Homeಕರ್ನಾಟಕ50% ಮೀಸಲಾತಿ ಮಿತಿ ಸಾಂವಿಧಾನಿಕವಲ್ಲ, ಅದು ಪ್ರಕರಣವೊಂದರ ಸುಪ್ರೀಂ ಆದೇಶದ ಭಾಗವಷ್ಟೇ: ಸಿದ್ದರಾಮಯ್ಯ

50% ಮೀಸಲಾತಿ ಮಿತಿ ಸಾಂವಿಧಾನಿಕವಲ್ಲ, ಅದು ಪ್ರಕರಣವೊಂದರ ಸುಪ್ರೀಂ ಆದೇಶದ ಭಾಗವಷ್ಟೇ: ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಮೀಸಲಾತಿ ಹೋರಾಟಗಳು ನಡೆಯುತ್ತಲೇ ಇವೆ. ಈ ಮೀಸಲಾತಿ ಕಗ್ಗಂಟನ್ನು ಬಿಡಿಸಲು ಮೀಸಲಾತಿ ಪ್ರಮಾನವನ್ನು ಕನಿಷ್ಟ 75%ಗೆ ಹೆಚ್ಚಿಸುವ ಬಗ್ಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳಿಗೆ ಮೀಸಲಾತಿ ನೀಡುವ ಉದ್ದೇಶದಿಂದ ರಾಜ್ಯ ಬಿಜೆಪಿ ಸರ್ಕಾರವು ಮುಸ್ಲಿಂ ಸಮುದಾಯದ ಮೀಸಲಾತಿಯನ್ನೇ ರದ್ದುಗೊಳಿಸಿದೆ. ‘ಈ ತೀರ್ಮಾನವು ಅತಿ ಕಳಪೆ ಮತ್ತು ದೋಷಪೂರಿತ ನಿರ್ಧಾರಕ್ಕೆ ಪ್ರಥಮ ಸಾಕ್ಷಿ’ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ.

ಈ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ”ಮೀಸಲಾತಿ ಪ್ರಮಾಣವನ್ನು ಕನಿಷ್ಠ ಶೇಕಡ 75ಕ್ಕೆ ಹೆಚ್ಚಿಸಿ, ಪ್ರತಿಯೊಂದು ಜಾತಿಗಳಿಗೆ ಅವುಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಿದರೆ ಈಗಿನ ಮೀಸಲಾತಿ ವಿವಾದಕ್ಕೆ ಶಾಶ್ವತ ಪರಿಹಾರ ಸಿಗಲಿದೆ” ಎಂದು ಹೇಳಿದ್ದಾರೆ.

”ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಒಟ್ಟು ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುತ್ತೇವೆ. ಎಲ್ಲ ಜಾತಿ ಜನರಿಗೆ ಅವರ ಜನಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಮೀಸಲಾತಿ ಕಲ್ಪಿಸುತ್ತೇವೆ. ಯಾರ ಮೀಸಲಾತಿಯನ್ನೂ ರದ್ದುಗೊಳಿಸುವುದಿಲ್ಲ” ಎಂದು ತಿಳಿಸಿದ್ದಾರೆ.

”ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ನೀಡಿ, ಶೇ 50ರ ಮಿತಿಯನ್ನು ಉಲ್ಲಂಘಿಸಿದೆ. ಕೇಂದ್ರವು ಒಟ್ಟು ಮೀಸಲಾತಿ ಪ್ರಮಾಣ ಹೆಚ್ಚಿಸಲು ಅನುಕೂಲ ಆಗುವಂತೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ರದ್ದು ವಿಚಾರ: ಅತಿ ಕಳಪೆ, ದೋಷಪೂರಿತ ನಿರ್ಧಾರವೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

”ಮೀಸಲಾತಿಗೆ ಶೇ 50ರ ಮಿತಿ ಎನ್ನುವುದು ಇಂದಿರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಭಾಗವೇ ಹೊರತು, ಅದು ಸಾಂವಿಧಾನಿಕವಾದುದು ಅಲ್ಲ. ವಿಶೇಷ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬಹುದೆಂದು ಅದೇ ಆದೇಶದಲ್ಲಿ ಹೇಳಲಾಗಿದೆ” ಎಂದು ಹೇಳಿದ್ದಾರೆ.

