Homeಕರ್ನಾಟಕಭದ್ರ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.: ಕೇಂದ್ರ ಬಜೆಟ್‌ನಲ್ಲಿ ಘೋಷಣೆ

ಭದ್ರ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.: ಕೇಂದ್ರ ಬಜೆಟ್‌ನಲ್ಲಿ ಘೋಷಣೆ

- Advertisement -
- Advertisement -

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ಮಂಡಿಸಿದ 2023-24ನೇ ಸಾಲಿನ ಬಜೆಟ್‌ನಲ್ಲಿ ಕರ್ನಾಟಕದ ಭದ್ರ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಸಂಸತ್ತಿನಲ್ಲಿ ಸೀತಾರಾಮನ್ ಅವರು ಮಾಡಿದ ಬಜೆಟ್ ಭಾಷಣದಲ್ಲಿ “ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರನ್ನು ಹರಿಸುವ ಉದ್ದೇಶ ಹೊಂದಿರುವ ಭದ್ರಾ ಮೇಲ್ಡಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳ ನೆರವನ್ನು ಕೇಂದ್ರ ಸರ್ಕಾರ ನೀಡುವುದು” ಎಂದಿದ್ದಾರೆ.

ಕೆಲವೇ ತಿಂಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಎದುರಾಗಲಿದ್ದು, ಈ ನಿಟ್ಟಿನಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದತ್ತ ಗಮನಹರಿಸಿದೆ ಎಂಬ ವಿಶ್ಲೇಷಣೆಗಳು ಬರುತ್ತಿವೆ.

ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ 17.40 ಟಿಎಂಸಿ ನೀರನ್ನು ಮತ್ತು ಭದ್ರಾ ಜಲಾಶಯದಿಂದ 29.90 ಟಿಎಂಸಿ ನೀರನ್ನು ಮೇಲೆತ್ತುವ ಯೋಜನೆ ಇದಾಗಿದೆ. ಈ ಯೋಜನೆಯಿಂದಾಗಿ ಶುಷ್ಕ ಪ್ರದೇಶಗಳಲ್ಲಿ ನೀರಿನ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುತ್ತದೆ ಎಂದು ಸರ್ಕಾರ ಹೇಳುತ್ತಿದೆ.

ಈ ಕುರಿತು ಕೃತಜ್ಞತೆ ಸಲ್ಲಿಸಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ರಾಜ್ಯದ ಪ್ರಮುಖ ಯೋಜನೆಗೆ 5300 ಕೋಟಿ ರೂಪಾಯಿಗಳ ಅನುದಾನವನ್ನು ಘೋಷಿಸಿದ್ದಕ್ಕಾಗಿ ನಾನು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಇಡೀ ಕರ್ನಾಟಕದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದಿದ್ದಾರೆ.

“ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ. ಮಧ್ಯ ಕರ್ನಾಟಕದ ಬರಗಾಲ ಪೀಡಿತ, ಬಿಸಿಲು ಪ್ರದೇಶದ ನಾಡಿಗೆ ಒಂದು ಲಕ್ಷಕ್ಕಿಂತ ಹೆಕ್ಟರ್ ಪ್ರದೇಶಕ್ಕೆ ನೀರಾವರಿ, ಕುಡಿಯುವ ನೀರಿನ ಮಹತ್ವದ ಯೋಜನೆ ಇದಾಗಿದ್ದು, ಇದರಿಂದ ಬಹಳ ಅನುಕೂಲವಾಗಲಿದೆ. ರಾಷ್ಟ್ರೀಯ ಯೋಜನೆಯಾಗಿ ಮಾಡುವಂತೆ ಮೊದಲೇ ಪ್ರಸ್ತಾವನೆ ಕಳಿಸಿದ್ದೆವು” ಎಂದು ತಿಳಿಸಿದ್ದಾರೆ.

“ಚಿಕ್ಕಮಗಳೂರು ಭಾಗದಲ್ಲಿನ ಭದ್ರಾ ನದಿಯಿಂದ ಬರಪೀಡಿತ ಜಿಲ್ಲೆಗಳಾದ ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ನೀರನ್ನು ಒದಗಿಸುವ ಯೋಜನೆ ಇದಾಗಿದೆ.”

“ತುಂಗಾದಿಂದ ಭದ್ರಾಗೆ ಮೊದಲ ಹಂತದಲ್ಲಿ 17.40 ಟಿಎಂಸಿ ನೀರನ್ನು ಮತ್ತು ಎರಡನೇ ಹಂತದಲ್ಲಿ 29.90 ಟಿಎಂಸಿ ನೀರನ್ನು ಅಜ್ಜಂಪುರ ಬಳಿಯ ಕೃಷ್ಣಾ ಜಲಾನಯನ ಪ್ರದೇಶದ ತುಂಗಭದ್ರಾ ಉಪ ಜಲಾನಯನದ ಬಳಿಯ ಸುರಂಗಕ್ಕೆ ಮೇಲೆತ್ತುವ ಉದ್ದೇಶ ಹೊಂದಿದೆ” ಎಂದು ಯೋಜನೆ ತಿಳಿಸಿದೆ.

ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಮತ್ತು ದಾವಣಗೆರೆಯಲ್ಲಿ ಸೂಕ್ಷ್ಮ ನೀರಾವರಿ ಮೂಲಕ 2.25 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರನ್ನು ಹರಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...