Homeಮುಖಪುಟಪಟಾಕಿ ಅಫಘಾತ: ಬಿಜೆಪಿ ಸಂಸದೆಯ 6 ವರ್ಷದ ಮೊಮ್ಮಗಳು ನಿಧನ

ಪಟಾಕಿ ಅಫಘಾತ: ಬಿಜೆಪಿ ಸಂಸದೆಯ 6 ವರ್ಷದ ಮೊಮ್ಮಗಳು ನಿಧನ

- Advertisement -
- Advertisement -

ಪ್ರಯಾಗ್‌‌ರಾಜ್ ಕ್ಷೇತ್ರದ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ 6 ವರ್ಷದ ಮೊಮ್ಮಗಳು ಪಟಾಕಿ ಸಿಡಿಸುವ ವೇಳೆ ಆದ ಅಫಘಾತದಲ್ಲಿ ಉಂಟಾದ ಸುಟ್ಟ ಗಾಯಗಳಿಂದಾಗಿ ಇಂದು ಮುಂಜಾನೆ ನಿಧನರಾಗಿದ್ದಾರೆ. ನಿನ್ನೆ ಪಟಾಕಿ ಸಿಡಿಸುವ ವೇಳೆ ನಡೆದ ಅವಘಡದಲ್ಲಿ ಶೇಕಡಾ 60 ಕ್ಕಿಂತ ಹೆಚ್ಚು ಸುಟ್ಟ ಗಾಯಗಳಾಗಿದ್ದ ಮಗುವನ್ನು ಪ್ರಯಾಗರಾಜ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದೀಪಾವಳಿ ಆಚರಣೆ ಸಂದರ್ಭ ಇತರ ಮಕ್ಕಳ ಜತೆಗೆ ಆಡಲೆಂದು ಟೆರೇಸ್‍ಗೆ ತೆರಳಿದ್ದ ಬಾಲಕಿ ಧರಿಸಿದ್ದ ಅಂಗಿಗೆ ಪಟಾಕಿಯ ಬೆಂಕಿ ತಗಲಿತ್ತೆನ್ನಲಾಗಿದ್ದು, ಸುತ್ತಮುತ್ತಲೆಲ್ಲಾ ಪಟಾಕಿಯ ಸದ್ದಿನಿಂದಾಗಿ ಮಗುವಿನ ಅಳು ಹಾಗೂ ಚೀರಾಟ ಯಾರಿಗೂ ಕೇಳಿಸಿರಲಿಲ್ಲ. ಮಗು ಸುಟ್ಟ ಸ್ಥಿತಿಯಲ್ಲಿ ಬಿದ್ದಿರುವುದನ್ನು ನಂತರ ಗಮನಿಸಿದ್ದ ಕೆಲವರು, ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಇದನ್ನೂ ಓದಿ: ಹಸಿರು ಪಟಾಕಿ ಬಗ್ಗೆ ಗೊತ್ತಿಲ್ಲ ಎಂದ ಆರೋಗ್ಯ ಸಚಿವ ಸುಧಾಕರ್‌ !

“ಹೆಚ್ಚಿನ ಚಿಕಿತ್ಸೆಗೆ ಮಗುವನ್ನು ದೆಹಲಿ ಸ್ಥಳಾಂತರಿಸುವುದೆಂದು ನಿರ್ಧರಿಸಿದ್ದೆವು, ಆದರೆ ಇಂತಹ ಸುದ್ದಿಯನ್ನು ನಾವು ನಿರೀಕ್ಷಿಸಿರಲಿಲ್ಲ. ಕುಟುಂಬಕ್ಕೆ ನನ್ನ ಸಂತಾಪ ತಿಳಿಸುತ್ತೇನೆ ಮತ್ತು ಅಗಲಿದ ಆತ್ಮಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.

71 ವರ್ಷದ ಸಂಸದೆ ರೀಟಾ ಬಹುಗುಣ ಜೋಶಿ, 24 ವರ್ಷಗಳು ಕಾಂಗ್ರೆಸ್‌ನಲ್ಲಿದ್ದು, 2016 ರ ನಂತರ ಬಿಜೆಪಿಗೆ ಸೇರಿದ್ದರು. ಅವರು 2007 ರಿಂದ 2012 ರವರೆಗೆ ಐದು ವರ್ಷಗಳ ಕಾಲ ಕಾಂಗ್ರೆಸ್ಸಿನ ಯುಪಿ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. 2019 ರ ಲೋಕಸಭಾ ಚುನಾವಣೆಯಲ್ಲಿ ಪ್ರಯಾಗರಾಜ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಇದನ್ನೂ ಓದಿ: ಹಸಿರು ಪಟಾಕಿಗಳು ಎಂದರೇನು..? ಅವು ಮಾಲಿನ್ಯಕಾರಕವಲ್ಲವೇ..?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...