Homeಮುಖಪುಟಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

ಸಹಾಯಕ್ಕಾಗಿ ಯಾಚಿಸಿದ 12 ದಿನಗಳ ಬಳಿಕ ಆರು ವರ್ಷದ ಗಾಝಾ ಬಾಲಕಿಯ ಮೃತದೇಹ ಪತ್ತೆ

- Advertisement -
- Advertisement -

“ನನಗೆ ಭಯವಾಗುತ್ತಿದೆ, ದಯವಿಟ್ಟು ಬಂದು ಕಾಪಾಡಿ” ಎಂದು ರಕ್ಷಣಾ ಕಾರ್ಯಕರ್ತರಿಗೆ ಕರೆ ಮಾಡಿ ಸಹಾಯಕ್ಕಾಗಿ ಅಂಗಲಾಚಿದ್ದ ಗಾಝಾದ 6 ವರ್ಷದ ಬಾಲಕಿ ಹಿಂದ್‌ ರಜಬ್‌ಳ ಮೃತದೇಹ 12 ದಿನಗಳ ಬಳಿಕ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಾಲಕಿಯ ಕುಟುಂಬ ಸಂಚರಿಸುತ್ತಿದ್ದ ಕಾರಿನ ಮೇಲೆ ಇಸ್ರೇಲಿ ಸೇನಾಪಡೆ ದಾಳಿ ಮಾಡಿದ್ದ ಸಂದರ್ಭ ಆಕೆ ಸಹಾಯಕ್ಕಾಗಿ ಪ್ಯಾಲಿಸ್ತೀನ್ ರೆಡ್‌ ಕ್ರೆಸೆಂಟ್ ಸಂಸ್ಥೆಗೆ ಕರೆ ಮಾಡಿದ್ದಳು ಎಂದು ವರದಿಗಳು ಹೇಳಿವೆ.

ಇಸ್ರೇಲ್‌ ಸೈನಿಕರ ದಾಳಿಯಲ್ಲಿ ಕುಟುಂಬಸ್ಥರು ಹತ್ಯೆಯಾದಾಗ ಸುಮಾರು ಮೂರು ಗಂಟೆಗಳ ಕಾಲ ಹಿಂದ್ ರಜಬ್‌ ಕಾರಿನೊಳಗೆ ಮೃತ ದೇಹಗಳೊಂದಿಗೆ ಇದ್ದಳು. ಈ ವೇಳೆ ಆಕೆ ರೆಡ್‌ ಕ್ರೆಸೆಂಟ್‌ಗೆ ಕರೆ ಮಾಡಿ “ನನಗೆ ಭಯವಾಗುತ್ತಿದೆ. ನನ್ನನ್ನು ಕರೆದುಕೊಂಡು ಹೋಗಿ” ಎಂದಿದ್ದಾಳೆ. ಈ ವೇಳೆ ಆ ಕಡೆಯಿಂದ ಆಕೆಗೆ ಧೈರ್ಯ ತುಂಬಿದ್ದ ರೆಡ್ ಕ್ರೆಸೆಂಟ್‌ನ ರಕ್ಷಣಾ ಕಾರ್ಯರ್ತೆ, “ಹೆದರಬೇಡ ಪುಟ್ಟ, ನಾವು ಬರುತ್ತಿದ್ದೇವೆ. ನಿನ್ನನ್ನು ರಕ್ಷಿಸುತ್ತೇವೆ” ಎಂದು ಹೇಳಿರುವ ಕಾಲ್ ರೆಕಾರ್ಡ್‌ ಹೃದಯ ವಿದ್ರಾವಕವಾಗಿದೆ.

ವರದಿಗಳ ಪ್ರಕಾರ, ಬಾಲಕಿ ಕರೆ ಮಾಡಿದ ತಕ್ಷಣ ರೆಡ್ ಕ್ರೆಸೆಂಟ್ ಇಬ್ಬರು ವೈದ್ಯಕೀಯ ಸಿಬ್ಬಂದಿಯೊಂದಿಗೆ ಆಕೆ ಇರುವ ಸ್ಥಳಕ್ಕೆ ಆಂಬ್ಯುಲೆನ್ಸ್ ಕಳಿಸಿತ್ತು. ಬಳಿಕ ಆಂಬ್ಯುಲೆನ್ಸ್ ಸಂಪರ್ಕ ಕಳೆದುಕೊಂಡಿತ್ತು. ಜನವರಿ 29ರಂದು ಈ ಘಟನೆ ನಡೆದಿದೆ.

