Homeಮುಖಪುಟ60 ವರ್ಷದ ಮಹಿಳೆಗೆ ಕಿರುಕುಳ: ಎಬಿವಿಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷನ ಬಂಧನ

60 ವರ್ಷದ ಮಹಿಳೆಗೆ ಕಿರುಕುಳ: ಎಬಿವಿಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷನ ಬಂಧನ

- Advertisement -
- Advertisement -

ಎಬಿವಿಪಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಡಾ. ಸುಬ್ಬಯ್ಯ ಷಣ್ಮುಗಂ ಅವರನ್ನು 60 ವರ್ಷದ ಮಹಿಳೆಗೆ ಕಿರುಕುಳ ನೀಡಿದ್ದಕ್ಕಾಗಿ ಚೆನ್ನೈ ಪೊಲೀಸರು ಶನಿವಾರ ಬಂಧಿಸಿದ್ದಾರೆ. ನೆರೆ ಮನೆಯ ಮಹಿಳೆಯ ಬಾಗಿಲಿನ ಬಳಿ ಮೂತ್ರ ವಿಸರ್ಜನೆ ಮತ್ತು ಮನೆಯ ಹೊರಗೆ ಕಸ ಎಸೆಯುವ ಮೂಲಕ ಕಿರುಕುಳ ನೀಡಿದ್ದಕ್ಕಾಗಿ ಅವರ ವಿರುದ್ಧ ಪ್ರಕರಣದ ದಾಖಲಾಗಿತ್ತು.

2020 ರ ಜುಲೈ ತಿಂಗಳಲ್ಲಿ ಸುಬ್ಬಯ್ಯ ಮತ್ತು ಸಂತ್ರಸ್ತೆಯ ನಡುವೆ ಪಾರ್ಕಿಂಗ್ ಸ್ಥಳದ ಬಗ್ಗೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಆಪಾದಿತ ಘಟನೆ ನಡೆದಿತ್ತು. ಆ ಸಮಯದಲ್ಲಿ ಕಿಲ್ಪಾಕ್ ವೈದ್ಯಕೀಯ ಕಾಲೇಜಿನ ಸರ್ಜಿಕಲ್ ಆಂಕೊಲಾಜಿ ವಿಭಾಗದ ಮುಖ್ಯಸ್ಥರೂ ಆಗಿದ್ದ ಸುಬ್ಬಯ್ಯ ಅವರ ಮೇಲೆ 60 ವರ್ಷದ ಸಂತ್ರಸ್ತೆ ಮತ್ತು ಅವರ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಆದಂಬಾಕ್ಕಂ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ: ವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

ದೂರು ಸ್ವೀಕರಿಸಿದರೂ ಪೊಲೀಸರು ಅವರ ವಿರುದ್ದ ಪ್ರಕರಣದ ದಾಖಲಿಸಿರಲಿಲ್ಲ. ನಂತರ ಸಾರ್ವಜನಿಕರ ಆಕ್ರೋಶದ ನಂತರ ಸುಮಾರು ಎರಡು ವಾರಗಳ ನಂತರ ಎಫ್‌ಐಆರ್‌ ದಾಖಲಾಗಿತ್ತು. ಸುಬ್ಬಯ್ಯನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 271 (ಕ್ವಾರಂಟೈನ್ ನಿಯಮಕ್ಕೆ ಅವಿಧೇಯತೆ) ಮತ್ತು ಸೆಕ್ಷನ್ 427 (ಹಾನಿ ಉಂಟುಮಾಡುವ ಕಿಡಿಗೇಡಿತನ) ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆದರೆ, ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಮಹಿಳೆಯ ಕುಟುಂಬದವರು ದೂರು ಹಿಂಪಡೆಯುವುದಾಗಿ ಹೇಳಿದ್ದಾರೆ. ಮಹಿಳೆಯ ಕುಟುಂಬವು ಈ ವಿವಾದವನ್ನು ಮುಂದುವರಿಸದಂತೆ ನೆರೆಹೊರೆಯವರು ಒತ್ತಡ ಹೇರಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ದೂರನ್ನು ಹಿಂಪಡೆದರೂ ಎಫ್‌ಐಆರ್ ದಾಖಲಿಸಿದ ನಂತರ ತನಿಖೆಯನ್ನು ಮುಂದುವರಿಸಬೇಕಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.

