Homeಮುಖಪುಟಉತ್ತರ ಪ್ರದೇಶ: ಭೀಕರ ರಸ್ತೆ ಅಪಘಾತದಲ್ಲಿ6 ಮಕ್ಕಳು ಸೇರಿ 14 ಮಂದಿ ಸಾವು

ಉತ್ತರ ಪ್ರದೇಶ: ಭೀಕರ ರಸ್ತೆ ಅಪಘಾತದಲ್ಲಿ6 ಮಕ್ಕಳು ಸೇರಿ 14 ಮಂದಿ ಸಾವು

ಟೈರ್ ಪಂಕ್ಚರ್ ಆಗಿದ್ದರಿಂದ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಮೃತರ ಕಾರು ಡಿಕ್ಕಿ ಹೊಡೆದಿದೆ ಎಂದು ಪ್ರತಾಪ್‌ಗಢ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ.

- Advertisement -
- Advertisement -

ಉತ್ತರ ಪ್ರದೇಶದ ಪ್ರತಾಪ್‌ಗಢದಲ್ಲಿ ಗುರುವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಆರು ಮಕ್ಕಳು ಸೇರಿದಂತೆ ಹದಿನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಮಣಿಕ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಪ್ರಯಾಗ್‌ ರಾಜ್‌-ಲಕ್ನೋ ಹೆದ್ದಾರಿಯಲ್ಲಿ ಗುರುವಾರ ರಾತ್ರಿ 11.45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ 14 ಮಂದಿಯೂ ಸ್ಥಳದಲ್ಲೇ ಅಸುನೀಗಿದ್ದಾರೆ.

ಟೈರ್ ಪಂಕ್ಚರ್ ಆಗಿದ್ದರಿಂದ ಹೆದ್ದಾರಿಯ ಬದಿಯಲ್ಲಿ ನಿಲ್ಲಿಸಲಾಗಿದ್ದ ಟ್ರಕ್‌ಗೆ ಮೃತರ ಕಾರು ಡಿಕ್ಕಿ ಹೊಡೆದಿದೆ ಎಂದು ಪ್ರತಾಪ್‌ಗಢ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ. ಕಾರಿನ ಅರ್ಧದಷ್ಟು ಭಾಗ ಟ್ರಕ್ ಕೆಳಗೆ ಸಿಲುಕಿದ್ದು, ಪೊಲೀಸ್ ಅಧಿಕಾರಿಗಳು ಹೊರತೆಗೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಕಾರ್ಮಿಕರು ಮತ್ತು ಜಪಾನಿ ಆಡಳಿತದ ನಡುವಿನ ತಿಕ್ಕಾಟ: ಟೊಯೋಟಾದಲ್ಲಿ ನಡೆಯುತ್ತಿರುವುದೇನು?

ಮೃತ ಮಕ್ಕಳು ಸಂತ್ರಸ್ತರೆಲ್ಲರೂ ಪ್ರತಾಪ್‌ಗಢದಲ್ಲಿ ವಿವಾಹಕ್ಕೆ ಹಾಜರಾಗಿ ನಂತರ ತಮ್ಮ ಗ್ರಾಮಕ್ಕೆ ಮರಳುತ್ತಿದ್ದರು. “ನಾವು ಸಂತ್ರಸ್ತರ ಕುಟುಂಬಗಳು ಮತ್ತು ಅವರ ಗ್ರಾಮಗಳ ಮುಖ್ಯಸ್ಥರೊಂದಿಗೆ ಮಾತನಾಡಿದ್ದೇವೆ. ಅವರಿಗೆ ಸಾಧ್ಯವಿರುವ ಎಲ್ಲ ಸಹಾಯ ನೀಡುವ ಭರವಸೆ ನೀಡಿದ್ದೇವೆ” ಎಂದು ಎಸ್‌ಪಿ ಆರ್ಯ ತಿಳಿಸಿದ್ದಾರೆ.

ಎಲ್ಲಾ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕಾರು ಮತ್ತು ಟ್ರಕ್ ಎರಡರ ಮಾಲೀಕರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಅಪಘಾತದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದು, ಹಿರಿಯ ಅಧಿಕಾರಿಗಳನ್ನು ಸ್ಥಳಕ್ಕೆ ತಲುಪಲು ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ನಿರ್ದೇಶಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.


ಇದನ್ನೂ ಓದಿ: ಕುನಾಲ್ ಕಮ್ರಾ ಟ್ವೀಟ್‌‌ಗಳನ್ನು ಅನುಮತಿಸಿದ್ದಕ್ಕಾಗಿ ಟ್ವಿಟ್ಟರನ್ನು ತರಾಟೆಗೆ ಪಡೆದ ಸಂಸದೀಯ ಸಮಿತಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯುಎಸ್ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, ಹರ್ದೀಪ್ ಸಿಂಗ್‌ ಹತ್ಯೆ ಬಗ್ಗೆ ಉಲ್ಲೇಖ

0
ಯುನೈಟೆಡ್ ಸ್ಟೇಟ್ಸ್ ತನ್ನ 2023ರ ಮಾನವ ಹಕ್ಕುಗಳ ವರದಿಯಲ್ಲಿ ಮಣಿಪುರ ಹಿಂಸಾಚಾರ, BBC ಮೇಲೆ ತೆರಿಗೆ ಅಧಿಕಾರಿಗಳ ದಾಳಿ, ಕೆನಡಾದಲ್ಲಿ ಸಿಖ್ ಕಾರ್ಯಕರ್ತ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಂತಹ ಭಾರತಕ್ಕೆ ಸಂಬಂಧಿಸಿದ ಪ್ರಮುಖ...