Homeಮುಖಪುಟಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ಕಾಮೇಡಿಯನ್‌‌ ಮುನಾವರ್‌ ಫಾರೂಖಿಗೆ ಪ್ರತಿದಿನ 50 ಬೆದರಿಕೆ ಕರೆ; ಹಲವು ಶೋ ರದ್ದು

ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ

- Advertisement -
- Advertisement -

ಹಿಂದುತ್ವವಾದಿ ಸಂಘಟನೆಗಳ ಬೆದರಿಕೆಯಿಂದಾಗಿ ತನಗೆ ಕೆಲಸ ಮಾಡಲು ಆಗುತ್ತಿಲ್ಲ ಎಂದು ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್ ಫಾರೂಖಿ ಭಾನುವಾರ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಕ್ಟೋಬರ್ 27 ರಂದು ಹಿಂದುತ್ವ ಗುಂಪುಗಳು ಸ್ಥಳಗಳನ್ನು ಸುಟ್ಟುಹಾಕುವುದಾಗಿ ಸಂಘಟಕರಿಗೆ ಬೆದರಿಕೆ ಹಾಕಿದ್ದರಿಂದ ಮುನಾವರ್‌ ಅವರು ಮೂರು ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

“ನನಗೆ ಪ್ರತಿದಿನ 50 ಬೆದರಿಕೆ ಕರೆಗಳು ಬರುತ್ತವೆ. ನಾನು ನನ್ನ ಸಿಮ್ ಕಾರ್ಡ್ ಅನ್ನು ಮೂರು ಬಾರಿ ಬದಲಾಯಿಸಬೇಕಾಗಿತ್ತು. ನನ್ನ ಫೋನ್‌ ನಂಬರ್‌ ಸೋರಿಕೆಯಾದಾಗ ನನಗೆ ಕರೆ ಮಾಡಿ ನಿಂದಿಸಲಾಗುತ್ತಿದೆ” ಎಂದು ಮುನಾವರ್‌ ಭಾನುವಾರದಂದು NDTV ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದೂ ದೇವತೆಗಳ ಅಪಹಾಸ್ಯ: ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ವಿರುದ್ದ ಯಾವುದೇ ಪುರಾವೆಯಿಲ್ಲ ಎಂದ ಪೊಲೀಸರು

“ಸುಮಾರು 1500 ಜನರು ಮೂರು ಪ್ರಕರ್ಶನಗಳಿಗೆ ಒಂದು ತಿಂಗಳ ಮೊದಲೇ ಟಿಕಟ್‌ ಕಾಯ್ದಿರಿಸಿದ್ದಾರೆ. ಇದು ಹಲವಾರು ಜನರು ವಾಸಿಸುವ ದೇಶದ ಕರಾಳ ಸತ್ಯವಾಗಿದೆ. ನನ್ನ ವಿಷಯದಲ್ಲಿ, ಅವರು ಧರ್ಮವನ್ನು ಬಳಸುತ್ತಿದ್ದು, ಇದು ನನ್ನನ್ನು ಭಯಭೀತನಾನ್ನಾಗಿ ಮಾಡುತ್ತದೆ” ಎಂದು ಮುನಾವರ್‌ ಹೇಳಿದ್ದಾರೆ.

ಬಿಜೆಪಿ ರಾಜಕಾರಣಿಯೊಬ್ಬರ ಮಗ ನೀಡಿದ ದೂರಿನ ಆಧಾರದ ಮೇಲೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಜನವರಿಯಲ್ಲಿ ಮುನಾವರ್‌ ಅವರನ್ನು ಬಂಧಿಸಿದಾಗಿನಿಂದ ಹಿಂದುತ್ವ ಗುಂಪುಗಳು ನಿರಂತರವಾಗಿ ಅವರನ್ನು ಗುರಿಯಾಗಿಸಿಕೊಂಡಿವೆ.

