Homeಮುಖಪುಟಒಡಿಶಾ ರೈಲು ಅಪಘಾತದಲ್ಲಿ ಸತ್ತವರ ಸಂಖ್ಯೆ 500 ರಷ್ಟಿದೆ, ಆದರೆ ಕೇಂದ್ರ ಕಡಿಮೆ ಲೆಕ್ಕ ತೋರಿಸುತ್ತಿದೆ:...

ಒಡಿಶಾ ರೈಲು ಅಪಘಾತದಲ್ಲಿ ಸತ್ತವರ ಸಂಖ್ಯೆ 500 ರಷ್ಟಿದೆ, ಆದರೆ ಕೇಂದ್ರ ಕಡಿಮೆ ಲೆಕ್ಕ ತೋರಿಸುತ್ತಿದೆ: ಮಮತಾ ಬ್ಯಾನರ್ಜಿ ಆರೋಪ

- Advertisement -
- Advertisement -

ಒಡಿಶಾ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 500 ರಷ್ಟಿದೆ. ಆದರೆ, ಕೇಂದ್ರ ಸರ್ಕಾರ ಕಡಿಮೆ ಲೆಕ್ಕ ತೋರಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದುವರೆಗೆ 275 ರಷ್ಟಿದೆ ಎಂದು ಅಧಿಕೃತ ಅಂಕಿ ಅಂಶವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಜೂನ್ 3, ಶನಿವಾರದಂದು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಮತಾ ಬ್ಯಾನರ್ಜಿ ಅವರು, ”ಸಾವಿನ ಸಂಖ್ಯೆ 500 ಕ್ಕೂ ಹೆಚ್ಚಾಗಬಹುದು ಎಂದು ಹೇಳಿದರು. ಅದೇ ಸಮಯದಲ್ಲಿ ಅಪಘಾತ ಸ್ಥಳದಲ್ಲಿ ಉಪಸ್ಥಿತರಿದ್ದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ಬ್ಯಾನರ್ಜಿ ಅವರ ಹೇಳಿಕೆಯನ್ನು ತಳ್ಳಿಹಾಕಿದರು. ಆ ಸಮಯದಲ್ಲಿ ಸಾವಿನ ಸಂಖ್ಯೆ 238 ಆಗಿತ್ತು ಎಂದು ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಆರೋಪವನ್ನು ಕೇಂದ್ರ ಸರ್ಕಾರ ಮತ್ತು ಒಡಿಶಾ ರಾಜ್ಯ ಸರ್ಕಾರ ತಳ್ಳಿಹಾಕಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪಾರದರ್ಶಕ ರೀತಿಯಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿದೆ.

ಈ ಬಗ್ಗೆ ಜೂನ್ 4ರಂದು ಭಾನುವಾರ ಕೋಲ್ಕತ್ತಾದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಿದ ಮಮತಾ ಬ್ಯಾನರ್ಜಿ ಅವರು, ”ಸಾವಿನ ಅಂಕಿಅಂಶಗಳನ್ನು ಪ್ರಶ್ನಿಸಿದ್ದಾರೆ. ಪಶ್ಚಿಮ ಬಂಗಾಳವೊಂದರಲ್ಲೇ 182 ಜನರು ನಾಪತ್ತೆಯಾಗಿದ್ದಾರೆ ಮತ್ತು 61 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ. ಹಾಗಾದರೆ, 121 ಜನರ ಅಂಕಿಅಂಶಗಳು ಎಲ್ಲಿ ಹೋದವು?” ಎಂದು ಮಮತಾ ಪ್ರಶ್ನೆ ಮಾಡಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಈ ಆರೋಪವನ್ನು ಒಡಿಶಾ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಪ್ಪಿಲ್ಲ. ದುರಂತದ ಸಂದರ್ಭದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿಬಿಐ ಕೆಲಸ ಅಪರಾಧಗಳನ್ನು ತನಿಖೆ ಮಾಡುವುದು, ರೈಲ್ವೆ ಅಪಘಾತಗಳ ತನಿಖೆ ಮಾಡುವುದಲ್ಲ: ಪ್ರಧಾನಿಗೆ ಖರ್ಗೆ ಪತ್ರ

