Homeಅಂತರಾಷ್ಟ್ರೀಯ5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

5,800 ಕಿ.ಮೀ. ಚಿಮ್ಮುವ ಕ್ಷಿಪಣಿಯಿಂದ ಉಕ್ರೇನ್‌ ಮೇಲೆ ರಷ್ಯಾ ದಾಳಿ:  60 ವರ್ಷದಲ್ಲಿ ಮೊದಲ ಬಳಕೆ

- Advertisement -
- Advertisement -

ಮಾಸ್ಕೋ:  ರಷ್ಯಾವು ಉಕ್ರೇನ್‌ನಲ್ಲಿ ಇಂಟರ್-ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು (ಐಸಿಬಿಎಂ) ಉಡಾಯಿಸಿದೆ ಎಂದು ವರದಿಯಾಗಿದೆ. ಇದನ್ನು ಸುಮಾರು 60 ವರ್ಷಗಳ ಹಿಂದೆ ಬಳಕೆ ಮಾಡಲಾಗಿದ್ದು, ನಂತರ ಇದು ಪ್ರಥಮ ಬಳಕೆ ಎಂದು ಗುರುತಿಸಲಾಗಿದೆ.

ಇದನ್ನು ಉಕ್ರೇನ್‌ನಲ್ಲಿ ಸ್ಫೋಟಗೊಂಡ ಸ್ಥಳದಿಂದ ಸುಮಾರು 1,000 ಕಿಮೀ ದೂರದಲ್ಲಿರುವ ರಷ್ಯಾದ ಅಸ್ಟ್ರಾಖಾನ್ ಪ್ರದೇಶದಿಂದ  ಉಡಾವಣೆ ಮಾಡಲಾಗಿದೆ.  ಉಕ್ರೇನ್‌ನ  ಡಿನಿಪ್ರೊದಲ್ಲಿ ಮೂಲಸೌಕರ್ಯವನ್ನು ಗುರಿಯಾಗಿಸಲು ಮಾಸ್ಕೋ ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ಸ್ (ಎಂಐಆರ್‌ವಿ) ಪ್ರಯೋಗಿಸಲಾಗಿದೆ. ಇದು ತಂತ್ರಜ್ಞಾನದ ಮೊದಲ ಬಳಕೆಯಾಗಿದೆ.

5,800 ಕಿ.ಮೀ.ಗೂ ಅಧಿಕ ವ್ಯಾಪ್ತಿಯವರೆಗೆ  ಗುರಿ ಚಲಾವಣೆಯನ್ನು ಈ ಐಸಿಬಿಎಂಗಳು ಹೊಂದಿವೆ.

ಇವುಗಳಿಂದ ಪರಮಾಣು, ರಾಸಾಯನಿಕ ಮತ್ತು ಜೈವಿಕ ಸಿಡಿತಲೆಗಳನ್ನು ಸಾಗಣೆ ಮಾಡಲು ತಯಾರಿಸಲಾಗಿದೆ. ಇವುಗಳು ಪ್ರಸ್ತುತ ಇರುವ ಸಿಡಿತಲೆಗಳನ್ನೂಸಾಗಣೆ ಮಾಡಬಲ್ಲವಾಗಿವೆ. ಇದನ್ನು ರಷ್ಯಾವು ಆರ್‌ ಎಸ್-26 ರುಬೆಜ್, ಬ್ಯಾಲಿಸ್ಟಿಕ್ ಕ್ಷಿಪಣಿಯಲ್ಲಿ ಬಳಸಿದೆ ಎಂದು ವರದಿಯಾಗಿದೆ.

ಇದರ ಕುರಿತು  ರಷ್ಯಾ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ.  ಕೀವ್‌ ಇದನ್ನು ಬಳಕೆ ಮಾಡಿರುವುದನ್ನು ದೃಢಪಡಿಸಿದೆ. ಹೊಸ ಅಣ್ವಸ್ತ್ರ ನೀತಿಗೆ  ಪುಟಿನ್‌ ಸಹಿ ಹಾಕಿದ ನಂತರ ಈ ಉಡಾವಣೆಯನ್ನು ನಡೆಸಲಾಗಿದೆ. ದೀರ್ಘ ಶ್ರೇಣಿಯ ಎಟಿಎಸಿಎಂಎಸ್‌ ಕ್ಷಿಪಣಿಗಳನ್ನು ರಷ್ಯಾ ಮೇಲೆ ಉಡಾಯಿಸಲು  ಉಕ್ರೇನ್‌ಗೆ ಅಮೆರಿಕ ಅನುಮತಿ ನೀಡಿತ್ತು.

