Homeಮುಖಪುಟ500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ - ತೀವ್ರ ಆಕ್ರೋಶ

500 ವರ್ಷಗಳಷ್ಟು ಹಳೆಯ ಮಸೀದಿಯ ಸಮೀಕ್ಷೆಗೆ ಆದೇಶಿಸಿದ ಯುಪಿ ಕೋರ್ಟ್ – ತೀವ್ರ ಆಕ್ರೋಶ

- Advertisement -
- Advertisement -

1526 ರಲ್ಲಿ ನಿರ್ಮಿಸಲಾಗಿರುವ ಮಸೀದಿಯೊಂದರ ಸಮೀಕ್ಷೆ ನಡೆಸುವಂತೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ನ್ಯಾಯಾಲಯ ಆದೇಶ ನೀಡಿದ್ದು, ಈ ಪ್ರಕ್ರಿಯೆಯನ್ನು ಪ್ರತಿಭಟಿಸಲು ಸ್ಥಳೀಯ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಪ್ರದೇಶದಲ್ಲಿ ಮಂಗಳವಾರ ಉದ್ವಿಗ್ನತೆ ಸೃಷ್ಟಿಸಿಯಾಗಿದೆ. ಪ್ರಸ್ತುತ ಮಸೀದಿಗೆ ಮೊದಲು ಆ ಸ್ಥಳದಲ್ಲಿ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು ಎಂಬ ಹೇಳಿಕೆಗಳನ್ನು ತನಿಖೆ ಮಾಡಲು ಅಧಿಕಾರಿಗಳು ಮಂಗಳವಾರ ಸಂಜೆ ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯನ್ನು ಸಮೀಕ್ಷೆ ನಡೆಸಿದ್ದಾರೆ. 500 ವರ್ಷಗಳಷ್ಟು

1526 ರಲ್ಲಿ ಮುಸ್ಲಿಂ ರಾಜರು ದೇವಸ್ಥಾನವನ್ನು ಕೆಡವಿ ಆ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಿದ್ದಾರೆ ಎಂದು ಆರೋಪಿಸಿ ರಿಷಿ ರಾಜ್ ಗಿರಿ ಎಂಬ ಹಿಂದೂ ಪೂಜಾರಿಯೊಬ್ಬ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದರು. ಹಾಗಾಗಿ, ಸ್ಥಳೀಯ ನ್ಯಾಯಾಲಯವು ಅಡ್ವೊಕೇಟ್ ಕಮಿಷನರ್ ರಮೇಶ್ ಚಂದ್ ರಾಘವ್ ಅವರನ್ನು ಸಮೀಕ್ಷೆ ನಡೆಸುವಂತೆ ಆದೇಶಿಸಿದೆ. ಸಮೀಕ್ಷೆ ನಡೆಸಲು ಅಧಿಕಾರಿಗಳು ಮಸೀದಿಗೆ ಆಗಮಿಸುತ್ತಿದ್ದಂತೆ, ನೂರಾರು ಮುಸ್ಲಿಮರು ಕ್ರಮವನ್ನು ಪ್ರತಿಭಟಿಸಲು ಜಮಾಯಿಸಿದ್ದಾರೆ. ಶಾಂತಿ ಕಾಪಾಡಲು ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣ ಕುಮಾರ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಅಧಿಕಾರಿಗಳು ಸಂಪರ್ಕದಲ್ಲಿದ್ದು, ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಪೆನ್ಸಿಯಾ ತಿಳಿಸಿದ್ದಾರೆ. “ಸಾಮಾಜಿಕ ಮಾಧ್ಯಮಗಳ ಮೂಲಕ ಅಥವಾ ಯಾವುದೇ ರೀತಿಯಲ್ಲಿ ವದಂತಿಗಳನ್ನು ಹರಡುವುದು ಕಂಡುಬಂದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಪೆನ್ಸಿಯಾ ಎಚ್ಚರಿಕೆ ನೀಡಿದ್ದಾರೆ.

ನವೆಂಬರ್ 29ರೊಳಗೆ ನ್ಯಾಯಾಲಯ ವರದಿ ಕೇಳಿದ್ದರೂ ತರಾತುರಿಯಲ್ಲಿ ಸರ್ವೆ ನಡೆಸಲಾಗಿದೆ ಎಂದು ಮಸೀದಿ ಆಡಳಿತ ಪರ ವಕೀಲ ಜಾಫರ್ ಅಲಿ ತಿಳಿಸಿದ್ದಾರೆ. ಅಗತ್ಯವಿದ್ದರೆ ನ್ಯಾಯಾಲಯದ ಆದೇಶವನ್ನು ಮಸೀದಿ ಅಧಿಕಾರಿಗಳು ಪ್ರಶ್ನಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ. 500 ವರ್ಷಗಳಷ್ಟು

 

ಈ ಕ್ರಮವನ್ನು ಜಮೀಯತ್ ಉಲಮಾ-ಇ-ಹಿಂದ್ ವಿರೋಧಿಸಿದ್ದು, ಅಯೋಧ್ಯೆಯ ಬಾಬರಿ ಮಸೀದಿ ಧ್ವಂಸದ ಗಾಯಗಳಿಂದ ದೇಶ ನರಳುತ್ತಲೇ ಇದೆ ಎಂದು ಎಂದು ಹೇಳಿದ್ದಾರೆ. ಬಾಬರಿ ಮಸೀದಿಯಂತಹ ವಿವಾದಗಳು ಮರುಕಳಿಸದಂತೆ ತಡೆಯಲು 1991 ರಲ್ಲಿ ಪೂಜಾ ಸ್ಥಳಗಳ ವಿಶೇಷ ನಿಬಂಧನೆಗಳ ಕಾಯ್ದೆಯನ್ನು ಪರಿಚಯಿಸಲಾಯಿತು ಎಂದು ಉಲಮಾ ಇ ಹಿಂದ್ ಮುಖ್ಯಸ್ಥ ಮಹಮೂದ್ ಮದನಿ ಹೇಳಿದ್ದಾರೆ.