ಘಟನೆ ನಡೆದು ಎರಡು ವಾರಗಳ ಬಳಿಕ ಶನಿವಾರ (ಫೆ.10) ಗಾಝಾದ ಟೆಲ್ ಅಲ್‌ ಹವಾ ಪ್ರದೇಶದಲ್ಲಿ ಸುಟ್ಟು ಕರಕಲಾದ ಕಾರಿನೊಳಗೆ ಮೃತದೇಹಗಳು ಸಿಕ್ಕಿವೆ. ಅದರಲ್ಲಿ ಹಿಂದ್ ರಜಬ್‌ಳ ಶವವೂ ಇತ್ತು ಎಂದು ವರದಿಗಳು ಹೇಳಿವೆ. ಬಾಲಕಿ ಸಹಾಯಕ್ಕಾಗಿ ಕೋರಿದಾಗ ರೆಡ್‌ ಕ್ರೆಸೆಂಟ್ ಕಳಿಸಿದ್ದ ಆಂಬ್ಯುಲೆನ್ಸ್ ಕೂಡ ಅಲ್ಲೆ ಅಣತಿ ದೂರದಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಇಬ್ಬರು ವೈದ್ಯಕೀಯ ಸಿಬ್ಬಂದಿಯ ಮೃತದೇಹಗಳು ದೊರೆತಿವೆ ಎಂದು ರೆಡ್‌ ಕ್ರೆಸೆಂಟ್ ಉಲ್ಲೇಖಿಸಿ ನ್ಯೂಯಾರ್ಕ್‌ ಟೈಮ್ಸ್ ವರದಿ ಮಾಡಿದೆ.

ಇಸ್ರೇಲ್‌ ಪಡೆಗಳಿಂದ ತಪ್ಪಿಸಿಕೊಳ್ಳಲು ಹಿಂದ್‌ ರಜಬ್‌ಳ ಕುಟುಂಬ ಗಾಝಾದಿಂದ ದೂರ ಹೊರಟಿತ್ತು. ಈ ವೇಳೆ ಇಸ್ರೇಲ್‌ ಟ್ಯಾಂಕರ್‌ಗಳು ಅವರ ಕಾರಿನ ಮೇಲೆ ದಾಳಿ ಮಾಡಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ. ದಾಳಿ ಬಳಿಕ ರೆಡ್ ಕ್ರೆಸೆಂಟ್‌ಗೆ ಕರೆ ಮಾಡಿದ್ದ ರಜಬ್‌ ಹಿಂದ್‌ ಕೂಡ ಆ ಬಳಿಕ ಸಾವನ್ನಪ್ಪಿದ್ದಾಳೆ. ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಮೇಲೆಯೂ ದಾಳಿ ಮಾಡಿ ಸುಟ್ಟು ಹಾಕಲಾಗಿದೆ. ಅದರಲ್ಲಿದ್ದ ಇಬ್ಬರು ವೈದ್ಯಕೀಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಕನಿಷ್ಠ ಮಾನವೀಯತೆ ಇಲ್ಲದೆ 6 ವರ್ಷ ಬಾಲಕಿ ಮತ್ತು ಆಕೆಗೆ ಸಹಾಯ ಮಾಡಲು ತೆರಳುತ್ತಿದ್ದ ಆಂಬ್ಯುಲೆನ್ಸ್ ಅನ್ನು ಇಸ್ರೇಲಿ ಪಡೆಗಳು ಸುಟ್ಟು ಹಾಕಿವೆ. ಇದು ಯುದ್ದಪರಾಧವಲ್ಲದೆ ಇನ್ನೇನು? ಎಂದು ಮಾಧ್ಯಮಗಳು ಪ್ರಶ್ನಿಸಿವೆ.

ಇದನ್ನೂ ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...