Homeಮುಖಪುಟನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

ನಕಲಿ ಚೆಕ್ ಮೂಲಕ ಅಯೋಧ್ಯೆ ಮಂದಿರ ಟ್ರಸ್ಟ್‌ನಿಂದ 6 ಲಕ್ಷ ರೂ ಕಳ್ಳತನ!

ಇದು ಟ್ರಸ್ಟ್‌ನ ಸದಸ್ಯರಿಗೆ ಸಾಕಷ್ಟು ಹತ್ತಿರವಿರುವ ವ್ಯಕ್ತಿಯ ಕೆಲಸವಾಗಿರಬಹುದು ಅಥವಾ ಅವರೊಂದಿಗೆ ನಿಯಮಿತವಾಗಿ ಸಂವಹನ ನಡೆಸುತ್ತಿರುವ ವ್ಯಕ್ತಿಯ ಕೆಲಸವಾಗಿರಬಹುದು ಎಂಬ ಅನುಮಾನವಿದೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

- Advertisement -
- Advertisement -

ರಾಮಮಂದಿರದ ನಿರ್ಮಾಣದ ಹೊಣೆ ಹೊತ್ತಿರುವ ಅಯೋಧ್ಯೆಯ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಎರಡು ನಕಲಿ ಚೆಕ್‌ಗಳನನ್ನು ಬಳಸಿ 6 ಲಕ್ಷ ರೂಪಾಯಿಗಳನ್ನು ವಂಚಿಸಲಾಗಿದೆ. ಮೂರನೇ ನಕಲಿ ಚೆಕ್ ಪರಿಶೀಲನೆ ಪ್ರಕ್ರಿಯೆಯಲ್ಲಿ ಈ ವಂಚನೆ ಪತ್ತೆಯಾಗಿದ್ದು, ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ದೂರಿನ ಮೇರೆಗೆ ಅಯೋಧ್ಯೆ ಪೊಲೀಸರಿಗೆ ಎಫ್‌ಐಆರ್ ದಾಖಲಿಸಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಯಾ ಘಾಟ್ ಶಾಖೆಯಲ್ಲಿ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಖ್ಯೆ 39200235062 ಅಡಿಯಲ್ಲಿ ಅಕೌಂಟ್ ಹೊಂದಿದೆ. ಈ ಅಕೌಂಟ್‌ನಿಂದ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಡಾ.ಅನಿಲ್ ಮಿಶ್ರಾ ಸಹಿ ಮೂಲಕ ಹಣ ತೆಗೆಯಬಹುದಾಗಿದೆ.

ಇದನ್ನೂ ಓದಿ: ನಿನ್ನೆಯ ಡಿಸ್‌ಲೈಕ್ ದಾಖಲೆ ಮುರಿದ ಪ್ರಧಾನಿ ಮೋದಿಯವರ ಮತ್ತೊಂದು ವೀಡಿಯೋ!!!

ಸೆಪ್ಟೆಂಬರ್ 1 ರಂದು 2,50,000 ರೂಗಳನ್ನು ಚೆಕ್ ಸಂಖ್ಯೆ 740799 ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗಿದೆ. ಒಂದು ವಾರದ ನಂತರ ಮತ್ತೆ ಸೆಪ್ಟೆಂಬರ್ 8 ರಂದು 3,50,000 ರೂಗಳನ್ನು ಚೆಕ್ ಸಂಖ್ಯೆ 740800ರ ಮೂಲಕ ಅದೇ ಪಿಎನ್‌ಬಿ ಖಾತೆಗೆ ವರ್ಗಾಯಿಸಲು ಬಳಸಲಾಗಿದೆ. ಈ ಚೆಕ್ ವರ್ಗಾವಣೆಯನ್ನು ಫೋರ್ಜರಿ ಮೂಲಕ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತದನಂತರ ಸೆಪ್ಟೆಂಬರ್ 9 ರಂದು ಬ್ಯಾಂಕ್ ಆಫ್ ಬರೋಡಾಗೆ 9,86,000 ರೂಗಳನ್ನು ಚೆಕ್ ಸಂಖ್ಯೆ 740798 ಮೂಲಕ ವರ್ಗಾಹಿಸುವಂತೆ ಮನವಿ ಬಂದಿತ್ತು. ಆದರೆ ಈ ಬಾರಿ, ಮೊತ್ತವು ತುಸು ಹೆಚ್ಚಾಗಿದ್ದರಿಂದ, ಚೆಕ್ ಪರಿಶೀಲನೆಗಾಗಿ ಬ್ಯಾಂಕ್ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರನ್ನು ಕರೆಸಿದಾಗ ವಂಚನೆ ಪ್ರಕರಣ ಬಯಲಿಗೆ ಬಂದಿದೆ.

