Homeಮುಖಪುಟಪಾಕಿಸ್ತಾನದಲ್ಲಿ ಹಿಂಸಾಚಾರಕ್ಕೆ ತಿರುಗಿದ ಇಮ್ರಾನ್ ಖಾನ್ ಬೆಂಬಲಿಗರ ಪ್ರತಿಭಟನೆ : 6 ಮಂದಿ ಸಾವು, ಕಂಡಲ್ಲಿ...

ಪಾಕಿಸ್ತಾನದಲ್ಲಿ ಹಿಂಸಾಚಾರಕ್ಕೆ ತಿರುಗಿದ ಇಮ್ರಾನ್ ಖಾನ್ ಬೆಂಬಲಿಗರ ಪ್ರತಿಭಟನೆ : 6 ಮಂದಿ ಸಾವು, ಕಂಡಲ್ಲಿ ಗುಂಡು ಆದೇಶ

- Advertisement -
- Advertisement -

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಇಸ್ಲಾಮಾಬಾದ್‌ನಲ್ಲಿ ಇಂದು (ನ.26) ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, 6 ಮಂದಿ ಮೃತಪಟ್ಟಿದ್ದಾರೆ.

ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ಸಂಘರ್ಷ ಏರ್ಪಟ್ಟಿದೆ. ಸರ್ಕಾರದ ಗುಂಡಿನ ದಾಳಿಯ ಬೆದರಿಕೆಯನ್ನು ನಿರ್ಲಕ್ಷಿಸಿ ಪ್ರತಿಭಟನಾಕಾರರು ಮುನ್ನುಗ್ಗಿದ್ದಾರೆ ಎಂದು ವರದಿಗಳು ಹೇಳಿವೆ.

ಮೃತಪಟ್ಟವರಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ, ಒಬ್ಬರು ಪೊಲೀಸ್ ಮತ್ತು ಒಬ್ಬರು ನಾಗರಿಕ ಒಳಗೊಂಡಿದ್ದಾರೆ. ಪ್ರತಿಭಟನಾಕಾರರ ಜೊತೆಗಿನ ಸಂಘರ್ಷದಲ್ಲಿ ಭದ್ರತಾ ಸಿಬ್ಬಂದಿ ಬಲಿಯಾಗಿದ್ದು, ನಾಗರಿಕ ಇದೇ ವೇಳೆ ನಡೆದ ವಾಹನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪೊಲೀಸ್ ಸಿಬ್ಬಂದಿ ಪ್ರತ್ಯೇಕ ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಘಟನೆ ಬಳಿಕ ಇಸ್ಲಾಮಾಬಾದ್‌ನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಸೇನೆಯನ್ನು ನಿಯೋಜಿಸಲಾಗಿದೆ. ಹಿಂಸಾಚಾರ ನಿಯಂತ್ರಿಸಲು ಕಂಡಲ್ಲಿ ಗುಂಡು ಆದೇಶ ಹೊರಡಿಸಲಾಗಿದೆ.

ಪ್ರಧಾನಿ ಶೆಹಬಾಝ್ ಷರೀಫ್ ಭದ್ರತಾ ಸಿಬ್ಬಂದಿ ಮೇಲಿನ ದಾಳಿಯನ್ನು ಖಂಡಿಸಿದ್ದು, ‘ಅರಾಜಕತಾವಾದಿ ಗುಂಪು’ ಉದ್ದೇಶಪೂರ್ವಕವಾಗಿ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

ಹಿಂಸಾಚಾರದಲ್ಲಿ ಭಾಗಿಯಾದವರನ್ನು ಕೂಡಲೇ ಬಂಧಿಸುವಂತೆ ಪ್ರಧಾನಿ ಸೂಚನೆ ನೀಡಿದ್ದಾರೆ. ಪ್ರತಿಭಟನಾಕಾರರು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಭದ್ರತಾ ಪಡೆಗಳು ನೇರವಾಗಿ ಗುಂಡಿನ ಮೂಲಕ ಪತ್ಯುತ್ತರ ನೀಡಲಿದ್ದಾರೆ ಎಂದು ಸಚಿವ ಮೊಹ್ಸಿನ್ ನಖ್ವಿ ತಿಳಿಸಿದ್ದಾರೆ.

