Homeಮುಖಪುಟವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

ವಾಟ್ಸಾಪ್ ಗ್ರೂಪ್‌ನಲ್ಲಿ 512 ಜನರಿಗೆ ಅವಕಾಶ: ಎಡಿಟ್ ಮತ್ತು Undo ಆಯ್ಕೆ ಮುಂದಿನ ಕೊಡುಗೆ

- Advertisement -
- Advertisement -

ಜನಪ್ರಿಯ ಮೆಸೇಂಜಿಂಗ್ ತಾಣವಾದ ವಾಟ್ಸಾಪ್ ತನ್ನ ಬಳಕೆದಾರರಿಗೆ ಹಲವು ವೈಶಿಷ್ಯಗಳನ್ನು ಪರಿಚಯಿಸುತ್ತಿದೆ. ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 256 ರಿಂದ 512 ಕ್ಕೆ ಏರಿಸಿರುವ ಸಂಸ್ಥೆಯು ಇನ್ನು ಮುಂದೆ ಹಲವು ಆಯ್ಕೆಗಳನ್ನು ನೀಡಲು ಮುಂದಾಗಿವೆ.

ಇದುವರೆಗೂ ವಾಟ್ಸಾಪ್ ಗುಂಪುಗಳಲ್ಲಿ 256 ಸದಸ್ಯರಿಗೆ ಮಾತ್ರ ಅವಕಾಶವಿತ್ತು. ಆದರೆ ಮತ್ತೊಂದು ಮೆಸೆಂಜಿಂಗ್ ತಾಣವಾದ ಟೆಲಿಗ್ರಾಂ 2 ಲಕ್ಷದವರೆಗೆ ಸದಸ್ಯರನ್ನು ಹೊಂದುವ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ಗುಂಪಿನ ಮಿತಿಯನ್ನು ಹೆಚ್ಚಿಸುವ ಬೇಡಿಕೆಯಿತ್ತು. ಅದನ್ನು ಪರಿಗಣಿಸಿರುವ ವಾಟ್ಸಾಪ್ ಸದ್ಯಕ್ಕೆ ಗುಂಪಿನ ಸದಸ್ಯರ ಮಿತಿಯನ್ನು 512ಕ್ಕೆ ಏರಿಸಿದೆ.

ಮುಂದೆ ಬರಲಿದೆ ಎಡಿಟ್ ಆಯ್ಕೆ

ಫೇಸ್‌ಬುಕ್‌ನಲ್ಲಿ ನೀವು ಪೋಸ್ಟ್ ಮಾಡಿದ ಸಂದೇಶವನ್ನು ಮತ್ತೆ ಎಡಿಟ್ ಮಾಡುವ ಅವಕಾಶವಿದೆ. ಸದ್ಯ ವಾಟ್ಸಾಪಿನಲ್ಲಿ ಒಮ್ಮೆ ಸಂದೇಶ ಕಳುಹಿಸಿದರೆ ಅದನ್ನು ಮತ್ತೆ ತಿದ್ದುವ ಅವಕಾಶವಿಲ್ಲ. ಅದನ್ನು ಡಿಲೀಟ್ ಮಾಡಿ ಮತ್ತೆ ಬರೆಯಬೇಕಾದ ಅನಿವಾರ್ಯತೆಯಿದೆ. ಆ ಕಷ್ಟವನ್ನು ಅರ್ಥ ಮಾಡಿಕೊಂಡಿರುವ ವಾಟ್ಸಾಪ್ ಕಂಪನಿಯು ಎಡಿಟ್ ಮಾಡುವ ಅವಕಾಶ ನೀಡುವುದಾಗಿ ಘೋಷಿಸಿದ್ದು ಅದರ ಮೇಲೆ ಕೆಲಸ ಮಾಡುತ್ತಿದೆ. ಆ ಸೇವೆ ಜಾರಿಯಾದಲ್ಲಿ ಕಳುಹಿಸಿದ ಸಂದೇಶದಲ್ಲಿ ಏನಾದರೂ ಬದಲಾವಣೆ ಇದ್ದರೆ ಮಾಡಬಹುದಾಗಿದೆ. ಇದೇ ರೀತಿಯ ಎಡಿಟ್ ಆಯ್ಕೆ ಟ್ವಿಟರ್‌ನಲ್ಲಿ ಸಹ ತರಲು ಕೆಲಸ ನಡೆಯುತ್ತಿದೆ ಎನ್ನಲಾಗಿದೆ.

Undo ಆಯ್ಕೆ

ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಯಾವುದೇ ಕಾರಣಕ್ಕಾಗಿ ಸಂದೇಶವನ್ನು ನೀವು ಡಿಲೀಟ್ ಮಾಡಿದ್ದಲ್ಲಿ Undo ಆಯ್ಕೆ ಮೂಲಕ ಅದನ್ನು ವಾಪಸ್ ಪಡೆಯುವ ಸೌಲಭ್ಯ ನೀಡುವುದಕ್ಕೆ ಕೆಲಸ ನಡೆಯುತ್ತಿದೆ. ಬೈ ಮಿಸ್ಟೇಕ್ ನೀವು ಯಾವುದೇ ಸಂದೇಶ ಅಳಿಸಿಬಿಟ್ಟರೆ Undo ಆಯ್ಕೆ ಮೂಲಕ ವಾಪಸ್ ಪಡೆಯಬಹುದು. ಆದರೆ ಇದಕ್ಕೆ ನಿರ್ಧಿಷ್ಟ ಕಾಲಮಿತಿ ಇರುತ್ತದೆ ಎಂದು ವಾಟ್ಸಾಪ್ ಹೇಳಿದೆ. ನೀವು ಅಳಿಸಿದ ಸಂದೇಶವನ್ನು ನಿಗಧಿತ ಸಮಯದೊಳಗೆ ಮಾತ್ರ ಪಡೆಯಬಹುದು. ಇಲ್ಲದಿದ್ದರೆ ಅದು ಕಣ್ಮರೆಯಾಗಲಿದೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

ಇವಿಷ್ಟು ಸದ್ಯಕ್ಕೆ ವಾಟ್ಸಾಪ್ ನೀಡಿರುವ ಕೊಡುಗೆಗಳಾಗಿದ್ದು, ಅದಕ್ಕೆ ಯಾವುದೇ ದರ ನಿಗಧಿ ಮಾಡಿಲ್ಲ. ಮೆಟಾ ಮಾಲಿಕತ್ವದ ವಾಟ್ಸಾಪ್ ತನ್ನ ಸೇವೆಗಳಿಗೆ ಮುಂದೆ ದರ ನಿಗಧಿ ಮಾಡಲಿದೆ ಎಂಬ ಚರ್ಚೆಗಳು ಸಹ ನಡೆಯುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...