ಮಹಾರಾಷ್ಟ್ರದ ಥಾಣೆಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅನುರಾಗ್ ಠಾಕೂರ್, ”ಮಮತಾ ಬ್ಯಾನರ್ಜಿ ಅವರು ತಮ್ಮ ಮಮತೆಯನ್ನು (ಪ್ರೀತಿ) ಕಳೆದುಕೊಂಡಿದ್ದಾರೆ. ಬಿಜೆಪಿ ಆಡಳಿತ ನಡೆಸದ ಒಡಿಶಾ ರಾಜ್ಯ ಸರ್ಕಾರವು ಅಂಕಿಅಂಶಗಳನ್ನು ನೀಡಿದೆ” ಎಂದಿದ್ದಾರೆ.

ಈ ಬಗ್ಗೆ ಒಡಿಶಾದ ಮುಖ್ಯ ಕಾರ್ಯದರ್ಶಿ ಪ್ರದೀಪ್ ಕುಮಾರ್ ಜೆನಾ ಅವರು ಸೋಮವಾರ ಪ್ರತಿಕ್ರಿಯಿಸಿದ್ದು, ”ರಾಜ್ಯ ಸರ್ಕಾರಕ್ಕೆ ಸತ್ತವರ ಸಂಖ್ಯೆಯನ್ನು ಮರೆಮಾಚುವ ಉದ್ದೇಶವಿಲ್ಲ. ಸಂಪೂರ್ಣ ರಕ್ಷಣಾ ಕಾರ್ಯಾಚರಣೆಯು ಸಾರ್ವಜನಿಕ ವೀಕ್ಷಣೆಯಲ್ಲಿ ನಡೆಯುತ್ತಿದೆ ಮತ್ತು ಮಾಧ್ಯಮ ಪ್ರವೇಶಕ್ಕೆ ಯಾವುದೇ ನಿರ್ಬಂಧಗಳಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಸಾವಿನ ಸಂಖ್ಯೆ 288 ಎಂದು ಹೇಳಲಾಗಿತ್ತು, ಆದರೆ ಬಾಲಸೋರ್ ಜಿಲ್ಲಾಧಿಕಾರಿ ಮತ್ತೊಮ್ಮೆ ಸಾವಿನ ಸಂಖ್ಯೆಯನ್ನು ಪರಿಶೀಲಿಸಿದ್ದಾರೆ ಭಾನುವಾರ ಬೆಳಿಗ್ಗೆ 275 ರಷ್ಟಿದೆ ಎಂದು ಹೇಳಲಾಗಿದೆ. ಇದು ಅನುಮಾನಕ್ಕೆ ಕಾರಣವಾಗಿದೆ.

ಈ ಸಂಖ್ಯೆಗಳಲ್ಲಿನ ಬದಲಾವಣೆಯ ಬಗ್ಗೆ ಜೆನಾ ಅವರನ್ನು ಮಾಧ್ಯಮದವರು ಪ್ರಶ್ನೆ ಮಾಡಿದಾಗ, ”ಸತ್ತವರ ಕೆಲವು ದೇಹಗಳನ್ನು ದ್ವಿಗುಣವಾಗಿ ಎಣಿಸಲಾಗಿದೆ, ಅದಕ್ಕಾಗಿಯೇ ಆರಂಭದಲ್ಲಿ ಹೆಚ್ಚಿನ ಸಂಖ್ಯೆ ಇತ್ತು” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳದಲ್ಲಿ ತೀವ್ರಗೊಳ್ಳಲಿರುವ ಮಳೆ; ಆರೇಂಜ್-ಯೆಲ್ಲೋ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

0
ಮುಂದಿನ ಕೆಲವು ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಗುರುವಾರ ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೇ 18 ರಂದು ಪಾಲಕ್ಕಾಡ್ ಮತ್ತು ಮಲಪ್ಪುರಂ, ಮೇ 19 ರಂದು...