ಇಸ್ಲಾಮಾಬಾದ್‌ನತ್ತ ಹೊರಟಿದ್ದ ಇಮ್ರಾನ್ ಖಾನ್ ಬೆಂಬಲಿಗರನ್ನು ಪೊಲೀಸರು ಪಂಜಾಬ್‌ನ ಹಾರೊ ಬಳಿ ರವಿವಾರ ತಡರಾತ್ರಿ ತಡೆದಿದ್ದರು. ಸೋಮವಾರ ಬೆಳಿಗ್ಗೆ ರ್‍ಯಾಲಿ ಪುನರಾರಂಭ ಮಾಡಿದ್ದ ಪ್ರತಿಭಟನಾಕಾರರು, ಇಸ್ಲಾಮಾಬಾದ್‌ನತ್ತ ಪ್ರಯಾಣ ಬೆಳೆಸಿದ್ದರು.

ಖಾನ್ ಬೆಂಬಲಿಗರಿಂದ ಹಲ್ಲೆಗೊಳಗಾದ ಪತ್ರಕರ್ತರು ಸೇರಿದಂತೆ ನೂರಾರು ಜನರು ಗಾಯಗೊಂಡಿದ್ದಾರೆ. ಪ್ರತಿಭಟನೆ ದೃಶ್ಯ ಸೆರೆ ಹಿಡಿಯುತ್ತಿದ್ದ ಅಸೋಸಿಯೇಟೆಡ್ ಪ್ರೆಸ್‌ ವಿಡಿಯೋಗ್ರಾಫರ್‌ ಮೇಲೆ ಖಾನ್ ಬೆಂಬಲಿಗರು ದಾಳಿ ನಡೆಸಿದ್ದು, ಅವರ ಕ್ಯಾಮರಾವನ್ನು ಕಿತ್ತುಕೊಂಡಿದ್ದಾರೆ. ಘಟನೆಯಲ್ಲಿ ವಿಡಿಯೋಗ್ರಾಫರ್ ತಲೆಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಕಿಸ್ತಾನಿ ಮಾಧ್ಯಮಗಳು ಪ್ರತಿಭಟನೆಯ ಚಿತ್ರೀಕರಣ ಮತ್ತು ಛಾಯಾಗ್ರಹಣವನ್ನು ಬಹುತೇಕ ನಿಲ್ಲಿಸಿವೆ ಎಂದು ವರದಿಯಾಗಿದೆ.

ಇಮ್ರಾನ್ ಖಾನ್ ಅವರ ಪತ್ನಿ ಬುಶ್ರಾ ಬೀಬಿ ಹಾಗೂ ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮೀನ್ ಗಂಡಾಪುರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ದೇಶದಾದ್ಯಂತ ನ. 24ರಿಂದ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸುವಂತೆ ಇಮ್ರಾನ್ ಖಾನ್ ತಮ್ಮ ಬೆಂಬಲಿಗರಿಗೆ ಈ ಮೊದಲು ಕರೆ ನೀಡಿದ್ದರು.

ಸುಮಾರು 150ಕ್ಕೂ ಹೆಚ್ಚು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಕಳೆದ ಒಂದು ವರ್ಷದಿಂದ ಜೈಲಿನದ್ದಾರೆ. ಅವರ ಪಕ್ಷ, ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಅಥವಾ ಪಿಟಿಐ, ಖಾನ್ ಮೇಲಿನ ಪ್ರಕರಣಗಳು ರಾಜಕೀಯ ಪ್ರೇರಿತ ಎಂದು ಹೇಳುತ್ತಿವೆ.

ಇದನ್ನೂ ಓದಿ : ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...