Homeಮುಖಪುಟಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

ಪ್ಯಾರಸಿಟಮಲ್ ಸೇರಿದಂತೆ 52 ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ವಿಫಲ

- Advertisement -
- Advertisement -

ಭಾರತದ ಉನ್ನತ ಔಷಧ ನಿಯಂತ್ರಣ ಸಂಸ್ಥೆ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (ಸಿಡಿಎಸ್‌ಸಿಒ) ನಡೆಸಿದ ಪರೀಕ್ಷೆಯಲ್ಲಿ ಜನಪ್ರಿಯ ಔಷಧಿಗಳಾದ ಪ್ಯಾರಸಿಟಮಲ್, ಪ್ಯಾಂಟೊಪ್ರಜೋಲ್
ಮತ್ತು ಹಲವಾರು ಆಂಟಿ ಬಯೋಟಿಕ್‌ಗಳು ಒಳಗೊಂಡಂತೆ ಸುಮಾರು 50 ಔಷಧಿಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ.

ಇವುಗಳಲ್ಲಿ ಸುಮಾರು 22 ಔಷಧಿಗಳನ್ನು ಹಿಮಾಚಲ ಪ್ರದೇಶದಲ್ಲಿ ಉತ್ಪಾದಿಸಲಾಗಿದೆ ಎಂದು ಸಿಡಿಎಸ್‌ಸಿಒ ಮೇ 2024ರಲ್ಲಿ ನಡೆಸಿದ ಪರೀಕ್ಷೆಯನ್ನು ಉಲ್ಲೇಖಿಸಿ ಎಚ್ಚರಿಕೆ ನೀಡಿದೆ.

ಜೈಪುರ, ಹೈದರಾಬಾದ್, ವಘೋಡಿಯಾ, ವಡೋದರಾ, ಆಂಧ್ರ ಪ್ರದೇಶ ಮತ್ತು ಇಂದೋರ್‌ನಂತಹ ಇತರ ಸ್ಥಳಗಳಿಂದ ಸಂಗ್ರಹಿಸಿದ ಔ‍ಷಧಗಳ ಮಾದರಿಯಲ್ಲೂ ಗುಣಮಟ್ಟದ ಕೊರತೆ ಕಂಡು ಬಂದಿದೆ. ಜೂನ್ 20 ರಂದು ಬಿಡುಗಡೆಯಾದ ಡ್ರಗ್ ಅಲರ್ಟ್ ಪ್ರಕಾರ, ಒಟ್ಟು 52 ಔಷಧ ಮಾದರಿಗಳು ಸಿಡಿಎಸ್‌ಸಿಒ ನಡೆಸಿದ ಗುಣಮಟ್ಟದ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡಿಲ್ಲ.

ಸಾಮಾನ್ಯ ಜ್ವರ, ಮೈಕೈ ನೋವಿಗೆ ಜನರು ಬಳಸುವ ಪ್ಯಾರಸಿಟಮಲ್ ಮಾತ್ರೆಗಳು ಗುಣಮಟ್ಟದ ಮಾನದಂಡಗಳನ್ನು ಪೂರೈಸಲು ವಿಫಲವಾಗಿದೆ. ಇದರಂತೆ ಜನರು ವೈದ್ಯರ ನಿರ್ದೇಶನಗಳಿಲ್ಲದೆ ಮೆಡಿಕಲ್‌ನಿಂದ ಪಡೆದು ಬಳಸುವ ಅನೇಕ ಔಷಧಿಗಳು ಕೂಡ ಗುಣಮಟ್ಟದಿಂದ ಕೂಡಿಲ್ಲ ಎಂಬುವುದು ತಿಳಿದು ಬಂದಿದೆ. ವೈದ್ಯಕೀಯ ಸಮುದಾಯ ಮತ್ತು ಜನರಿಗೆ ಈ ಬಗ್ಗೆ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ.

ಮಧ್ಯ ಪ್ರದೇಶದ ಉಜ್ಜಯಿನಿ ಮೂಲದ ಆಸ್ಕೋನ್ ಹೆಲ್ತ್‌ಕೇರ್‌ನಲ್ಲಿ ಕೆಳದರ್ಜೆಯ 500 ಎಂಜಿ ಪ್ಯಾರಸಿಟಮಲ್ ಮಾತ್ರೆಗಳನ್ನು ತಯಾರಿಸಲಾಗಿದೆ. ಆಸ್ಕೋನ್ ಹೆಲ್ತ್‌ಕೇರ್‌ನ ಅಧಿಕೃತ ವೆಬ್‌ಸೈಟ್ ಕಂಪನಿಯು ಅಂತಿಮ ಔಷಧೀಯ ಡೋಸೇಜ್ ಫಾರ್ಮ್‌ಗಳನ್ನು ತಯಾರಿಸುತ್ತದೆ ಎಂದು ಹೇಳುತ್ತದೆ.

