Homeಕರ್ನಾಟಕಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ?

- Advertisement -
- Advertisement -

ಈ ವರೆಗೆ ಪಿಎಂ‌ ಕೇರ್ಸ್‌ಗೆ ಸುಮಾರು ರೂ.60,000 ಕೋಟಿ ಸಂಗ್ರಹವಾಗಿದೆ. ಇದು ಜನರ ದೇಣಿಗೆ, ಈ ಹಣದ ಬಗ್ಗೆ ಸರ್ಕಾರ ಜನರಿಗೆ ಲೆಕ್ಕ ಕೊಡಬೇಕಲ್ಲವೇ ಎಂದು ಕರ್ನಾಟಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ಎಷ್ಟು ಹಣ ಬಂದಿದೆ ಎಂದು ರಾಜ್ಯ ಸರ್ಕಾರವೂ ಜನರಿಗೆ ಹೇಳಬೇಕು. ಈ ಕಾರಣಕ್ಕಾಗಿಯೇ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ನಾನು ಒತ್ತಾಯಿಸಿದ್ದು. ಮೆಡಿಕಲ್ ಸಾಮಗ್ರಿಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಮಾರುಕಟ್ಟೆ ದರಕ್ಕಿಂತ ಎರಡು ಪಟ್ಟು ಹೆಚ್ಚಿಗೆ ಪಾವತಿಸಿ ಖರೀದಿಸಲಾಗಿದೆ. ಇದಕ್ಕೆ ಸಮರ್ಥನೆಗಳಿಲ್ಲ ಎಂದು ಆರ್ಥಿಕ ಇಲಾಖೆ ಟಿಪ್ಪಣಿ ಇದೆ. ಈ ಪ್ರಕರಣದಲ್ಲಿ ಸುಮಾರು ರೂ.2,200 ಕೋಟಿ ಅವ್ಯವಹಾರ ನಡೆದಿದೆ ಆರೋಪ ಕೇಳಿಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಾರ್ಚ್ 24 ಕ್ಕೆ ಮುಂಚೆ ವಿಶ್ವದಲ್ಲಿ 4 ಲಕ್ಷದ 25 ಸಾವಿರ ಸಕ್ರಿಯ ಕೊರೊನಾ ಪ್ರಕರಣಗಳಿದ್ದವು, ಸುಮಾರು 19,000 ಮಂದಿ ಸಾವಿಗೀಡಾಗಿದ್ದರು.‌ ಆಗ ಭಾರತದಲ್ಲಿ 536 ಮಂದಿಗೆ ಕೊರೊನಾ ದೃಢಪಟ್ಟಿತ್ತು ಮತ್ತು 10 ಜನ ಕೊರೊನಾದಿಂದ ಸಾವಿಗೀಡಾಗಿದ್ದರು. ಆದರೆ ಈಗ ಭಾರತ ಕೊರೊನಾ ಸೋಂಕಿನಲ್ಲಿ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ. ಮಾರ್ಚ್‌ನಿಂದ ಈ ವರೆಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಾಕಷ್ಟು ಸಮಯವಿದ್ದಾಗ್ಯೂ ಕೊರೊನಾ ವ್ಯಾಪಕವಾಗಿ ಹರಡಿದೆ. ಇದಕ್ಕೆ ಎರಡೂ ಸರ್ಕಾರಗಳ ನಿರ್ಲಕ್ಷ್ಯ ಮತ್ತು ತಪ್ಪು ನಿರ್ಧಾರಗಳೇ ಕಾರಣ ಎಂದು ಅವರು ದೂರಿದ್ದಾರೆ.

ವಿಶ್ವದ ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸುತ್ತಿರುವ ಜನರ ಪ್ರಮಾಣ ತುಂಬಾ ಕಡಿಮೆಯಿದೆ. ಅಮೆರಿಕಾದಲ್ಲಿ ಪ್ರತಿ 10 ಲಕ್ಷ ಮಂದಿಗೆ 1 ಲಕ್ಷ ಜನರನ್ನು, ಇಟಲಿಯಲ್ಲಿ 90 ಸಾವಿರ, ಇಂಗ್ಲೆಂಡ್‌ನಲ್ಲಿ 75 ಸಾವಿರ ಜನರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಭಾರತದಲ್ಲಿ ಪ್ರತಿ 10 ಲಕ್ಷ ಮಂದಿಗೆ 6,943 ಜನರನ್ನು, ಕರ್ನಾಟಕದಲ್ಲಿ 9,741 ಜನರನ್ನು ಪರೀಕ್ಷೆ ಒಳಪಡಿಸಲಾಗುತ್ತಿದೆ. ಇದರಿಂದ ಸೋಂಕಿತರ ಪತ್ತೆ ವಿಳಂಬವಾಗಿ ಸೋಂಕು ಇನ್ನಷ್ಟು ವ್ಯಾಪಕವಾಗಿ ಹರಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ನಿಯಂತ್ರಣದಲ್ಲಿ ಭಾರತ ನಂ.1 ಎನ್ನುತ್ತಿದ್ದರು, ಇತರೆ ದೇಶಗಳೊಂದಿಗೆ ಎಲ್ಲಿದೆ ಸಾಮ್ಯತೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಮೊನ್ನೆ ಬಳ್ಳಾರಿಯಲ್ಲಿ ಕೊರೊನಾದಿಂದ ಮೃತಪಟ್ಟ ನಾಲ್ವರ ಶವಗಳನ್ನು ಅಮಾನವೀಯವಾಗಿ ಒಂದೇ ಗುಂಡಿಯಲ್ಲಿ ಶವ ಸಂಸ್ಕಾರ ಮಾಡಲಾಯಿತು. ಆರೋಗ್ಯ ಸಚಿವರ ಜಿಲ್ಲೆಯಲ್ಲೇ ಇಷ್ಟು ನಿರ್ಲಕ್ಷ್ಯವಾದರೆ ಹೇಗೆ? ಇಷ್ಟು ದಿನಗಳಾದರೂ ಸರ್ಕಾರ ಶವ ಸಂಸ್ಕಾರಕ್ಕೆ ಕನಿಷ್ಠ ಒಂದು ನಿಯಮ ರೂಪಿಸದೆ ಇರುವುದು ದುರಾದೃಷ್ಟದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ತುಮಕೂರಿನ ಮಹಿಳೆಯೊಬ್ಬರು ಕೊರೊನಾ ಚಿಕಿತ್ಸೆಗೆ ಹಾಸಿಗೆ ಸಿಗದೆ ನಾಲ್ಕೈದು ಗಂಟೆ ಒದ್ದಾಡಿದ್ದಾರೆ. ಮಾಧ್ಯಮಗಳಲ್ಲಿ ಈ ಸುದ್ದಿ ನೋಡಿ ದುಃಖವಾಯಿತು. ಕೊರೊನಾ ಸೋಂಕು ಕಂಡುಬಂದು 3 ತಿಂಗಳಾಯಿತು, ಇನ್ನೂ ಅಗತ್ಯ ಪ್ರಮಾಣದ ಹಾಸಿಗೆಗಳು ಲಭ್ಯವಿಲ್ಲ. ರಾಜ್ಯದಲ್ಲಿ ಸರ್ಕಾರ ಇನ್ನೂ ಜೀವಂತವಾಗಿದೆಯೇ ಎಂದು ಕೇಳಿದ್ದಾರೆ.

