Homeಮುಖಪುಟಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ 'ಲಕ್ಷ್ಮಿ'! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ...

ಹಳ್ಳಿ ತಲುಪಲು 500 ಕಿ.ಮೀ. ಸೈಕಲ್ ಪ್ರಯಾಣ ಹೊರಟ ‘ಲಕ್ಷ್ಮಿ’! : ಮೋದಿ ಪ್ಯಾಕೇಜ್‌ನಿಂದ ಪ್ರಯೋಜನವಿಲ್ಲ ಎನ್ನುತ್ತಾರೆ.

- Advertisement -
- Advertisement -

ಪತಿ ಹಾಗೂ ಸಣ್ಣ ಮಗುವಿನೊಂದಿಗೆ ಲಕ್ನೋದಲ್ಲಿ ದಿನಗೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದ ಲಕ್ಷ್ಮಿ ಸಾಹು 500 ಕಿ.ಮೀ. ದೂರದ ಛತ್ತೀಸ್ ಗಡದ ತನ್ನ ಹಳ್ಳಿಗೆ ಸೈಕಲ್ ಮೂಲಕ ಹೊರಟಿದ್ದಾರೆ.

ಲಕ್ಷ್ಮಿ ಸಾಹು ಉತ್ತರಪ್ರದೇಶದ ರಾಜಧಾನಿಯಲ್ಲಿ ತನ್ನ ಪತಿಯೊಂದಿಗೆ ದೈನಂದಿನ ಕೂಲಿ ಕಾರ್ಮಿಕಳಾಗಿ ಜೀವನ ಸಾಗಿಸುತ್ತಿದ್ದರು. ದೇಶದಾದ್ಯಂತ ವರದಿಯಾದ ವಲಸೆ ಕಾರ್ಮಿಕರ ದುರಂತ ಕತೆಗಳ ನಡುವೆ ಸುರಕ್ಷಿತವಾಗಿ ಮನೆಗೆ ಸೇರುವುದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿರುವುದಾಗಿ ಅವರು ಹೇಳುತ್ತಾರೆ.

“ಕೆಲಸವಿಲ್ಲದಿದ್ದಾಗ ಸಂತೋಷವಾಗಿರಲು ಹೇಗೆ ಸಾಧ್ಯ? ನಾನು ಕಾರ್ಮಿಕಳು ಉದ್ಯೋಗವಿಲ್ಲ … ಏನು ತಿನ್ನಲಿ? ಇದಕ್ಕಿಂತ ನನ್ನು ಹಳ್ಳಿಗೆ ಹಿಂತಿರುಗಿ ಹೊಲಗಳಲ್ಲಿ ಕೆಲಸ ಮಾಡುವುದು ಉತ್ತಮ” ಎಂದು ಅವರು ಹೇಳುತ್ತಾರೆ.

ಲಕ್ಷ್ಮಿ ಸಾಹು, ಅವರ ಪತಿ ಮತ್ತು ಅವರ ಚಿಕ್ಕ ಮಗು ಮಂಗಳವಾರ ರಾತ್ರಿಯಿಂದ ತಮ್ಮ ಗುಡಿಸಲಿನಿಂದ ಹೊರಟು, 70 ಕಿ.ಮೀ ದೂರದಲ್ಲಿರುವ ರಾಯ್ ಬರೇಲಿಯನ್ನು ತಲುಪಿದ್ದರು. ಅಲ್ಲಿ ಅವರು ಪತ್ರಕರ್ತರನ್ನು ಭೇಟಿಯಾಗುವಾಗ ಬಿಸಿಲಿಗೆ ಬಳಲಿ ಚಹಾ ಕುಡಿಯಲು ರಸ್ತೆಯ ಬದಿಯಲ್ಲಿ ಕುಳಿತಿದ್ದರು.

ಲಕ್ಷ್ಮಿ ಮತ್ತು ಅವರ ಕುಟುಂಬವು ತಮ್ಮ ಮುಂದಿನ ಪ್ರಯಾಣಕ್ಕಾಗಿ ತಯಾರಾಗುತ್ತಿದ್ದಂತೆ ಪತ್ರಕರ್ತರು ಪ್ರಧಾನ ಮಂತ್ರಿಯ ಪ್ಯಾಕೇಜಿನ ಪ್ರಯೋಜನಗಳ ಬಗ್ಗೆ ಪ್ರಶ್ನೆ ಕೇಳಿದ್ದಾರೆ.

“ಅದರಿಂದ ಏನು ಪ್ರಯೋಜನ? ನಾವು ಇದ್ದಲ್ಲಿ ನಮಗೆ ಪಡಿತರ ಸಿಗಲಿಲ್ಲ. ನಾನು ಮೂರು ಪಡಿತರ ಅಂಗಡಿಗಳಿಗೆ ಹೋಗಿದ್ದೆ. ಎಲ್ಲರೂ ನನ್ನ ಆಧಾರ್ ಕೇಳಿದರು, ಯಾರೂ ನನಗೆ ಅಕ್ಕಿ ಕೊಟ್ಟಿಲ್ಲ. ಅವರು ನಮಗೆ ಮನೆಗೆ ಹೋಗಲು ಬಸ್ಸುಗಳನ್ನು ವ್ಯವಸ್ಥೆ ಮಾಡಿದ್ದರೆ ಚೆನ್ನಾಗಿತ್ತು. ಕನಿಷ್ಠ ಸರ್ಕಾರವು ನಮ್ಮನ್ನು ನೋಡಿಕೊಳ್ಳುತ್ತದೆ ಎಂದು ನಾವು ಹೇಳಬಹುದಿತ್ತು,” ಎಂದು ಹೇಳತ್ತಾರೆ.

