Homeಮುಖಪುಟದೆಹಲಿಯಲ್ಲಿ ದಾಖಲೆಯ 52.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲು

ದೆಹಲಿಯಲ್ಲಿ ದಾಖಲೆಯ 52.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲು

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು 52.3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ದೆಹಲಿಯ ಮುಂಗೇಶ್‌ಪುರದ ಹವಾಮಾನ ಕೇಂದ್ರವು ಮಧ್ಯಾಹ್ನ 2.30ಕ್ಕೆ 52.3 ಡಿಗ್ರಿ ಸೆಲ್ಸಿಯಸ್‌ನೊಂದಿಗೆ ಭಾರತದ ಇದುವರೆಗಿನ ಅತ್ಯಂತ ಬಿಸಿಯಾದ ದಿನವನ್ನು ದಾಖಲಿಸಿದೆ. ಭಾರತದಲ್ಲಿ ಇದುವರೆಗೆ ದಾಖಲಾದ ಅತ್ಯಧಿಕ ತಾಪಮಾನ ಇದಾಗಿದೆ.

ದೆಹಲಿಯಲ್ಲಿ ಇಂದು ತಾಪಮಾನವು ನಿರೀಕ್ಷೆಗಿಂತ 9 ಡಿಗ್ರಿಗಿಂತ ಹೆಚ್ಚಿತ್ತು, 2002ರಲ್ಲಿ ಅತಿಹೆಚ್ಚು ಎಂದರೆ ದಾಖಲೆಯ 49.2 ಡಿಗ್ರಿ ಸೆಲ್ಸಿಯಸ್‌ನಷ್ಟು ತಾಪಮಾನ ದಾಖಲಾಗಿತ್ತು. ಇಂದಿನ ತಾಪಮಾನವು 52.3 ಡಿಗ್ರಿ ಸೆಲ್ಸಿಯಸ್‌ನೊಂದಿಗೆ ಈ ದಾಖಲೆಯನ್ನು ಮೀರಿಸಿದೆ.

ಭಾರತೀಯ ಹವಾಮಾನ ಇಲಾಖೆ (IMD) ತಾಪಮಾನದ ಹೆಚ್ಚಳದ ಹಿನ್ನೆಲೆ ದೆಹಲಿಗೆ ರೆಡ್ ಅಲರ್ಟ್ ಆರೋಗ್ಯ ಸೂಚನೆಯನ್ನು ಬಿಡುಗಡೆ ಮಾಡಿದೆ. ದೆಹಲಿಯಲ್ಲಿ ಅಂದಾಜು 30 ಮಿಲಿಯನ್‌ಗಿಂತಲೂ ಹೆಚ್ಚು ಜನಸಂಖ್ಯೆ ಇದ್ದು, ದುರ್ಬಲ ಜನರು ಸೇರಿದಂತೆ ಎಲ್ಲಾ ವಯಸ್ಸಿನ ಜನರ ಬಗೆಗೆ ತೀವ್ರ ಕಾಳಜಿಯ ಅಗತ್ಯವಿದೆ ಎಂದು ಎಚ್ಚರಿಸಿದೆ.

ಭಾರತದಲ್ಲಿ ಬೇಸಿಗೆಯ ಉಷ್ಣತೆಯಲ್ಲಿ ಹೆಚ್ಚಳವು ಹೊಸದೇನಲ್ಲ, ಆದರೆ ವೈಜ್ಞಾನಿಕ ಸಂಶೋಧನೆಯು ಹವಾಮಾನ ಬದಲಾವಣೆಯು ಶಾಖದ ಅಲೆಗಳು ಹೆಚ್ಚು ತೀವ್ರವಾಗಲು ಕಾರಣವಾಗುತ್ತದೆ ಎಂದು ಕಂಡು ಹಿಡಿದಿದೆ. ಬಿಸಿಲಿನ ತಾಪಮಾನದ ಹೆಚ್ಚಳದಿಂದಾಗಿ ದೆಹಲಿಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳವಾಗಿದ್ದು, 8,302 ಮೆಗಾವ್ಯಾಟ್ ವಿದ್ಯುತ್‌ ಬಳಕೆಯಾಗಿದೆ. ವಿದ್ಯುತ್‌ಗೆ ಸಾರ್ವಕಾಲಿಕವಾಗಿ ಬೇಡಿಕೆ ಹೆಚ್ಚಳವಾಗಿದೆ, ಬಿಸಿಲ ಬೇಗೆಗೆ ಜನರು ಹವಾ ನಿಯಂತ್ರಿತ ಉಪಕರಣಗಳ ಮೊರೆ ಹೋಗಿದ್ದಾರೆ ಎಂದು ವಿದ್ಯುತ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯನ್ನು ಹೊರತುಪಡಿಸಿದರೆ ಮರುಭೂಮಿ ರಾಜ್ಯ ರಾಜಸ್ಥಾನದಲ್ಲಿ ಅತ್ಯಂತ ಹೆಚ್ಚಿನ ತಾಪಮಾನ ವರದಿಯಾಗಿದೆ. ಅಲ್ಲಿ 51 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ದಕ್ಷಿಣ ರಾಜಸ್ಥಾನದ ಬಾರ್ಮರ್, ಜೋಧ್‌ಪುರ್, ಉದಯಪುರ, ಸಿರೋಹಿ ಮತ್ತು ಜಲೋರ್ ಜಿಲ್ಲೆಗಳಲ್ಲಿ ಇಂದು ತಾಪಮಾನದಲ್ಲಿ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿತ ದಾಖಲಾಗಿದೆ. ಇದು ವಾಯುವ್ಯ ಭಾರತದಲ್ಲಿ ಶಾಖದ ಅಲೆಗಳ ಕುಸಿತದ ಆರಂಭವನ್ನು ಸೂಚಿಸುತ್ತದೆ. NWP ದತ್ತಾಂಶವು, ಗುರುವಾರದಿಂದ ಬಂಗಾಳಕೊಲ್ಲಿಯಿಂದ ತೇವಾಂಶವುಳ್ಳ ಗಾಳಿಯು ಬೀಸಲಿದ್ದು, ಉತ್ತರ ಪ್ರದೇಶದ ಗರಿಷ್ಠ ತಾಪಮಾನದಲ್ಲಿ ಕ್ರಮೇಣ ಇಳಿಕೆಗೆ ಕಾರಣವಾಗಬಹುದು ಎಂದು ಹೇಳಿದೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...