ಸರ್ಕಾರವೇ ನೀಡಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕಿತರ ಚಿಕಿತ್ಸೆಗೆ ಲಭ್ಯವಿರುವ ಒಟ್ಟು ಹಾಸಿಗೆಗಳ ಪ್ರಮಾಣ 4,663, ಇದರಲ್ಲಿ 2,694 ಹಾಸಿಗೆಗಳು ಬಳಕೆಯಾಗುತ್ತಿದ್ದು, 1,969 ಹಾಸಿಗೆಗಳು ಲಭ್ಯವಿದೆಯಂತೆ. ನನ್ನ ಪ್ರಕಾರ ಈ ವೇಳೆಗೆ ರಾಜ್ಯದಲ್ಲಿ ಕನಿಷ್ಠ 30,000 ಹಾಸಿಗೆಗಳು ಲಭ್ಯವಿರಬೇಕಿತ್ತು. ನಮ್ಮ ರಾಜ್ಯದಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳೇ 6000ಕ್ಕೂ ಹೆಚ್ಚಿದೆ, ಬೆಂಗಳೂರು ನಗರವೊಂದರಲ್ಲೇ ನಿತ್ಯ 900 ಹೊಸ ಪ್ರಕರಣಗಳು ದಾಖಲಾಗುತ್ತಿವೆ. ಮುಂದಿನ ಎರಡು ದಿನಗಳಲ್ಲಿ ರಾಜ್ಯದ ಎಲ್ಲಾ ಕೊರೊನಾ ಚಿಕಿತ್ಸಾ ಕೇಂದ್ರಗಳ ಹಾಸಿಗೆಗಳು ಭರ್ತಿಯಾದರೆ ಉಳಿದವರ ಗತಿಯೇನು ಎಂದು ಅವರು ಪ್ರಶ್ನಿಸಿದ್ದಾರೆ.

ಮಣಿಪಾಲ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ. ಸುದರ್ಶನ್ ಬಲ್ಲಾಳ್ ಅವರು ಮುಂದಿನ ಒಂದೂವರೆ ತಿಂಗಳಿನಲ್ಲಿ ಬೆಂಗಳೂರು ನಗರವೊಂದರಲ್ಲೇ 40,000 ಜನ ಸೋಂಕಿಗೆ ಒಳಗಾಗಲಿದ್ದಾರೆ ಎಂದಿದ್ದಾರೆ. ಈ ರೀತಿ ಹಿಂದೆಯೂ ಹಲವು ತಜ್ಞರು ಎಚ್ಚರಿಕೆ ನೀಡಿದ್ದರ ಹೊರತಾಗಿಯೂ ಸರ್ಕಾರ ಯಾರ ಮಾತನ್ನು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿನಿತ್ಯ ಕೊರೊನಾ ಸೋಂಕಿತರಿಗೆ ಅಗತ್ಯ ಪ್ರಮಾಣದ ಆಹಾರ, ಔಷಧಿ, ವೆಂಟಿಲೇಟರ್ ಮತ್ತು ಹಾಸಿಗೆ ಸೌಲಭ್ಯ ಸಿಗುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ವಸ್ತುನಿಷ್ಠ ಸುದ್ದಿ ಪ್ರಸಾರ ಮಾಡುತ್ತಿರುವ ಮಾಧ್ಯಮ ಮಿತ್ರರಿಗೆ ನನ್ನ ಧನ್ಯವಾದಗಳು. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ಸಮರೋಪಾದಿಯಲ್ಲಿ ಕೆಲಸ ಮಾಡಲಿ ಎಂದು ಒತ್ತಾಯಿಸಿದ್ದಾರೆ.


ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...