Homeಮುಖಪುಟಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

- Advertisement -
- Advertisement -

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ ಸುಮಾರು 600 ಕುಟುಂಬಗಳ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಗಳು ಹೇಳಿವೆ.

ಗೋಲ್ಪಾರ ಉಪ ಆಯುಕ್ತ ಪ್ರೊದೀಪ್ ತಿಮುಂಗ್ ಮಾಧ್ಯಮಗಳೊಂದಿಗೆ ಮಾತನಾಡಿ, ತೆರವು ಕಾರ್ಯಾಚರಣೆ ಶಾಂತಿಯುತವಾಗಿ ಮುಂದುವರೆದಿದ್ದು, ಎರಡು ವಾರಗಳ ಹಿಂದೆಯೇ ನೋಟಿಸ್‌ಗಳನ್ನು ನೀಡಿ, ನಿವಾಸಿಗಳು ಪ್ರದೇಶವನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

1,140 ಬಿಘಾ ಭೂಮಿಯನ್ನು 580 ಕುಟುಂಬಗಳು ಅತಿಕ್ರಮಣ ಮಾಡಿಕೊಂಡಿದ್ದವು. ಅವರಲ್ಲಿ ಸುಮಾರು 70% ಕುಟುಂಬಗಳು ನೋಟಿಸ್ ಪಡೆದ ನಂತರ ಈಗಾಗಲೇ ಖಾಲಿ ಮಾಡಿದ್ದಾರೆ ಮತ್ತು ಉಳಿದವರು ಸ್ಥಳಾಂತರಗೊಳ್ಳುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ತಿಮುಂಗ್ ಅವರು ಪಿಟಿಐಗೆ ತಿಳಿಸಿದ್ದಾರೆ.

ತೆರವು ಕಾರ್ಯಾಚರಣೆಗೆ ದೊಡ್ಡ ಮಟ್ಟದ ಭದ್ರತಾ ಸಿಬ್ಬಂದಿಯ ತುಕಡಿಯನ್ನು ನಿಯೋಜಿಸಲಾಗಿದೆ. ಬುಲ್ಡೋಝರ್, ಟ್ರ್ಯಾಕ್ಟರ್ ಸೇರಿದಂತೆ ಭಾರೀ ಪ್ರಮಾಣದಲ್ಲಿ ಯಂತ್ರೋಪಕರಣಗಳನ್ನು ಬಳಸಿಕೊಳ್ಳಲಾಗಿದೆ. ಇಡೀ ಪ್ರದೇಶವನ್ನು ಐದು ಬ್ಲಾಕ್‌ಗಳಾಗಿ ವಿಂಗಡಿಸಲಾಗಿದೆ. ಈ ಪೈಕಿ ಒಂದರಲ್ಲಿ ಮಾತ್ರ ಪ್ರತಿರೋಧ ವರದಿಯಾಗಿದೆ. ದಿನಾಂತ್ಯದ ವೇಳೆಗೆ ಕಾರ್ಯಾಚರಣೆ ಪೂರ್ಣಗೊಳಿಸುವ ನಿರೀಕ್ಷೆಯಿದೆ ಎಂದು ತಿಮುಂಗ್ ಹೇಳಿದ್ದಾರೆ.

ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಹಲವಾರು ಅರ್ಜಿಗಳನ್ನು ಈ ಹಿಂದೆ ಗುವಾಹಟಿ ಹೈಕೋರ್ಟ್ ವಿಚಾರಣೆ ನಡೆಸಿದೆ. ಹೈಕೋರ್ಟ್‌ನ ನಿರ್ದೇಶನಗಳಿಗೆ ಅನುಗುಣವಾಗಿ ತೆರವು ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಮುಂಗ್ ತಿಳಿಸಿದ್ದಾರೆ.

ತೆರವು ಕಾರ್ಯಾಚರಣೆಯಿಂದ ಮನೆಗಳನ್ನು ಕಳೆದುಕೊಳ್ಳಲಿರುವ ಹೆಚ್ಚಿನ ಜನರು ಬಂಗಾಳಿ ಮಾತನಾಡುವ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂದು ಅಧಿಕಾರಿಗಳು ಹೇಳಿದ್ದಾಗಿ ವರದಿಯಾಗಿದೆ.

2021ರಲ್ಲಿ ಹಿಮಂತ್ ಬಿಸ್ವಾ ಶರ್ಮಾ ಅಸ್ಸಾಂ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡ ಬಳಿಕ, ಅತಿಕ್ರಮಣ ತೆರವು ಹೆಸರಿನಲ್ಲಿ ಜನರ ಮನೆಗಳನ್ನು ಧ್ವಂಸಗೊಳಿಸುವ ಕಾರ್ಯಾಚರಣೆ ಸರಣಿಯಾಗಿ ನಡೆಯುತ್ತಿವೆ. ಈ ಕಾರ್ಯಾಚರಣೆಗಳಲ್ಲಿ ಹೆಚ್ಚಾಗಿ ಬಂಗಾಳಿ ಮಾತನಾಡುವ ಮುಸ್ಲಿಮರು ತಮ್ಮ ನೆಲೆ ಕಳೆದುಕೊಂಡಿದ್ದಾರೆ.

“ನಮ್ಮ ಆಡಳಿತದಲ್ಲಿ ಅಕ್ರಮ ಮಿಯಾಗಳು (ಮಿಯಾ ಮುಸ್ಲಿಮರು) ಶಾಂತಿ ಕಂಡುಕೊಳ್ಳಲು ಸಾಧ್ಯವಿಲ್ಲ. ತೆರವು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಸಿಎಂ ಶರ್ಮಾ ಇತ್ತೀಚೆಗೆ ಹೇಳಿದ್ದರು.

ಮೂಲತಃ ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರಿಗೆ ನಿಂದನೆಯಾಗಿ ಬಳಸಲಾಗುತ್ತಿದ್ದ ಮಿಯಾ ಎಂಬ ಪದವನ್ನು ಇತ್ತೀಚಿನ ವರ್ಷಗಳಲ್ಲಿ ಆ ಸಮುದಾಯದ ಗುರುತಾಗಿ ಮಾರ್ಪಟ್ಟಿದೆ. ಈ ಮಿಯಾ ಮುಸ್ಲಿಮರನ್ನು ಸಿಎಂ ಶರ್ಮಾ ನೇರವಾಗಿ ಗುರಿಯಾಗಿಸಿಕೊಂಡಿದ್ದಾರೆ ಎಂಬ ಆರೋಪಗಳಿವೆ.

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...