ಚಂಪತ್ ರಾಯ್ ಚೆಕ್ ಬುಕ್ ಪರಿಶೀಲಿಸಿದೆರೇ, ಆ ಸಂಖ್ಯೆಯ ಚೆಕ್ ಪ್ರತಿ ಇನ್ನೂ ತನ್ನ ಬಳಿ ಇದೆ ಎಂಬುದು ತಿಳಿದುಬಂದಿದೆ. ತಕ್ಷಣ ಚೆಕ್ ತಡೆ ಹಿಡಿದು, ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಪೊಲೀಸರು  ಮೋಸ, ಅಪ್ರಾಮಾಣಿಕತೆ, ಖೋಟಾ ಮತ್ತು ಪ್ರಮುಖ ದಾಖಲೆಗಳ ಕಳ್ಳತನದ ಆರೋಪದ ಮೇಲೆ  ಐಪಿಸಿಯ 419, 420, 467, 468, 471 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆ ತಡೆ ದಿನ: ತಮ್ಮವರ ಬಗೆಗಿನ ಕೊಂಚ ಕಾಳಜಿಯೂ ಸಹ ಆತ್ಮಹತ್ಯೆ ತಡೆಯಬಹುದು!

“ನಾವು ಪ್ರಸ್ತುತ ಈ ಪ್ರಕರಣದಲ್ಲಿ ಪ್ರಾಥಮಿಕ ತನಿಖೆ ನಡೆಸುತ್ತಿದ್ದೇವೆ. ಪಿಎನ್‌ಬಿಯಲ್ಲಿ ಎರಡು ಚೆಕ್‌ಗಳನ್ನು ಪ್ರಸ್ತುತಪಡಿಸುವ ಮೂಲಕ ರಾಮ್ ಮಂದಿರ ಟ್ರಸ್ಟ್‌ನ ಖಾತೆಯಿಂದ ಮೋಸದಿಂದ ಹಣವನ್ನು ತೆಗೆಯಲಾಗಿದೆ ಎಂದು ಇದುವರೆಗೂ ತಿಳಿದುಬಂದಿದೆ. ಇದನ್ನು ಯಾರು ಮಾಡಿದ್ದಾರೆಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ ಮತ್ತು ಬ್ಯಾಂಕ್ ಶಾಖೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತೇವೆ” ಎಂದು ಸಿಒ ರಾಜೇಶ್ ಕುಮಾರ್ ರೈ ತಿಳಿಸಿದರು.

ಇದು ಟ್ರಸ್ಟ್‌ನ ಸದಸ್ಯರಿಗೆ ಸಾಕಷ್ಟು ಹತ್ತಿರವಿರುವ ವ್ಯಕ್ತಿಯ ಕೆಲಸವಾಗಿರಬಹುದು ಅಥವಾ ಅವರೊಂದಿಗೆ ನಿಯಮಿತವಾಗಿ ಸಂವಹನ ನಡೆಸುತ್ತಿರುವ ವ್ಯಕ್ತಿಯ ಕೆಲಸವಾಗಿರಬಹುದು ಎಂಬ ಅನುಮಾನವಿದೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.

ಇತ್ತ ಚಂಪತ್ ರಾಯ್, ಅಪರಾಧಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂಬ ವಿಶ್ವಾಸವಿದೆ ಮತ್ತು ಭವಿಷ್ಯದಲ್ಲಿ ಇದೇ ರೀತಿಯ ಘಟನೆಗಳಾಗದಂತೆ ಟ್ರಸ್ಟ್ ಗಮನಹರಿಸಲಿದೆ ಎಂದಿದ್ದಾರೆ.


ಇದನ್ನೂ ಓದಿ: NRC ಕೊಟ್ಟ ನೋವುಗಳ ಗುಚ್ಛ : ‘ನಾಯ್ಸ್ ಆಫ್ ಸೈಲೆನ್ಸ್’ ಚಿತ್ರ ಬಿಡುಗಡೆಗೆ ಸಿದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...