“ಬಾಬರಿ ಮಸೀದಿ ಒಡೆದ ಪ್ರಕರಣದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಕೂಡ ಈ ಕಾನೂನಿನ ಮಹತ್ವವನ್ನು ಒತ್ತಿಹೇಳಿದೆ. ಆದಾಗ್ಯೂ, ಇತ್ತೀಚಿನ ನ್ಯಾಯಾಂಗ ಕ್ರಮಗಳಲ್ಲಿ ಈ ಕಾನೂನನ್ನು ಕಡೆಗಣಿಸುತ್ತಿರುವುದು ಆತಂಕಕಾರಿಯಾಗಿದೆ. ಹಿಂದಿನದನ್ನು ಅಗೆಯುತ್ತಲೆ ಇದ್ದರೆ, ಅದಕ್ಕೆ ಅಂತ್ಯವೆ ಇರುವುದಿಲ್ಲ” ಎಂದು ಅವರು ಹೇಳಿದ್ದಾರೆ

ಇದೇ ರೀತಿಯ ವಾದಗಳೊಂದಿಗೆ ಬಾಬರಿ ಮಸೀದಿಯನ್ನು 1992 ರಲ್ಲಿ ಹಿಂದೂ ಉಗ್ರಗಾಮಿಗಳು ಧ್ವಂಸಗೊಳಿಸಿದ್ದರು. ಅದರಂತೆ ಕೆಡವಲಾದ ಮಸೀದಿಯ ಸ್ಥಳದಲ್ಲಿ ಈಗ ಬೇರೆ ಕಟ್ಟಡವನ್ನು ನಿರ್ಮಿಸಲು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಈ ಕಟ್ಟಡವನ್ನು ಉದ್ಘಾಟಿಸಲಾಗಿದೆ.

ಬಾಬರಿ ಮಸೀದಿ ಪ್ರಕರಣದ ಸುಪ್ರೀಂ ಕೋರ್ಟ್‌ನ ತೀರ್ಪು ಭಾರತದಾದ್ಯಂತ ಮುಸ್ಲಿಂ ಪ್ರಾರ್ಥನಾ ಸ್ಥಳಗಳನ್ನು ಗುರಿಯಾಗಿಸಲು ಹಿಂದುತ್ವ ಗುಂಪುಗಳಿಗೆ ಧೈರ್ಯ ನೀಡಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಚಂಡೌಸಿಯಲ್ಲಿ ನಡೆದ ಸಮೀಕ್ಷೆಯ ವೇಗವನ್ನು ಪ್ರಶ್ನಿಸಿದ ಅವರು, ಸಾಮಾನ್ಯ ಪ್ರಕರಣಗಳಲ್ಲಿ ಇಂತಹ ಕ್ಷಿಪ್ರತನ ಕಂಡುಬರುವುದಿಲ್ಲ ಎಂದು ಟೀಕಿಸಿದ್ದಾರೆ.

“ನ್ಯಾಯಾಲಯಗಳು ಇಂತಹ ಆದೇಶಗಳನ್ನು ಮುಂದುವರಿಸಿದರೆ, ಆರಾಧನಾ ಸ್ಥಳಗಳ ಕಾಯಿದೆಯು ಕೇವಲ ಸತ್ತ ಪತ್ರವಾಗಿ ಮಾತ್ರ ಉಳಿಯಲಿದೆ. ಅಂತಹ ಮೊಕದ್ದಮೆಗಳು ನ್ಯಾಯಾಲಯಗಳನ್ನು ತಲುಪುವುದನ್ನು ತಡೆಯಲು ಕೂಡಾ ಈ ಕಾಯಿದೆಯ ಉದ್ದೇಶವಾಗಿದೆ.” ಎಂದು ಅವರು ಹೇಳಿದ್ದಾರೆ.

1991ರ ಆರಾಧನಾ ಸ್ಥಳಗಳ ಕಾಯಿದೆಯು, ಪವಿತ್ರ ಸ್ಥಳಗಳ “ಧಾರ್ಮಿಕ ಸ್ವರೂಪ” ಆಗಸ್ಟ್ 15, 1947ರ ಸ್ವಾತಂತ್ರ್ಯದ ದಿನದಂದು ಹೇಗಿತ್ತೊ, ಹಾಗೆಯೇ ಉಳಿಯಬೇಕು ಎಂಬ ಷರತ್ತು ವಿಧಿಸುತ್ತದೆ. ಆದರೆ ಈ ಕಾನೂನಿನಿಂದ ಬಾಬರಿ ಮಸೀದಿಯನ್ನು ಹೊರಗಿಡಲಾಗಿತ್ತು.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...