Homeಕರ್ನಾಟಕಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌...

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

- Advertisement -
- Advertisement -

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ ಮಾಹಿತಿ ನೀಡಿದರು.

ಸೋಮವಾರ (ಡಿಸೆಂಬರ್ 8) ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಸಿ.ಟಿ ರವಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಬಿಪಿಎಲ್ ಪಡಿತರ ಚೀಟಿದಾರರಿಗೆ ವಿತರಿಸುವ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಮಾಡಿ ಹೊರ ದೇಶಗಳಿಗೆ, ರಾಜ್ಯಗಳಿಗೆ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?. ಈ ಸಂಬಂಧ ದಾಖಲಾದ ಪ್ರಕರಣದಲ್ಲಿ ಎಷ್ಟು ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ, ಎಷ್ಟು ವಾಹನಗಳನ್ನು ಜಪ್ತಿ ಮಾಡಲಾಗಿದೆ ಮತ್ತು ಎಷ್ಟು ಜನರ ಮೇಲೆ ಮೊಕದ್ದಮ್ಮೆ ದಾಖಲಿಸಲಾಗಿದೆ ಎಂದು ಸಿ.ಟಿ ರವಿ ಕೇಳಿದರು.

ಮುಂದುವರಿದು, ಅನ್ನಭಾಗ್ಯದ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟದ ಪ್ರಕರಣಗಳ ತನಿಖೆಗೆ ಸರ್ಕಾರ ಆದೇಶ ನೀಡಿದೆಯೇ? ಈ ಪ್ರಕರಣಗಳಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಹೂಡಿರುವ ಪ್ರಕರಣಗಳು ಯಾವುವು? ಅಕ್ರಮದಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ದ ಕೈಗೊಂಡಿರುವ ಕ್ರಮ ಏನು? ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ, 2025-26ರಲ್ಲಿ ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 485 ಮೊಕದ್ದಮೆಗಳನ್ನು ಹೂಡಲಾಗಿದೆ, 461 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ, 570 ಜನರನ್ನು ಬಂಧಿಸಲಾಗಿದೆ. 29,603 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿದ್ದೇವೆ ಮತ್ತು 314 ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಯಾದಗಿರಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಕೊಪ್ಪಳ ಗೋದಾಮಿನ ಪ್ರಕರಣದಲ್ಲಿ ಸುಮಾರು 330 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡು ಎಫ್‌ಐಆರ್ ದಾಖಲಿಸಲಾಗಿದೆ. ಬಾಗಲಕೋಟೆಯಲ್ಲಿ ಎಫ್‌ಐರ್ ದಾಖಲಿಸಲಾಗಿದೆ. ಅಲ್ಲಿನ ಪ್ರಕರಣದಲ್ಲಿ ಒಬ್ಬ ಪತ್ರಕರ್ತನ ಕೊಲೆಯಾಗಿದೆ. ಬಸವರಾಜ್ ರಾಮಪ್ಪ ಖಾನಗೊಂಡ ಎಂಬವರು ಟಿವಿಎಸ್‌ ಸ್ಕೂಟರ್‌ನಲ್ಲಿ ತೆರಳುವಾಗ ಅಪಘಾತವೆಸಗಿ ಕೊಲೆ ಮಾಡಲಾಗಿದೆ. ಈ ಕುರಿತು ಅವರ ಪತ್ನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಅದು ಈಗ ವಿಚಾರಣೆಯ ಹಂತದಲ್ಲಿದೆ ಎಂದು ಹೇಳಿದರು.

ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾಲ, ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ, ತಪ್ಪಿತಸ್ಥರ ವಿರುದ್ದ ಅಗತ್ಯ ವಸ್ತುಗಳ ಕಾಯ್ದೆ 1995ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಮುನಿಯಪ್ಪ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಸಿ.ಟಿ ರವಿ, ಸಿಂಗಾಪುರದಲ್ಲಿ ಇದೇ ಪಾಲಿಶ್ ಮಾಡಿದ ಅಕ್ಕಿಯನ್ನು 25 ಕೆ.ಜಿಗೆ 8 ಸಾವಿರ ರೂಪಾಯಿಯಂತೆ ಮಾರಾಟ ಮಾಡಲಾಗುತ್ತಿದೆ. ದುಬೈನಲ್ಲಿ 15 ಕೆ.ಜಿ ಅಕ್ಕಿಯನ್ನು 1,500 ರೂಪಾಯಿಗೆ ಮಾರಾಲಾಗುತ್ತಿದೆ ಎಂಬ ಮಾಹಿತಿಯಿದೆ. ಹಾಗಾಗಿ, ಬಡವರಿಗೆ ಅನ್ನಭಾಗ್ಯ ಎಂದು ಕೊಡಲಾಗುತ್ತಿರುವ ಅಕ್ಕಿ ಬಡವರಿಗೆ ಸಿಗುತ್ತಿಲ್ಲ ಎಂದು ಹೇಳಿದರು.

ಇದರಲ್ಲಿ ಅಧಿಕಾರಿಗಳು ಶಾಮಿಲಾಗಿದ್ದಾರೆ. ಗೋದಾಮುಗಳಿಗೆ ಬರುವ ಮುಂಚೆಯೇ ಕ್ವಿಂಟಾಲ್‌ಗಟ್ಟಲೆ ಅಕ್ಕಿ ಮಾಯವಾಗುತ್ತಿದೆ. ನೂರಾರು ಪ್ರಕರಣಗಳು ದಾಖಲಾಗಿರುವುದರಿಂದ. ಇದರ ಹಿಂದೆ ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದರ ಜಾಲ ಇರಬಹುದು. ಹಾಗಾಗಿ, ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸುವ ಕುರಿತು ಸರ್ಕಾರ ಚಿಂತಿಸಿದೆಯಾ? ಈ ಅಕ್ರಮ ತಡೆಯಲು ಕಠಿಣ ಕ್ರಮವನ್ನು ಕೈಗೊಳ್ಳುವ ಬಗ್ಗೆ ಯೋಚಿಸಿದೆಯಾ? ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ, ಅಗತ್ಯ ವಸ್ತುಗಳ ಕಾಯ್ದೆ ಅಡಿ ಎಲ್ಲಾ ಕ್ರಮ ಕೈಗೊಳ್ಳುವ ಅಧಿಕಾರ ಆಹಾರ ಇಲಾಖೆಯ ಉಪ ಆಯುಕ್ತರಿಗೆ ಇದೆ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಹಾಗಾಗಿಯೇ ಅಕ್ರಮಗಳ ಬಗ್ಗೆ ಇಷ್ಟೊಂದು ತನಿಖೆ ನಡೆದು ಮಾಹಿತಿಯನ್ನು ಒದಗಿಸಿದ್ದೇವೆ. ಬಾಗಲಕೋಟೆಯ ಕೊಲೆ ಪ್ರಕರಣ ಸಂಬಂಧ ಮೂರ್ನಾಲು ಮಂದಿಯನ್ನು ಬಂಧಿಸಲಾಗಿದೆ. ಅವರೆಲ್ಲ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದರು.

ಎಸ್‌ಐಟಿ ರಚಿಸುವ ಅವಶ್ಯಕತೆ ಇಲ್ಲ. ಪ್ರಸ್ತುತ ಇರುವ ಕಾನೂನಿನಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವ ಅವಕಾಶವಿದೆ. ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...