Homeಮುಖಪುಟಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

ಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

2019 ರ ನವೆಂಬರ್ 13-14 ರಂದು ಬ್ರೆಜಿಲ್‌ನಲ್ಲಿ ನಡೆದ ಬ್ರಿಕ್ಸ್ ರಾಷ್ಟ್ರಗಳ ಶೃಂಗ ಸಭೆಗೆ ಭಾಗಿಯಾಗಿರುವುದು ಕೊನೆಯ ಪ್ರವಾಸವಾಗಿದೆ

- Advertisement -
- Advertisement -

2015 ರಿಂದ ಇದುವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 58 ದೇಶಗಳಿಗೆ ಭೇಟಿ ನೀಡಿದ್ದಾರೆ. ಇದಕ್ಕಾಗಿ ಪ್ರಯಾಣ ವೆಚ್ಚ ಸೇರಿ 517 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ವಿ.ಮುರುಳೀಧರನ್ ರಾಜ್ಯಸಭೆಗೆ ಹೇಳಿಕೆ ನೀಡಿದ್ದಾರೆ ಎಂದು ದಿವೈರ್.ಕಾಂ ವರದಿ ಮಾಡಿದೆ.

ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್.ಸಿ.ಪಿ.)ದ ಸಂಸದ ಫೌಜಿಯಾ ಖಾನ್ ಅವರ ಕೇಳಿದ ಲಿಖಿತ ಪ್ರಶ್ನೆಗೆ ವಿವರ ನೀಡಿರುವ ಸಚಿವರು ಪ್ರಧಾನಿ ವಿದೇಶಗಳ ಭೇಟಿಗೆ ಒಟ್ಟು 517.82 ಕೋಟಿ ರೂಪಾಯಿ ವೆಚ್ಚವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಅಂಫಾನ್ ಹಾನಿಯ ಸಮೀಕ್ಷೆ: 83 ದಿನಗಳ ನಂತರ ಮೊದಲ ಪ್ರವಾಸ ಮಾಡಿದ ಮೋದಿ

ಸಚಿವ ಮುರುಳೀಧರನ್ ನೀಡಿರುವ ಮಾಹಿತಿ ಪ್ರಕಾರ, “ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾ, ರಷ್ಯಾ, ಚೀನಾ ದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದಾರೆ. ಈ ದೇಶಗಳಿಗೆ 5 ಬಾರಿ ಭೇಟಿ ಕೊಟ್ಟಿದ್ದಾರೆ. ಸಿಂಗಾಪುರ, ಜರ್ಮನಿ, ಫ್ರಾನ್ಸ್, ಶ್ರೀಲಂಕಾ, ಯುನೈಟೆಡ್ ಅರಬ್ ಎಮಿರೇಟ್ ದೇಶಗಳಿಗೆ ಹಲವು ಬಾರಿ ಭೇಟಿ ನೀಡಿದ್ದಾರೆ”

ಪ್ರಧಾನಿ ಮೋದಿ ಅವರು ನವೆಂಬರ್ 13-14 2019 ರಂದು ಬ್ರೆಜಿಲ್ ನಲ್ಲಿ ನಡೆದ ಬ್ರಿಕ್ಸ್ ರಾಷ್ಟ್ರಗಳ ಶೃಂಗ ಸಭೆಗೆ ಭಾಗಿಯಾಗಿವುದು ಕೊನೆಯ ಭೇಟಿಯಾಗಿದೆ ಎಂದು ದಿವೈರ್ ವರದಿ ಮಾಡಿದೆ.

ಈ ಭೇಟಿಯಿಂದ ಬ್ರಿಕ್ಸ್ ದೇಶಗಳೊಂದಿಗಿನ ವ್ಯಾಪಾರ ಮತ್ತು ಹೂಡಿಕೆ, ತಂತ್ರಜ್ಞಾನ, ರಕ್ಷಣಾ ಸಹಭಾಗಿತ್ವ ಮತ್ತು ಜನರ ಪರಸ್ಪರ ಸಂಪರ್ಕಕ್ಕೆ ಮತ್ತು ಸಂಬಂಧ ಬಲಗೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೋನಾ ವೈರಸ್ ಭೀತಿ: ಯುರೋಪ್‌ ಪ್ರವಾಸ ರದ್ದುಗೊಳಿಸಿದ ನರೇಂದ್ರ ಮೋದಿ

ವಿದೇಶ ಪ್ರವಾಸ ಭಾರತದ ರಾಷ್ಟ್ರೀಯ ಅಭಿವೃದ್ಧಿ, ಆರ್ಥಿಕ ಬೆಳವಣಿಗೆಯ ಪ್ರಚಾರ ಮಾಡಲು ಮತ್ತು ದೇಶದ ಜನರ ಕಲ್ಯಾಣಕ್ಕೆ ಅನುಕೂಲವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ವಾತಾವರಣ ಬದಲಾವಣೆ, ಟ್ರಾನ್ಸ್ ರಾಷ್ಟ್ರೀಯ ಅಪರಾಧ ಮತ್ತು ಭಯೋತ್ಪಾದನೆಯ ಕುರಿತು ವಿಶ್ವದ ಬೇರೆ ಬೇರೆ ದೇಶಗಳಲ್ಲಿ ನಡೆದ ಬಹುಪಕ್ಷೀಯ ಮಟ್ಟದ ಸಭೆಗಳಲ್ಲಿ ಭಾರತ ಗಮನ ಸೆಳೆಯುವಂತಹ ಪ್ರಯತ್ನ ಮಾಡಿ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.

ದ್ವಿಪಕ್ಷೀಯ, ಪ್ರಾದೇಶಿಕ ಮಟ್ಟದಲ್ಲೂ ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಮಾರಿಟೈಮ್, ಬಾಹ್ಯಾಕಾಶ, ರಕ್ಷಣಾ ಸಹಭಾಗಿತ್ವಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಈ ಸಂಬಂಧ ಭಾರತ ತನ್ನ ದೃಷ್ಟಿಕೋನವನ್ನು ವಿಶ್ವಕ್ಕೆ ಮನವರಿಕೆ ಮಾಡಿಕೊಟ್ಟಿದೆ.

ಚೀನಾಕ್ಕೆ ಪ್ರಧಾನಿ ಭೇಟಿ ನೀಡಿದ ಸಂದರ್ಭಧಲ್ಲಿ ನವದೆಹಲಿ ಮತ್ತು ಬೀಜಿಂಗ್ 50 ಒಡಂಬಡಿಕೆಗಳಿಗೆ ಸಹಿ ಹಾಕಿವೆ ಎಂದು ಉತ್ತರ ನೀಡಿರುವುದಾಗಿ ದಿವೈರ್ ವರದಿ ಮಾಡಿದೆ.

ಇದನ್ನೂ ಓದಿ: ಅತಿಹೆಚ್ಚು ವಿದೇಶಿ ಪ್ರವಾಸ ಮಾಡಿದ್ದು ಮೋದಿಯಲ್ಲ, ಮನಮೋಹನ್ ಸಿಂಗ್: ಅಮಿತ್ ಶಾ ಹೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...