ಅವರು ತಮ್ಮ ಪ್ರದರ್ಶನಗಳನ್ನು ಹಿಂದೂ ದೇವತೆಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ‘ನೀಡಲಿದ್ದಾರೆ’ ಎಂದು ದೂರುದಾರರು ಆರೋಪಿಸಿದ್ದರು. ಆದರೆ ಅಂದು ಮುನಾವರ್‌ ಅವರನ್ನು ಕಾರ್ಯಕ್ರಮ ಪ್ರಾರಂಭಿಸುವ ಮುನ್ನವೆ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಸ್ಟಾಂಡ್‌ಅಪ್‌ ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್‌ ಫಾರೂಕಿಗೆ ಮಧ್ಯಂತರ ಜಾಮೀನು

ನಂತರ ಇಂದೋರ್‌ ಪೊಲೀಸರು, ಮುನಾವರ್‌ ಹಿಂದೂ ದೇವತೆಗಳನ್ನು ಅವಮಾನಿಸಿದ್ದಾರೆ ಎಂಬುದಕ್ಕೆ ಯಾವುದೇ ದೃಶ್ಯ ಸಾಕ್ಷ್ಯಗಳಿಲ್ಲ ಎಂದು ಒಪ್ಪಿಕೊಂಡಿದ್ದರು.

ಎರಡು ಗಂಟೆಗಳ ಅವಧಿಯ ಕಾರ್ಯಕ್ರಮದ 10 ಸೆಕೆಂಡುಗಳ ವೀಡಿಯೊ ತುಣುಕುಗಳನ್ನು ಹಂಚಿಕೊಳ್ಳುವ ಮೂಲಕ ಬಜರಂಗದಳವು ತನ್ನನ್ನು ಗುರಿಯಾಗಿಸಿಕೊಂಡಿದೆ. ವೀಡಿಯೊ ತುಣುಕನ್ನು ಸಂದರ್ಭಕ್ಕೆ ಮೀರಿ ತೋರಿಸಲಾಗುತ್ತಿದೆ ಎಂದು ಮುನಾವರ್‌ ಹೇಳಿದ್ದಾರೆ.

ಅವರು ಬಿಡುಗಡೆಯಾದ ನಂತರ, ತಾನು 50 ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಅವುಗಳಲ್ಲಿ 90% ಸಂದರ್ಭ ಪ್ರೇಕ್ಷಕರು ತನ್ನ ಧರ್ಮವನ್ನು ನೋಡದೆ ಚಪ್ಪಾಳೆ ತಟ್ಟಿ ಗೌರವಿಸಿದ್ದಾರೆ. ತನ್ನ ಒಂದು ಕಾರ್ಯಕ್ರಮದಲ್ಲಿ ಸುಮಾರು 80 ಜನರು ಜೀವನೋಪಾಯವನ್ನು ಗಳಿಸುತ್ತಾರೆ. ಈಗ ಒಂದುವರೆ ವರ್ಷಗಳಿಂದ ತಾನು ಕೆಲಸವಿಲ್ಲದೆ ಇದ್ದೇನೆ. ದ್ವೇಷ ಗೆದ್ದಿದೆ, ಆದ್ದರಿಂದಲೇ ಪ್ರದರ್ಶನಗಳನ್ನು ರದ್ದುಗೊಳಿಸಲಾಯಿತು. ಆದರೆ ಅದು ಎಲ್ಲಿಯವರೆಗೆ ಗೆಲ್ಲಲು ಸಾಧ್ಯ? ನಾವು ಖಂಡಿತಾ ಗೆಲ್ಲುತ್ತೇವೆ” ಎಂದು ಮುನಾವರ್‌ ಫಾರೂಖಿ ಹೇಳಿದ್ದಾರೆ.

ಇದನ್ನೂ ಓದಿ: ಕೊನೆಗೂ ಜೈಲಿನಿಂದ ಬಿಡುಗಡೆಗೊಂಡ ಸ್ಟ್ಯಾಂಡ್‌‌ಅಪ್‌ ಕಾಮೇಡಿಯನ್‌ ಮುನಾವರ್‌ ಫಾರೂಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...