ಬೆಂಗಳೂರು: ದೇವಸ್ಥಾನದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅರ್ಚಕ
PC: New Indian Express

ಬೆಂಗಳೂರಿನ ಉತ್ತರದ ಹೊರವಲಯದಲ್ಲಿರುವ ದೇವನಹಳ್ಳಿಯಲ್ಲಿ ದೇವಾಲಯದ ಬಳಿ ಆಟವಾಡುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಅರ್ಚಕ ಅತ್ಯಾಚಾರ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಅರ್ಚಕನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ದೇವನಹಳ್ಳಿ ಸಮೀಪದ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಗಟನೆ ನಡೆದಿದ್ದು, ಅತ್ಯಾಚಾರ ಎಸಗಿರುವ ಆರೋಪಿ 62 ವರ್ಷದ ಅರ್ಚಕ ವೆಂಕಟರಮಣಪ್ಪನನ್ನು ದೇವನಹಳ್ಳಿ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅರ್ಚಕ ವೆಂಕಟರಮಣಪ್ಪ ತನ್ನ ಪತ್ನಿಯೊಂದಿಗೆ ಚಿಕ್ಕಬಳ್ಳಾಪುರದಲ್ಲಿ ವಾಸಿಸುತ್ತಿದ್ದಾರೆ. ಅವರ ಇಬ್ಬರು ಹೆಣ್ಣುಮಕ್ಕಳನ್ನು ದೇವಾಲಯದ ಅರ್ಚಕರಿಗೆ ಕೊಟ್ಟು ಮದುವೆ ಮಾಡಲಾಗಿದೆ. ಅದರಲ್ಲಿ ಒಬ್ಬ ಮಗಳು ದೇವನಹಳ್ಳಿಯಲ್ಲಿ ಮತ್ತು ಇನ್ನೊಬ್ಬರು ಯಲಹಂಕದಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಒಡಿಶಾ ಅಸೆಂಬ್ಲಿ ಮುಂದೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಪೋಷಕರು!

ಆರೋಪಿ ವೆಂಕಟರಮಣಪ್ಪ ಅವರ ಅಳಿಯ, ಚೌಡೇಶ್ವರಿ ದೇವಸ್ಥಾನದ ಅರ್ಚಕರಾಗಿದ್ದು, ಘಟನೆ ನಡೆದಾಗ ನಗರದಿಂದ ಹೊರಗೆ ಹೋಗಿದ್ದರು. ಹೀಗಾಗಿ ಆರೋಪಿ ವೆಂಕಟರಮಣಪ್ಪ ಚೌಡೇಶ್ವರಿ ದೇವಸ್ಥಾನದ ಅರ್ಚಕರಾಗಿ ದಿನನಿತ್ಯದ ಆಚರಣೆಗಳನ್ನು ನಡೆಸುತ್ತಿದ್ದರು.

ಕಳೆದ ಮಂಗಳವಾರ ಸಂಜೆ 4.30ರ ಸುಮಾರಿಗೆ ದೇವಸ್ಥಾನದ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು  ವೆಂಕಟರಮಣಪ್ಪ ಸಿಹಿತಿಂಡಿಗಳನ್ನು ನೀಡುವ ನೆಪದಲ್ಲಿ ತಮ್ಮ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಸಿ.ಕೆ. ಬಾಬಾ ತಿಳಿಸಿದ್ದಾರೆ ಎಂದು ಡೆಕನ್ ಹೆರಾಲ್ಡ್ ವರದಿ ಮಾಡಿದೆ.

ಮಗಳು ಮನೆಗೆ ಹಿಂತಿಗದನ್ನು ಕಂಡು ಪೋಷಕರು ವಿಚಾರಿಸಿದಾಗ, ಹೂ ಮಾರುವ ಮಹಿಳೆ, ಬಾಲಕಿ ಅರ್ಚಕರ ಮನೆಗೆ ಹೊಗುವುದನ್ನು ನೋಡಿದ್ದನ್ನು ತಿಳಿಸಿದ್ದಾರೆ. ಅಲ್ಲಿ ಹೋಗಿ ನೋಡಿದಾಗ ಬಾಲಕಿ ಅಳುವ ಧ್ವನಿ ಕೇಳಿಸಿದೆ. ನಂತರ ಜನಸಮೂಹ ಗುಂಪುಗೂಡು, ಪೊಲೀಸರನ್ನು ಕರೆಸಿ ಆರೋಪಿಯನ್ನು ಬಂಧಿಸಲಾಗಿದೆ. ಸದ್ಯ ಬಾಲಕಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಪೋಲಿಸರು ವಿವರಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಮತ್ತು ಹೂ ಮಾರಾಟಗಾರರ ಹೇಳಿಕೆಯ ಆಧಾರದ ಮೇಲೆ ಪೊಲೀಸರು ವೆಂಕಟರಮಣಪ್ಪ ಅವರನ್ನು ಬಂಧಿಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿ ಆತನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತಿಚೆಗೆ,  ‘ಎ ಸೂಟಬಲ್ ಬಾಯ್’ ಎನ್ನುವ ವೆಬ್ ಸೀರೀಸ್‌ನಲ್ಲಿ ದೇವಸ್ಥಾನದಲ್ಲಿ ಚುಂಬನದ ದೃಶ್ಯವಿದೆ ಎಂಬ ಕಾರಣಕ್ಕೆ “ಬಾಯ್ಕಾಟ್ ನೆಟ್‌ಫ್ಲಿಕ್ಸ್”‌ ಎನ್ನಲಾಗಿತ್ತು. ಆದರೆ ದೇವಾಲಯಗಳಲ್ಲಿ ನಡೆಯುವ ಅತ್ಯಾಚಾರ ಪ್ರಕರಣಗಳಿಗೆ ಯಾರು ತಲೆಕೆಡಿಸಿಕೊಳ್ಳುವುದಿಲ್ಲ, ಅಂತಹ ಘಟನೆಗಳ ಬಗ್ಗೆ ಯಾರು ತುಟಿ ಬಿಚ್ಚುವುದಿಲ್ಲ. ಸರ್ಕಾರ ಕೂಡ ಇಂತಹ ಪ್ರರಕರಣಗಳ ಬಗ್ಗೆ ಗಮನ ಹರಿಸುವುದಿಲ್ಲ ಸಾಮಾಜಿಕ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳ ಬಂಧನ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here