ಇದನ್ನೂ ಓದಿ…ನಕ್ಸಲ್  ವಿಕ್ರಂ ಗೌಡನದು ನಕಲಿ ಎನ್‌ಕೌಂಟರ್: ಸಿಪಿಐ (ಎಂಎಲ್) ಮಾಸ್ ಲೈನ್ ಖಂಡನೆ

ಸಾಮಾಜಿಕ ಜಾಲತಾಣ ಮತ್ತು ಟೆಲಿಗ್ರಾಮ್ ಹ್ಯಾಂಡಲ್‌ಗಳಲ್ಲಿ ಇದರ ವೀಡಿಯೊಗಳು ಕಾಣಿಸಿಕೊಂಡಿವೆ. ಪರಮಾಣು ಸಿದ್ಧಾಂತದ ಬದಲಾವಣೆಗಳಿಗೆ ಪುಟಿನ್ ಸಹಿ ಹಾಕಿದ ಕೇವಲ ಒಂದು ದಿನದ ನಂತರ ಈ ಉಡಾವಣೆಯಾಗಿದೆ.

Rubezh MIRV ತಂತ್ರಜ್ಞಾನವನ್ನು ಹೊಂದಿರುವ ಘನ-ಇಂಧನ ಐಸಿಬಿಎಂ ಆಗಿದೆ. ಇದನ್ನು 2011ರಲ್ಲಿ ಅಭಿವೃದ್ಧಿಪಡಿಸಲಾಗಿದೆ ಮತ್ತು 2012 ರಲ್ಲಿ ಮೊದಲ ಬಾರಿಗೆ ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಉಡಾವಣಾ ಸ್ಥಳದಿಂದ 5,800 ಕಿಮೀ ದೂರದ ಗುರಿಯನ್ನು ಇದು ಹೊಂದಿದೆ.

ಇದನ್ನೂ ಓದಿ…ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂನಿಂದ ‘ಪಕ್ಷಪಾತದ ನಿಲುವು’ : ಸಿಜೆಐಗೆ ಪತ್ರ ಬರೆದ ವಕೀಲ

ಘನ-ಇಂಧನ ಕ್ಷಿಪಣಿಗಳನ್ನು ಉಡಾವಣೆ ಮಾಡಿದ ತಕ್ಷಣ ಇಂಧನ ತುಂಬುವ ಅಗತ್ಯವಿಲ್ಲ ಮತ್ತು ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಸುಲಭವಾಗಿರುತ್ತದೆ. ಇದು ಇಂಧನ ಮತ್ತು ಆಕ್ಸಿಡೈಸರ್ ಮಿಶ್ರಣವಾಗಿದ್ದು, ಗಟ್ಟಿಯಾದ ರಬ್ಬರಿನ ವಸ್ತುವಿನಿಂದ ಒಟ್ಟಿಗೆ ಜೋಡಿಸಲ್ಪಟ್ಟಿರುತ್ತದೆ ಮತ್ತು ಲೋಹದ ಕವಚದಲ್ಲಿ ಪ್ಯಾಕ್ ಮಾಡಲಾಗುತ್ತದೆ.

ಆರ್ ಎಸ್-26 ನಲ್ಲಿ ಘನ-ಪ್ರೊಪೆಲೆಂಟ್ ಸುಟ್ಟಾಗ, ಇಂಧನ ಅಂಶದಿಂದ ಆಮ್ಲಜನಕವು ಅಗಾಧವಾದ ಶಕ್ತಿಯನ್ನು ಉತ್ಪಾದಿಸುತ್ತದೆ. ಒತ್ತಡವನ್ನು ಸೃಷ್ಟಿಸುತ್ತದೆ ಮತ್ತು ಚಿಮ್ಮುವಿಕೆಗೆ ಸಹಾಯ ಮಾಡುತ್ತದೆ. ಜಾಗತಿಕ ನಾಯಕರು ಈ ಕುರಿತು ಭಾರೀ ಕಳವಳವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ…ಇಸ್ರೇಲ್ ಪ್ರಧಾನಿ ನೆತನ್ಯಾಹು, ಹಮಾಸ್ ನಾಯಕ ಡೀಫ್ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...