Homeಕರೋನಾ ತಲ್ಲಣಮೊದಲ ದಿನದ ಜೆಇಇ ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರು: ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ

ಮೊದಲ ದಿನದ ಜೆಇಇ ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರು: ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನೆ

ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗಾಗಿ ಮರು ಪರೀಕ್ಷೆ ನಡೆಸಬೇಕೆಂದು ಭಾರತದ ವಿದ್ಯಾರ್ಥಿಗಳ ಒಕ್ಕೂಟ (NSUI) ಒತ್ತಾಯಿಸಿದೆ

- Advertisement -
- Advertisement -

ಪರೀಕ್ಷೆ ಮುಂದೂಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿಯೂ ಕೊರೊನಾ ನಡುವೆಯೇ ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ನಡೆಸಿದ್ದರಿಂದ, ಪರೀಕ್ಷೆಗೆ 50% ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಆರೋಪಿಸಿ ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಜೆಇಇ ಮತ್ತು ನೀಟ್ ಪ್ರವೇಶ ಪರೀಕ್ಷೆಗಳನ್ನು ನಡೆಸಲು ಕೇಂದ್ರ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡ ಕಾರಣ ಸೆಪ್ಟಂಬರ್ 1 ರಿಂದ ಜೆಇಇ ಪರೀಕ್ಷೆ ಪ್ರಾರಂಭವಾಗಿತ್ತು. ಆದರೆ ಪರೀಕ್ಷೆಯ ಮೊದಲ ದಿನ, 50% ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದರು.

ಬಿಹಾರ, ಅಸ್ಸಾಂ ಮತ್ತು ಗುಜರಾತ್ ಸೇರಿದಂತೆ ಹಲವು ರಾಜ್ಯಗಳು ಕೊರೊನಾ ವೈರಸ್ ಮತ್ತು ಪ್ರವಾಹಕ್ಕೆ ಒಳಗಾಗಿರುವುದರಿಂದ, ಆ ರಾಜ್ಯಗಳ ವಿದ್ಯಾರ್ಥಿಗಳು ಮತ್ತಷ್ಟು ತೊಂದರೆಯಲ್ಲಿ ಸಿಲುಕಿದ್ದಾರೆ.

ಅಲ್ಲದೆ, ಎಲ್ಲೆಡೆ ಸರ್ಮಪಕ ಸಾರಿಗೆ ವ್ಯವಸ್ಥೆಯನ್ನು ಇನ್ನೂ ಆರಂಭಿಸದ ಕಾರಣ ದೇಶದ ಹಲವಾರು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸಲು ಸಾಧ್ಯವಾಗಿಲ್ಲ ಎಂದು ಹಲವು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ಇದನ್ನೂ ಓದಿ: #StudentsDislikePMModi: ವಿದ್ಯಾರ್ಥಿಗಳಿಂದ ಟ್ವಿಟರ್ ನಲ್ಲಿ ಅಭಿಯಾನ ಟ್ರೆಂಡಿಂಗ್

“ಇತ್ತೀಚಿನ ದಿನಗಳಲ್ಲಿ ಇಡೀ ದೇಶವು ತೀವ್ರ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ  ದೇಶಾದ್ಯಂತ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನೀಟ್‌ ಮತ್ತು ಜೆಇಇ ಪರೀಕ್ಷೆಗಳನ್ನು ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಸೋಂಕಿತರ ಸಂಖ್ಯೆ ಮತ್ತು ಸತ್ತವರ ಸಂಖ್ಯೆಯು ಪ್ರತಿದಿನ ಹೆಚ್ಚಾಗುತ್ತಿದ್ದರೂ, ಪರೀಕ್ಷೆ ನಡೆಸಲು ಮುಂದಾಗಿರುವ ಕೇಂದ್ರ ಸರ್ಕಾರ, ಸೂಕ್ಷ್ಮವಲ್ಲದ ಕ್ರಮಕ್ಕೆ ಮುಂದಾಗಿದ್ದು, ವಿದ್ಯಾರ್ಥಿಗಳ ಆರೋಗ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತದೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ ಎಂಬುದಾಗಿ ನ್ಯೂಸ್ ಕ್ಲಿಕ್ ವರದಿ ಮಾಡಿದೆ.