”ಮುಸ್ಲಿಂ ಮೀಸಲಾತಿ ರದ್ದು ಪಡಿಸಿರುವುದಕ್ಕೆ ಚುನಾವಣಾ ಲಾಭದ ದುರುದ್ದೇಶ ಬಿಟ್ಟರೆ ಬೇರೆ ಕಾರಣಗಳು ಇರಲಿಲ್ಲ. ಮುಸ್ಲಿಂ ಮೀಸಲಾತಿ ರದ್ದತಿ ಆದೇಶವು ರದ್ದಾದರೆ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಕ್ಕೆ ನೀಡಿರುವ ಹೆಚ್ಚುವರಿ ಮೀಸಲಾತಿಯೂ ರದ್ದಾಗುತ್ತದೆ. ಅರ್ಹ ಜಾತಿಗಳಿಗೆ ಮೀಸಲಾತಿ ನೀಡುವುದಕ್ಕೆ ಕಾಂಗ್ರೆಸ್‌ನ ವಿರೋಧ ಇಲ್ಲ. ಆದರೆ, ಕಲ್ಪಿತ ಸುಳ್ಳುಗಳ ಮೂಲಕ ಬಿಜೆಪಿ ಕನ್ನಡಿಯೊಳಗಿನ ಗಂಟು ತೋರಿಸಿ ಜನರನ್ನು ತಪ್ಪು ದಾರಿಗೆಳೆಯಲು ಹೊರಟಿದೆ” ಎಂದು ಹೇಳಿದ್ದಾರೆ.

”ಕಾಂತರಾಜ್ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗವು ಮನೆಮನೆಗೆ ತೆರಳಿ ವೈಜ್ಞಾನಿಕವಾಗಿ ನಡೆಸಿದ್ದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯ ಸರ್ಕಾರದ ಕೈಯಲ್ಲಿದೆ. ಆ ವರದಿ ಆಧಾರದಲ್ಲಿ ಮೀಸಲಾತಿ ಹೆಚ್ಚಿಸಿದರೆ ನ್ಯಾಯಾಲಯ ಕೂಡಾ ಮಾನ್ಯತೆ ನೀಡಲಿದೆ” ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರಕ್ಕೆ ಸುಪ್ರೀಂ ಛೀಮಾರಿ ಹಾಕಿದ ಬಳಿಕ ಪ್ರತಿಕ್ರಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ”ಮೀಸಲಾತಿ ಹೆಚ್ಚಿಸುವ ಹೆಸರಿನಲ್ಲಿ ಲಿಂಗಾಯತರು, ಒಕ್ಕಲಿಗರು, ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ರಾಜ್ಯದ ಬಿಜೆಪಿ ಸರ್ಕಾರ ಮಾಡಿರುವ ದ್ರೋಹವು ಸುಪ್ರೀಂ ಕೋರ್ಟ್‌ ವಿಚಾರಣೆ ವೇಳೆ ಬಯಲಾಗಿದೆ” ಎಂದು ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ”ಮೀಸಲಾತಿ ಹೆಸರಿನಲ್ಲಿ ನಕಲಿ ತೀರ್ಮಾನ ಮಾಡುವ ಮೂಲಕ ಬಿಜೆಪಿಯು ಡಾ.ಬಿ.ಆರ್‌. ಅಂಬೇಡ್ಕರ್‌ ಅವರನ್ನು ಅವಮಾನಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ರಾಜ್ಯದ ಜನರಿಗೆ ಕ್ಷಮಿಸಲಾಗದ ದ್ರೋಹ ಮಾಡಿದೆ” ಎಂದು ಆರೋಪಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...