Homeಕರ್ನಾಟಕವೀರಶೈವ-ಲಿಂಗಾಯುತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ

ವೀರಶೈವ-ಲಿಂಗಾಯುತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಅನುದಾನ

ಈಗಾಗಲೇ ಕರ್ನಾಟಕ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಿ ಹಲವು ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದೆ. ಜೊತೆಗೆ ಕನ್ನಡಿಗರಿಂದ ಟೀಕೆಗೂ ಒಳಗಾಗಿದೆ.

- Advertisement -
- Advertisement -

ಕರ್ನಾಟಕ ಸರ್ಕಾರ ವೀರಶೈವ ಮತ್ತು ಲಿಂಗಾಯತ ಅಭಿವೃದ್ಧಿ ನಿಗಮ‌ ಸ್ಥಾಪನೆ ಮಾಡಿ, ನಿಗಮಕ್ಕೆ 500 ಕೋಟಿ ಅನುದಾನವನ್ನ ಮೀಸಲಿಟ್ಟಿರುವ ಕುರಿತು ಅಧಿಕೃತವಾದ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಹಿ ಇರುವ ಅಧಿಕೃತ ಆದೇಶ ಪ್ರತಿ ಇಂದು ಬಿಡುಗಡೆಯಾಗಿದೆ.

ರಾಜ್ಯದಲ್ಲಿ ವೀರಶೈವ- ಲಿಂಗಾಯತ ಸಮಾಜದ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಅಗತ್ಯವಾಗಿರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ನಿಗಮ ಸ್ಥಾಪನೆಗೆ ಆದೇಶ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂಪಾಯಿ ಅನುದಾನ ಒದಗಿಸಲಾಗುವುದು ಎಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

 

ಇದನ್ನೂ ಓದಿ: ‘ಮರಾಠರು ತಲತಲಾಂತರದಿಂದ ಇಲ್ಲಿಯೇ ಇದ್ದಾರೆ’- ಯಡಿಯೂರಪ್ಪ ಹೇಳಿಕೆಗೆ ನೆಟ್ಟಿಗರ ಆಕ್ರೋಶ!

 

ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ 2013, ಸೆಕ್ಷನ್ 7ರ ಅನ್ವಯ ನೋಂದಾಯಿಸಿ ಸ್ಥಾಪಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ನೋಂದಾಯಿಸುವ ಕಾರ್ಯವಹಿಸಲು ಹಾಗೂ ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನು ಭರ್ತಿ ಮಾಡುವ ತನಕ ಸದರಿ ನಿಗಮದ ಕಾರ್ಯಕ್ರಮಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಿಗೆ ವಹಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈಗಾಗಲೇ ಕರ್ನಾಟಕ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡಿ ಹಲವು ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದೆ. ಜೊತೆಗೆ ಕನ್ನಡಿಗರಿಂದ ಟೀಕೆಗೂ ಒಳಗಾಗಿದೆ. ಒಕ್ಕಲಿಗ, ಕ್ರೈಸ್ತ, ಆರ್ಯ-ಈಡಿಗ, ಕುರುಬ ಸಮುದಾಯದವರು ಸಹ ತಮ್ಮ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.


ಇದನ್ನೂ ಓದಿ: ಸರ್ಕಾರ ಮರಾಠಿಗರ ಪ್ರಾಧಿಕಾರ ರಚಿಸಿ ಕನ್ನಡಿಗರನ್ನ ಕೆರಳಿಸಿದೆ – ಸಿದ್ದರಾಮಯ್ಯ ಸರಣಿ ಟ್ವೀಟ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಟಿಎಂಸಿಯನ್ನು ಭಷ್ಟ ಎನ್ನುವ ಮೋದಿ ಕನ್ನಡಿ ನೋಡಿಕೊಳ್ಳಬೇಕು; ಅವರ ಪಕ್ಷ ಡಕಾಯಿತರಿಂದ ತುಂಬಿದೆ: ಮಮತಾ

0
ಪಶ್ಚಿಮ ಬಂಗಾಳದಲ್ಲಿ ಕೇಂದ್ರ ತಂಡಗಳು ನಡೆಸಿರುವ ತನಿಖೆಗಳ ಕುರಿತು ಶ್ವೇತಪತ್ರ ಹೊರಡಿಸುವಂತೆ ಒತ್ತಾಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, "ತಮ್ಮ ಟಿಎಂಸಿ ಭ್ರಷ್ಟಾಚಾರದ ಆರೋಪ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಕನ್ನಡಿಯಲ್ಲಿ...