Homeಮುಖಪುಟಚೀನಾದಲ್ಲಿ ಪ್ರಬಲ ಭೂಕಂಪ: 100ಕ್ಕೂ ಅಧಿಕ ಮಂದಿ ಸಾವು

ಚೀನಾದಲ್ಲಿ ಪ್ರಬಲ ಭೂಕಂಪ: 100ಕ್ಕೂ ಅಧಿಕ ಮಂದಿ ಸಾವು

- Advertisement -
- Advertisement -

ಚೀನಾದ ಗನ್ಸು, ಕಿಂಗ್‌ಜೈ ಪ್ರಾಂತ್ಯಗಳಲ್ಲಿ ಸೋಮವಾರ ಮಧ್ಯರಾತ್ರಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ನೂರಕ್ಕೂ ಅಧಿಕ (ಬೆಳಿಗ್ಗೆ 6:30ರ ಹೊತ್ತಿಗೆ ಸುಮಾರು 111) ಜನರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಭೂಕಂಪ ಪರಿಹಾರ ಕೇಂದ್ರ ಕಚೇರಿಯನ್ನು ಉಲ್ಲೇಖಿಸಿ ರಾಜ್ಯ ಮಾಧ್ಯಮ ಕ್ಸಿನ್ಹುವಾ ವರದಿ ಮಾಡಿದೆ.

ಮಧ್ಯರಾತ್ರಿ 11:59ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಗನ್ಸು ಪ್ರಾಂತ್ಯದ ಲಿಯುಗೌ ಟೌನ್‌ಶಿಪ್ ಬಳಿ ಕಂಪನದ ಕೇಂದ್ರ ಬಿಂದು ಗುರುತಿಸಲಾಗಿದೆ. ಅವಘಡದಲ್ಲಿ ಸುಮಾರು 300ಕ್ಕೂ  ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ಘಟನೆ ಸಂಬಂಧ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದು, ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯ, ಮನೆ ಕಳೆದಕೊಂಡಿರುವವರೆಗೆ ಪುನರ್ವಸತಿ ಹಾಗೂ ಸಂತ್ರಸ್ತರಿಗೆ ಆಹಾರದ ವ್ಯವಸ್ಥೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವಂತೆ ಸೂಚಿಸಿದ್ದಾರೆ.

ಭೂಕಂಪದಿಂದಾಗಿ ಮನೆ, ರಸ್ತೆಗಳು ಮತ್ತು ಇತರ ಮೂಲಸೌಕರ್ಯಗಳಿಗೆ ಹಾನಿಯಾಗಿದೆ ಎಂದು ವರದಿಗಳು ಹೇಳಿವೆ. ಹಲವು ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡು ನೀರಿನ ಸಮಸ್ಯೆ ಉಂಟಾಗಿದೆ.

ಸುಮಾರು 88 ಅಗ್ನಿಶಾಮಕ ತಂಡಗಳೊಂದಿಗೆ 580 ಸಿಬ್ಬಂದಿ, ಹುಡುಕಾಟ ಮತ್ತು ರಕ್ಷಣಾ ಕಾರ್ಯದಲ್ಲಿ ಪಲಗಿರುವ 12 ಶ್ವಾನಗಳು ಹಾಗೂ 10 ಸಾವಿರಕ್ಕೂ ಅಧಿಕಾ ರಕ್ಷಣಾ ಉಪಕರಣಗಳನ್ನು ಭೂಕಂಪ ಸಂಭವಿಸಿದ ಪ್ರದೇಶಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಚೀನಾದ ಪ್ರಾಂತೀಯ ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಿಳಿಸಿದೆ.

ವರದಿಗಳ ಪ್ರಕಾರ, ಎಲ್ಲಾ ರೀತಿಯ ವೈದ್ಯಕೀಯ ತಂಡಗಳು, ವೈದ್ಯಕೀಯ ಉಪಕರಣ, ಔಷಧ ಮತ್ತು ಸುಮಾರು 60 ಆಂಬ್ಯುಲೆನ್ಸ್‌ಗಳನ್ನು ಭೂಕಂಪ ಪೀಡಿತ ಪ್ರದೇಶಗಳಿಗೆ ಸರ್ಕಾರ ಕಳುಹಿಸಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

ಉತ್ತರ ಚೀನಾದ ಹಲವು ಭಾಗದಲ್ಲಿ ಚಳಿಯ ಪ್ರಮಾಣ ಮಿತಿ ಮೀರಿದೆ. ಕನಿಷ್ಠ ಉಷ್ಣಾಂಶದಿಂದಾಗಿ ಜನ ತತ್ತರಿಸಿಹೋಗಿದ್ದಾರೆ. ಈ ನಡುವೆ ಭೂಕಂಪ ಸಂಭವಿಸಿರುವುದು ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ.

ಚೀನಾದ ಸಿಚುನ್‌ ಪ್ರದೇಶದಲ್ಲಿ ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ಭೂಕಂಪ ಸಂಭವಿಸಿ ನೂರಕ್ಕೂ ಅಧಿಕ ಮಂದಿ ಮೃತಪಟ್ಟು ಭಾರೀ ಹಾನಿಯಾಗಿತ್ತು. ಇದಕ್ಕೂ ಮುನ್ನ 2008ರಲ್ಲಿ ಚೀನಾದಲ್ಲಿ ಸಂಭವಿಸಿದ್ದ ಭೂಕಂಪದಲ್ಲಿ 87,000 ಮಂದಿ ಜೀವ ಕಳೆದುಕೊಂಡಿದ್ದರು. ಇದರಲ್ಲಿ ಶಾಲಾ ಮಕ್ಕಳು, ಸಿಬ್ಬಂದಿ ಸೇರಿ 5,335 ಮಂದಿ ಪ್ರಾಣ ಕಳೆದುಕೊಂಡಿದ್ದರು.

ಇದನ್ನೂ ಓದಿ: ಗಾಝಾದಲ್ಲಿ ಮಾನವೀಯ ಬಿಕ್ಕಟ್ಟು: ಹಸಿವು ತಾಳಲಾರದೆ ಟ್ರಕ್‌ಗಳನ್ನು ತಡೆದು ಆಹಾರ ಕಸಿದುಕೊಳ್ಳುತ್ತಿರುವ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...