ಎಂಜಿನಿಯರಿಂಗ್ ಮತ್ತು ಫಾರ್ಮಸಿ ಕೋರ್ಸ್‌ಗಳಲ್ಲಿ ಪ್ರವೇಶಕ್ಕಾಗಿ ಮಂಗಳವಾರ ರಾಷ್ಟ್ರವ್ಯಾಪಿ ಪ್ರಾರಂಭವಾದ ಜೆಇಇ ಪರೀಕ್ಷೆಯನ್ನು ಬರೆಯಲು ಗುಜರಾತ್‌ನ ಸುಮಾರು 45% ಅಭ್ಯರ್ಥಿಗಳು ಗೈರಾಗಿದ್ದಾರೆ.

“ಮೊದಲ ದಿನ, ನೋಂದಾಯಿತ 3,020 ವಿದ್ಯಾರ್ಥಿಗಳಲ್ಲಿ 1,664 (55%) ಮಾತ್ರ ಹಾಜರಿದ್ದರು. ಆದರೆ 1,356 (45%) ಮಂದಿ ಹಾಜರಾಗಲಿಲ್ಲ. ಸಾಮಾನ್ಯವಾಗಿ, ಪ್ರತಿವರ್ಷ 25-30% ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಬಿಟ್ಟುಬಿಡುತ್ತಾರೆ. ಈ ವರ್ಷ ಶೇಕಡಾವಾರು 45% ಅಭ್ಯರ್ಥಿಗಳು ಗೈರಾಗಿದ್ದಾರೆ” ಎಂದು ಗುಜರಾತ್‌ನ ಜೆಇಇ ಸಂಯೋಜಕ ವೀರೇಂದ್ರ ರಾವತ್ ಹೇಳಿದರು.

ಗುಜರಾತ್‌ನಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಸುಮಾರು 50% ಅಭ್ಯರ್ಥಿಗಳು ಜೆಇಇ ಪರೀಕ್ಷೆಯನ್ನು ಬರೆದಿಲ್ಲ. ಅಸ್ಸಾಂ ಮತ್ತು ಡೆಹ್ರಾಡೂನ್‌ನಲ್ಲಿ 50% ಗೈರಾಗಿದ್ದು, ಉತ್ತರ ಪ್ರದೇಶದಲ್ಲಿ 44%, ಜಾರ್ಖಂಡ್ ಮತ್ತು ರಾಯ್ ಪುರದಲ್ಲಿ ಕ್ರಮವಾಗಿ 31.42% ಮತ್ತು 58% ಅಭ್ಯರ್ಥಿಗಳು ಮೊದಲ ದಿನ ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ವರದಿಗಳು ತಿಳಿಸಿವೆ.

ಸೆಪ್ಟೆಂಬರ್ 1 ರಿಂದ 6 ರವರೆಗೆ ನಡೆಯುತ್ತಿರುವ ಜೆಇಇ ಪರೀಕ್ಷೆಗೆ 8.58 ಲಕ್ಷ ಎಂಜಿನಿಯರಿಂಗ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 13 ರಂದು ನಡೆಸಲು ನಿರ್ಧರಿಸಲಾಗಿರುವ ನೀಟ್ ಪರೀಕ್ಷೆಗೆ 15.97 ಲಕ್ಷ ವೈದ್ಯಕೀಯ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ನೀಟ್‌ ಪರೀಕ್ಷೆಯನ್ನು ಮುಂದೂಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಈ ಕಾರಣದಿಂದ ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗಾಗಿ ಮರು ಪರೀಕ್ಷೆ ನಡೆಸಬೇಕೆಂದು ಭಾರತದ ವಿದ್ಯಾರ್ಥಿಗಳ ಒಕ್ಕೂಟ (NSUI) ಒತ್ತಾಯಿಸಿದೆ.


ಇದನ್ನೂ ಓದಿ: ಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...