ಗುಣಮಟ್ಟವಿಲ್ಲದ ಔಷಧಗಳ ಬಗ್ಗೆ ಹೆಚ್ಚುತ್ತಿರುವ ಆತಂಕ

ರೋಗ ಗ್ರಸ್ತವಾಗುವಿಕೆಗಳು ಮತ್ತು ಆತಂಕದ ಅಸ್ವಸ್ಥತೆಗಳಿಗೆ ಬಳಸುವ ಕ್ಲೋನಾಜೆಪಮ್ ಮಾತ್ರೆಗಳು, ನೋವು ನಿವಾರಕ ಡಿಕ್ಲೋಫೆನಾಕ್, ಆಂಟಿ-ಹೈಪರ್ಟೆನ್ಷನ್ ಡ್ರಗ್ ಟೆಲ್ಮಿಸಾರ್ಟನ್, ಉಸಿರಾಟದ ಕಾಯಿಲೆಗಳಿಗೆ ಬಳಸುವ ಆಂಬ್ರೋಕ್ಸೋಲ್, ಆಂಟಿಫಂಗಲ್ ಫ್ಲುಕೋನಜೋಲ್ ಮತ್ತು ವಿವಿಧ ಮಲ್ಟಿವಿಟಮಿನ್ ಮತ್ತು ಕ್ಯಾಲ್ಸಿಯಂ ಮಾತ್ರೆಗಳು ಕಳಪೆ ಗುಣಮಟ್ಟದ ಔಷಧಿಗಳ ಪಟ್ಟಿಯಲ್ಲಿ ಸೇರಿವೆ.

ಭಾರತದಲ್ಲಿ ಉತ್ಪಾದಿಸಲ್ಪಟ್ಟ ಕೆಮ್ಮಿನ ಸಿರಪ್‌ಗಳು ಸಾಗರೋತ್ತರ ಮಕ್ಕಳ ಸಾವಿಗೆ ಕಾರಣವಾಗಿರುವ ನಡುವೆ ಅನೇಕ ಔಷಧಿಗಳು ಗುಟಮಟ್ಟದಿಂದ ಕೂಡಿಲ್ಲ ಎಂಬುವುದು ಬಹಿರಂಗವಾಗಿದೆ. ಅಂಬಾಲಾದಲ್ಲಿ ಉತ್ಪಾದಿಸಲಾದ ಟೆರ್ಬುಟಲಿನ್ ಸಲ್ಫೇಟ್, ಬ್ರೋಮ್ಹೆಕ್ಸಿನ್ ಹೈಡ್ರೋಕ್ಲೋರೈಡ್, ಗ್ವೈಫೆನೆಸಿನ್ ಮತ್ತು ಮೆಂಥಾಲ್ ಸಿರಪ್ ಅನ್ನು ಒಳಗೊಂಡಿರುವ ಕೆಮ್ಮಿನ ಸಿರಪ್‌ಗಳೂ ಕೂಡ ಗುಣಮಟ್ಟದ ಕೊರತೆಯ ಔಷಧಿಗಳ ಪಟ್ಟಿಯಲ್ಲಿ ಸೇರಿವೆ. ಇದು ಆತಂಕ ಹೆಚ್ಚಿಸಿದೆ.

ಮೆಹಂದಿ ಬಗ್ಗೆಯೂ ಎಚ್ಚರಿಕೆ ನೀಡಿದ ಸಿಡಿಎಸ್‌ಸಿಒ

ಹೆಣ್ಣು ಮಕ್ಕಳು ಬಳಸುವ ಮೆಹಂದಿಯ ಕುರಿತು ಕೂಡ ಸಿಡಿಎಸ್‌ಸಿಒ ಎಚ್ಚರಿಕೆ ನೀಡಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಬಹುತೇಕ ಮೆಹಂದಿ ಟ್ಯೂಬ್‌ಗಳು ಸೌಂದರ್ಯವರ್ಧಕಗಳ ವರ್ಗಕ್ಕೆ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸುತ್ತಿಲ್ಲ. ಅವುಗಳು ಕಳಪೆ ಗುಣಮಟ್ಟದ್ದಾಗಿದ್ದು, ಹಾನಿಕಾರಕ ರಾಸಾಯನಿಕಗಳಿಂದ ಕೂಡಿದೆ. ಅಂತಹ ಮೆಹಂದಿಗಳ ಬಳಕೆ ಚರ್ಮ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಸಿಡಿಎಸ್‌ಸಿಒ ಹೇಳಿದೆ.

ಇದನ್ನೂ ಓದಿ : ವಿವಾಹಿತ ಮಹಿಳೆಯರ ನೇಮಕಕ್ಕೆ ನಿರಾಕರಿಸುತ್ತಿರುವ ‘ಫಾಕ್ಸ್‌ಕಾನ್’: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...