Homeಮುಖಪುಟಹೈಕೋರ್ಟ್‌ನಲ್ಲಿ 59 ಲಕ್ಷ, ಸುಪ್ರೀಂಕೋರ್ಟ್‌ನಲ್ಲಿ 69,511 ಪ್ರಕರಣಗಳು ಬಾಕಿ ಉಳಿದಿವೆ: ಕೇಂದ್ರ ಸರ್ಕಾರ

ಹೈಕೋರ್ಟ್‌ನಲ್ಲಿ 59 ಲಕ್ಷ, ಸುಪ್ರೀಂಕೋರ್ಟ್‌ನಲ್ಲಿ 69,511 ಪ್ರಕರಣಗಳು ಬಾಕಿ ಉಳಿದಿವೆ: ಕೇಂದ್ರ ಸರ್ಕಾರ

- Advertisement -
- Advertisement -

ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಸೇರಿದಂತೆ 59,87,477 ಪ್ರಕರಣಗಳು, ಸುಪ್ರೀಂ ಕೋರ್ಟ್‌ನಲ್ಲಿ 69,511 ಪ್ರಕರಣಗಳು ಫೆಬ್ರವರಿ 1ರವರೆಗೆ ಬಾಕಿ ಉಳಿದಿವೆ ಎಂದು ಕೇಂದ್ರ ಸರ್ಕಾರ ಗುರುವಾರ ರಾಜ್ಯಸಭೆಯಲ್ಲಿ ತಿಳಿಸಿದೆ.

ತೆಲುಗು ದೇಶಂ ಪಕ್ಷದ ಸಂಸದ ಕನಕಮೇಡಲ ರವೀಂದ್ರ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಈ ಹೇಳಿಕೆ ನೀಡಿದ್ದಾರೆ.

ಹೈಕೋರ್ಟ್‌ಗಳಲ್ಲಿ ಬಾಕಿ ಉಳಿದಿರುವ 59,87,477 ಪ್ರಕರಣಗಳ ಪೈಕಿ ಅತಿ ಹೆಚ್ಚು (10,30,185) ಅಲಹಾಬಾದ್ ಹೈಕೋರ್ಟ್‌ನಲ್ಲಿವೆ. ನಂತರದ ಸ್ಥಾನದಲ್ಲಿ ರಾಜಸ್ಥಾನ (6,40,267), ಬಾಂಬೆ (6,20,586) ಹೈಕೋರ್ಟ್‌ಗಳಿದ್ದು, ಸಿಕ್ಕಿಂ ಹೈಕೋರ್ಟಿನಲ್ಲಿ ಫೆಬ್ರವರಿ 1ರವರೆಗೆ ಅತಿ ಕಡಿಮೆ (171) ಪ್ರಕರಣಗಳು ಬಾಕಿ ಉಳಿದಿವೆ.

ಡಿಸೆಂಬರ್ 31, 2022ರ ಅಂಕಿ-ಅಂಶದ ಪ್ರಕಾರ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ 4.34 ಕೋಟಿ ಪ್ರಕರಣಗಳು ಬಾಕಿ ಉಳಿದಿವೆ ಎಂದು ಪಿಟಿಐ ವರದಿ ಮಾಡಿದೆ.

ಫೆಬ್ರವರಿ 2ರಂದು ನೀಡಿದ ಪ್ರತ್ಯೇಕ ಉತ್ತರದಲ್ಲಿ, “ಫೆಬ್ರವರಿ 2ರಂದು ಸುಪ್ರೀಂ ಕೋರ್ಟ್‌ನಲ್ಲಿ 81 ಪ್ರಕರಣಗಳು, ಹೈಕೋರ್ಟ್‌ಗಳಲ್ಲಿ 1,24,810 ಪ್ರಕರಣಗಳು, ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ 2,76,208 ಪ್ರಕರಣಗಳು 25 ವರ್ಷಗಳಿಂದ ಬಾಕಿ ಉಳಿದಿವೆ” ಎಂದು ರಿಜಿಜು ಹೇಳಿದ್ದಾರೆ.

ಜನತಾ ದಳ (ಯುನೈಟೆಡ್) ಸಂಸದ ರಾಮ್ ನಾಥ್ ಠಾಕೂರ್ ಅವರ ಪ್ರಶ್ನೆಗೆ ಉತ್ತರವಾಗಿ ಕಾನೂನು ಸಚಿವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಲಯಗಳಲ್ಲಿ ಹೆಚ್ಚಿನ ಪ್ರಕರಣಗಳು ಬಾಕಿ ಉಳಿದಿರುವುದಕ್ಕೆ ನ್ಯಾಯಾಧೀಶರು ಮತ್ತು ನ್ಯಾಯಾಂಗ ಅಧಿಕಾರಿಗಳ ಲಭ್ಯತೆ, ಪೋಷಕ ನ್ಯಾಯಾಲಯದ ಸಿಬ್ಬಂದಿ ಮತ್ತು ಮೂಲಭೂತ ಸೌಕರ್ಯದ ಕೊರತೆ ಸೇರಿದಂತೆ  ಹಲವಾರು ಕಾರಣಗಳಿವೆ ಎಂದು ರಿಜಿಜು ಹೇಳಿದ್ದಾರೆ.

ಆಗಾಗ್ಗೆ ಮುಂದೂಡಿಕೆ ಮಾಡುವುದು, ಮೇಲ್ವಿಚಾರಣಾ ಕಾರ್ಯವಿಧಾನಗಳ ಕೊರತೆ ಮತ್ತು ಪ್ರಕರಣಗಳ ಸಂಕೀರ್ಣತೆಯು ದೀರ್ಘಾವಧಿಯವರೆಗೆ ಬಾಕಿ ಉಳಿದಿರುವ ಪ್ರಕರಣಗಳಿಗೆ ಕಾರಣಗಳು ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...