ ಭಾರತ್ ಮಹಾಸತ್ಯಾಗ್ರಹ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...