ಒಬ್ಬಂಟಿಯಾಗಿ ವಾಸಿಸುತ್ತಿದ್ದ ವಿಧವೆ ಮಹಿಳೆಯು 2020 ಜುಲೈನಲ್ಲಿ, ತನ್ನ ಮನೆಯ ಬಾಗಿಲಿನ ಹೊರಗೆ ಕಸವನ್ನು ಬಿಸಾಡಿರುವುದನ್ನು ಕಂಡಿದ್ದರು. ಅದಕ್ಕಿಂತಲೂ ತುಸು ದಿನಗಳ ಮುಂಚೆ ಅವರು ವಾಹನ ಪಾರ್ಕಿಂಗ್‌ ಸಂಬಂಧಿಸಿದಂತೆ ಜಗಳವಾಡಿದ ಸುಬ್ಬಯ್ಯ ಎಂಬಾತನೇ ಈ ಕೃತ್ಯ ಮಾಡಿದ್ದಾನೆ ಎಂದು ಅನುಮಾನಗೊಂಡು ಮನೆಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರು. ಅದರಲ್ಲಿ ವ್ಯಕ್ತಿಯೊಬ್ಬ ಆಕೆಯ ಮನೆ ಬಾಗಿಲಿನ ಬಳಿ ಮೂತ್ರ ವಿಸರ್ಜನೆ ಮಾಡುತ್ತಿರುವ ದೃಶ್ಯ ಸೆರೆಯಾಗಿದೆ.

ಇದನ್ನೂ ಓದಿ: ಬೆಂಗಳೂರು ವಿವಿ: ಅಂಬೇಡ್ಕರ್‌‌ ಫೋಟೋ ತೆರವು ಖಂಡಿಸಿ ಪ್ರತಿಭಟಿಸುವಾಗ ಎಬಿವಿಪಿ ಹಸ್ತಕ್ಷೇಪ; ಲಾಠಿಚಾರ್ಜ್

ವಿಡಿಯೋದಲ್ಲಿ ಇದರುವುದು ಸುಬ್ಬಯ್ಯ ಎಂದು ಮಹಿಳೆಯ ಮನೆಯವರು ಆರೋಪಿಸಿದ್ದಾರೆ. ಆದರೆ ಸುಬ್ಬಯ್ಯ ಅದನ್ನು ನಿರಾಕರಿಸಿದ್ದು, ವಿಡಿಯೊವನ್ನು ತಿರುಚಲಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಎಬಿವಿಪಿ ನಾಯಕನ ವಿರುದ್ಧ ಕ್ರಮಕ್ಕೆ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಒತ್ತಾಯಿಸುವುದರೊಂದಿಗೆ ಪ್ರಕರಣವು ರಾಜಕೀಯಕ್ಕೆ ತಿರುಗಿತ್ತು. ಸುಬ್ಬಯ್ಯ ಅವರ ರಾಜಕೀಯ ಹಿನ್ನಲೆಯಿಂದಾಗಿ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ ಎಂದು ನ್ಯೂಸ್ ಮಿನಿ‌ಟ್‌ ವರದಿ ಮಾಡಿದೆ.

ಸಂತ್ರಸ್ತೆಯ ಬಾಗಿಲಿನ ಹೊರಗೆ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ

ಪ್ರಕರಣ ನಡೆದು ಕೆಲವು ತಿಂಗಳುಗಳ ನಂತರ, ಅಕ್ಟೋಬರ್ 2020 ರಲ್ಲಿ, ಸುಬ್ಬಯ್ಯ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಮಧುರೈನ ಮಂಡಳಿಯ ಸದಸ್ಯರಾಗಿ ನೇಮಿಸಲಾಗಿತ್ತು. ಆದರೆ ಈ ಕ್ರಮವನ್ನು ವ್ಯಾಪಕವಾಗಿ ಖಂಡಿಸಲಾತಿತ್ತು.

ಈ ನಡುವೆ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸರ್ಕಾರಿ ನೌಕರರ ನಡವಳಿಕೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಿಲ್ಪಾಕ್ ವೈದ್ಯಕೀಯ ಕಾಲೇಜಿನ ಸರ್ಜಿಕಲ್ ಆಂಕೊಲಾಜಿ ವಿಭಾಗದ ಮುಖ್ಯಸ್ಥರಾಗಿದ್ದ ಅವರನ್ನು ಅಮಾನತುಗೊಳಿಸಲಾಗಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಎಬಿವಿಪಿ ಸದಸ್ಯರಿಗೆ ಸಹಾಯ ಮಾಡಿದ್ದಕ್ಕಾಗಿ ಅವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಪ್ರಚಾರಕ್ಕಾಗಿ ರಾಕೇಶ್ ಟಿಕಾಯತ್ ಮೇಲೆ ದಾಳಿ ನಡೆಸಿದ್ದೆವು: ತಪ್ಪೊಪ್ಪಿಕೊಂಡ ಎಬಿವಿಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...