Homeಮುಖಪುಟಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ 6 ಶಾಸಕರ ಕುರಿತ ಬಿಎಸ್‌ಪಿ ಅರ್ಜಿ ವಜಾಗೊಳಿಸಿದ ಸುಪ್ರೀಂ

ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ 6 ಶಾಸಕರ ಕುರಿತ ಬಿಎಸ್‌ಪಿ ಅರ್ಜಿ ವಜಾಗೊಳಿಸಿದ ಸುಪ್ರೀಂ

- Advertisement -
- Advertisement -

6 ಬಿಎಸ್‌ಪಿ ಶಾಸಕರು ಪಕ್ಷ ತ್ಯಜಿಸಿ ಸಾಮೂಹಿಕವಾಗಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದನ್ನು ಅನುಮೋದಿಸಿದ್ದ ರಾಜಸ್ಥಾನ ಸ್ಪೀಕರ್ ಸಿ.ಪಿ ಜೋಶಿಯವರ ತೀರ್ಮಾನವನ್ನು ರಾಜಸ್ಥಾನ ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟೆಲೇರಿದ್ದ ಬಿಎಸ್‌ಪಿ ಅರ್ಜಿಯನ್ನು ಸುಪ್ರೀಂ ಇಂದು ವಜಾಗೊಳಿಸಿದೆ.

ಶಾಸಕರಾದ ಆರ್. ಗುಧಾ, ಲಖನ್ ಸಿಂಗ್, ದೀಪ್ ಚಂದ್, ಜೆ.ಎಸ್. ಅವನಾ, ಸಂದೀಪ್ ಕುಮಾರ್ ಮತ್ತು ವಾಜಿಬ್ ಅಲಿ ಅವರಿಗೆ ಬಿಎಸ್ಪಿ ಪಕ್ಷ ಕಳೆದ ತಿಂಗಳು ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ನೊಟೀಸ್ ನೀಡಿ, ವಿಪ್ ಜಾರಿ ಮಾಡಿದೆ. ಬಿಎಸ್ಪಿ ರಾಷ್ಟ್ರೀಯ ಪಕ್ಷವಾಗಿದ್ದು ಪಕ್ಷದ ಶಾಸಕರು ವಿಪ್ ಉಲ್ಲಂಘಿಸಿದರೆ ಶಾಸಕರನ್ನು ಶಾಸಕ ಸ್ಥಾನದಿಂದಲೇ ಅನರ್ಹಗೊಳಿಸಲಾಗುವುದು ಎಂದು ಬೆದರಿಸಲಾಗಿತ್ತು.

ರಾಜಸ್ಥಾನದಲ್ಲಿ ಬಿಎಸ್‌ಪಿಯಿಂದ ಆಯ್ಕೆಯಾಗಿದ್ದ ಆರು ಜನರು ಸಹ ಪಕ್ಷ ಸಾಮೂಹಿಕವಾಗಿ ಪಕ್ಷ ತ್ಯಜಿಸಿ ಕಾಂಗ್ರೆಸ್ ಸೇರಿರುವುದರಿಂದ ಇದು ಪಕ್ಷಾಂತರ ನಿಷೇಧ ಕಾಯ್ದೆಯ ಉಲ್ಲಂಘನೆಯಾಗುವುದಿಲ್ಲ. ಇದೀಗ ನಾವು ಕಾಂಗ್ರೆಸ್ ಶಾಸಕರು ಎಂದು ಅವರು ತಿರುಗೇಟು ನೀಡಿದ್ದರು.

ಜಸ್ಟೀಸ್ ಅರುಣ್ ಮಿಶ್ರಾ, ಬಿ.ಆರ್ ಗವಾಯಿ ಮತ್ತು ಕೃಷ್ಣ ಮುರಾರಿಯವರಿದ್ದ ಪೀಠದ ಎದುರು ಸ್ಪೀಕರ್ ಜೋಶಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಹಾಜರಾದರು.

ರಾಜಸ್ಥಾನ ಹೈಕೋರ್ಟ್ ಸ್ಪೀಕರ್ ಜೋಶಿಯವರಿಗೆ ಈ ವಿಷಯದ ಕುರಿತು ತೀರ್ಮಾನ ತೆಗೆದುಕೊಳ್ಳುವಂತೆ ಸಮಯಾವಕಾಶ ನೀಡಿತ್ತು. ಅಲ್ಲದೇ ನಿಗದಿತ ಸಮಯದೊಳಗೆ ತೀರ್ಮಾನ ತೆಗೆದುಕೊಳ್ಳುವಂತೆ ರಾಜಸ್ಥಾನ ವಿಧಾನಸಭೆಗೆ ನಿರ್ದೇಶಿಸಿತ್ತು.

ಬಿಎಸ್‌ಪಿ ಮತ್ತು ಬಿಜೆಪಿಯ ಶಾಸಕ ಮದನ್ ದಿಲಾವರ್ ಪರವಾಗಿ ಹಿರಿಯ ವಕೀಲರಾದ ಎಸ್‌ಸಿ ಮಿಶ್ರಾ ಮತ್ತು ಸತ್ಯಪಾಲ್ ಜೈನ್ ವಾದಿಸಿದರು. ಈ ವಿಚಾರದ ಕುರಿತು ಮತ್ತಷ್ಟು ಸಮಯಾವಕಾಶ ಕೇಳಿದರೂ ಸಹ ಸುಪ್ರೀಂ ಅರ್ಜಿಯನ್ನು ವಜಾಗೊಳಿಸಿತು.


ಇದನ್ನೂ ಓದಿ: ರಾಜಸ್ಥಾನ: ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ, ಇಲ್ಲ ಪಕ್ಷದ ಸದಸ್ಯತ್ವ ರದ್ದು – ಮಾಯಾವತಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...