ಪ್ರಧಾನಿ ಮೋದಿ “ಪ್ಯಾಕೇಜ್ … ಸಣ್ಣ ಉದ್ಯಮಗಳು, ಕಾರ್ಮಿಕರು, ರೈತರು, ಮಧ್ಯಮ ವರ್ಗ ಮತ್ತು ಗೃಹ ಕೈಗಾರಿಕೆಗಳಿಗೆ ಸಹಾಯ ಮಾಡುತ್ತದೆ. ಇದು ವಲಸೆ ಕಾರ್ಮಿಕರ ಯೋಗಕ್ಷೇಮದ ಮೇಲೆ  ಕೇಂದ್ರೀಕರಿಸುತ್ತದೆ” ಎಂದು ತಮ್ಮ ಭಾಷಣದಲ್ಲಿ ಹೇಳುತ್ತಾ “ಈ ಅವಧಿಯಲ್ಲಿ ದಿನಗೂಲಿ ಕಾರ್ಮಿಕರು, ವಲಸೆ ಕಾರ್ಮಿಕರು ಹೆಚ್ಚು ತೊಂದರೆ ಅನುಭವಿಸಿದ್ದಾರೆ. ಅವರಿಗಾಗಿ ಏನಾದರೂ ಮಾಡುವುದು ನಮ್ಮ ಕರ್ತವ್ಯ ” ಎಂದು ಹೇಳಿದ್ದರು.

ಮಾರ್ಚ್ ನಿಂದ ಲಾಕ್ ಡೌನ್ ಘೋಷಿಸಿದ ನಂತರ, ಉದ್ಯೋಗ ಅಥವಾ ಹಣವಿಲ್ಲದೆ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸೆ ಕಾರ್ಮಿಕರು ಮನೆಗೆ ಕಾಲ್ನಡಿಗೆಯಲ್ಲೇ ಪ್ರಯಾಣಿಸಿದ್ದರು. ನಂತರ ಕೇಂದ್ರ ಸರ್ಕಾರವು “ಶ್ರಮಿಕ್” ವಿಶೇಷ ರೈಲುಗಳನ್ನು ಬಿಟ್ಟಿತ್ತಾದರೂ ಸಾವಿರಾರು ವಲಸೆ ಕಾರ್ಮಿಕರು ಇನ್ನೂ ನೂರಾರು ಕಿಲೋಮೀಟರ್ ದೂರದ ತಮ್ಮ ಮನೆಗೆ ಕಾಲ್ನಡಿಗೆ ಅಥವಾ ಸೈಕಲ್ ಮೂಲಕ ಪ್ರಯಾಣಿಸುತ್ತಿದ್ದಾರೆ.

ಈ ಮಹಾವಲಸೆಯಲ್ಲಿ ಅನೇಕ ವಲಸೆ ಕಾರ್ಮಿಕರು ಅಫಘಾತ, ಬಳಲುವಿಕೆಯಿಂದ ದಾರಿಯಲ್ಲಿ ಸಾವನ್ನಪ್ಪಿದ್ದಾರೆ.

ಇಂದು ಬೆಳಿಗ್ಗೆ ಗುಜರಾತ್‌ನಿಂದ ಹಿಂತಿರುಗುತ್ತಿದ್ದ ಕಾರ್ಮಿಕರ ಗುಂಪಿನಲ್ಲಿದ್ದ ಮಹಿಳೆ ಮತ್ತು ಮಗು ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದಾಗ, ತಾವು ಪ್ರಯಾಣಿಸುತ್ತಿದ್ದ ಮಿನಿ ಟ್ರಕ್ ದೊಡ್ಡ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾರೆ.

ಕಳೆದ ಶನಿವಾರ ದೆಹಲಿಯಿಂದ 1000 ಕಿ.ಮಿ. ದೂರದ ಬಿಹಾರದ ಪೂರ್ವ ಚಂಪಾರನ್‌ಗೆ ತಲುಪಲು ಸೈಕಲ್ ಚಲಾಯಿಸುತ್ತಿದ್ದ ವಲಸೆ ಕಾರ್ಮಿಕರೊಬ್ಬರು ಲಕ್ನೋದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳಿದ್ದಾರೆ.

ಕೃಪೆ: ಎನ್ಡಿಟಿವಿ


ಓದಿ: ಬೆಂಗಳೂರಿನ ಹೊರಗೂ ರೈಲಿಗಾಗಿ ಕಾಯುತ್ತಿರುವ ವಲಸೆ ಕಾರ್ಮಿಕರು: ಇತ್ತ ಹರಿಯುವುದೇ ಸರ್ಕಾರದ ಗಮನ?


ವಿಡಿಯೋ ನೋಡಿ: ಸದ್ದು…… ಈ ಸುದ್ದಿಗಳೇನಾದವು? – 8 ನೇ ಸಂಚಿಕೆ(Facebook ವಿಡಿಯೋ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...